ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿ ಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ.ಪೆರಮೊಗರಿನ ಕೋಳಿ ಅಂಗಡಿಯ ಸೋಮಶೇಖರ್ ರೈ ಮೃತಪಟ್ಟವರು.ಇವರು ಮೂಲತ: ಸವಣೂರು ಪುಣ್ಚಪ್ಪಾಡಿ ನಿವಾಸಿಯಾಗಿದ್ದು ಸದ್ಯ ಪೆರಮೊಗರಿನಲ್ಲಿ ವಾಸವಾಗಿದ್ದರು .
ಪುತ್ತೂರು: ದೇಶದ ಜನರ ಸೇವೆ ಮತ್ತು ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಹಾಗಾಗಿ ಬಿಜೆಪಿಯ ಕಾರ್ಯಕರ್ತರಿಗೆ ರಾಜಕಾರಣ ವೃತ್ತಿಯಲ್ಲ, ಅದೊಂದು ವೃತವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕಲ ಅನಾವರಣ ಕಾರ್ಯಕ್ರಮಗಳು ಈಗಾಗಲೇ ನಡೆಯುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲದ ಬೂತ್ ಅಧ್ಯಕ್ಷರ ಮನೆಗಳಿಗೆ
ಕಡಬ: ಸಾರ್ವಜನಿಕರಿಗೆ ನಿಷ್ಪಕ್ಷಪಾತ ಸೇವೆ ನೀಡುವುದೇ ಅಧಿಕಾರಿಗಳ ಕೆಲಸ, ಯಾವುದೇ ಕಾರಣಕ್ಕೆ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್‌ನ ದ.ಕ. ಜಿಲ್ಲಾ ಉಪ ಅಧೀಕ್ಷಕ ಚೆಲುವರಾಜು ಅವರು ಹೇಳಿದರು ಅವರು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಪೋಲಿಸರಿಂದ ನಡೆದ ಅರಿವು ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಭ್ರಷ್ಟಚಾರ ರಹಿತ ಕೆಲಸ ಮಾಡಬೇಕು, ಲಂಚ
ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ ಹಾಡಬೇಕೆಂಬ ನಿರ್ದೇಶನದಂತೆ ಪುತ್ತೂರು ಮಿನಿ ವಿಧಾನ ಸೌಧ ಸಭಾಂಗಣ ದಲ್ಲಿ ಲಕ್ಷ ಕಂಠಗಳ ಗೀತ ಗಾಯನ
ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2010ರಲ್ಲಿ ಪೂರೈಸಿ ಬಳಿಕ ಎಂಬಿಬಿಎಸ್ ಪದವಿಯನ್ನು ಹಾಸನ ಮೆಡಿಕಲ್ ಕಾಲೇಜಿನಲ್ಲಿ ಪಡೆದು ಎಂ.ಡಿ ಪೀಡಿಯಾಟ್ರಿಕ್ಸ್ ನ್ನು
ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣರಾದ ಆರೋಪ ಎದುರಿಸುತ್ತಿರುವ ಕುದ್ಕಾಡಿ ನಾರಾಯಣ ರೈಯವರನ್ನು ವಿಚಾರಣೆಗಾಗಿ ಪುತ್ತೂರು ಸೆಷೆನ್ಸ್ ನ್ಯಾಯಾಲಯ ಎರಡು ದಿನ ಪೊಲೀಸ್ರ ವಶಕ್ಕೆ ಒಪ್ಪಿಸಿ ಆದೇಶಿಸಿತ್ತು. ಆದೇಶದ ಬೆನ್ನಲ್ಲೆ ಅನಾರೋಗ್ಯದ ಹಿನ್ನಲೆಯಲ್ಲಿ ನ್ಯಾಯಾಲಯದ ಅನುಮತಿಯೊಂದಿಗೆ ನಾರಾಯಣ ರೈ ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಪುತ್ತೂರು : ಪುತ್ತೂರು ತಾಲೂಕಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿ ಎಂದು ಬಾಲಕಿ ಹೆಸರಿಸಿರುವ ಕುದ್ಕಾಡಿ ನಾರಾಯಣ ರೈ ಯವರು ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾರೆ.ನಾರಾಯಣ ರೈ ಯವರು ತನ್ನ ಪರ ವಕೀಲರಾದ ಮಹೇಶ್ ಕಜೆಯವರ ಜತೆ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಶರಣರಾದರು. ಬಡಗನ್ನೂರಿನ 17ರ ಹರೆಯದ ಅಪ್ರಾಪ್ತ ದಲಿತ ಸಮುದಾಯದ ಬಾಲಕಿಯು ಸೆ.5 ರಂದು ಮಗುವಿಗೆ ಜನ್ಮ
ಪುತ್ತೂರು: ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ಸೌಲಭ್ಯ ಪಾವತಿ ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವ ಕೆಎಸ್‍ಆರ್‍ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ವಿರುದ್ದ ಅಮರಣಾಂತ ಉಪವಾಸ ನಿರತರಾಗಿದ್ದ ಪುತ್ತೂರು ವಿಭಾಗ ಕೆಎಸ್‍ಆರ್‍ಟಿಸಿ ಮಜ್ದೂರ್ ಸಂಘದ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಮಂಗಳವಾರ ರಾತ್ರಿ ನಡೆಸಿದ ಮಾತುಕತೆ ಪರಿಣಾಮ ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಈ ಮೂಲಕ ಸಚಿವ ಅಂಗಾರ ಅಮರಣಾಂತ ಉಪವಾಸ ನಿರತರ
ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೈಹಿಕ ಶಿಕ್ಷಣ


















