ಉಪ್ಪಿನಂಗಡಿ: ಅತೀ ವೇಗದಿಂದ ಬಸ್ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್‌ನಡಿಗೆ ಸಿಲುಕಿ ತಾಯಿ ಹಾಗೂ ಆಕೆಯ ಒಂದು ವರ್ಷದ ಪುತ್ರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತಪಟ್ಟ ದುರ್ದೈವಿಗಳು.
ಪುತ್ತೂರು: ಒಬ್ಬ ವ್ಯಕ್ತಿ ಹುಟ್ಡುವುದಕ್ಕೂ ಮೊದಲು ಮತ್ತು ಸತ್ತ ನಂತರವು ಕಾನೂನು ಆತನ ಜೊತೆ ಇರುತ್ತದೆ. ಅಂದರೆ ಕಾನೂನು ಗರ್ಭದಿಂದ ಗೋರಿಯ ತನಕ ಇರುತ್ತದೆ ಎಂದಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಮೇಶ್ ಎಮ್ ಅವರು ಹೇಳಿದರು. ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪುತ್ತೂರು ರಾಜ್ಯ ಅಬಕಾರಿ
ವಿಟ್ಲ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದ ಮನೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು ನಿಶ್ಮಿತಾ(22) ಎಂದು ಗುರುತಿಸಲಾಗಿದೆ.ನಿಶ್ಮಿತಾ ರವರು ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಅ.11 ರಂದು
ಪುತ್ತೂರಿನ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು ಗುರುತಿಸಲಾಗಿದೆ. ಅಝೀಝ್ ಅವರು ಇಂದು ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು, ಮತಾಂದ ಜಿಹಾದಿಗಳಿಂದ ಆಗುತ್ತಿರುವ ದೌರ್ಜನ್ಯವನ್ನು ಇಡೀ ದೇಶದ ಹಿಂದೂ ಸಂಘಟನೆಗಳು
ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು, ಬಜರಂಗದಳ ಪ್ರಾಂತ ಸಹ ಸಂಯೋಜಕ್
ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ. ಕಾನೂನು ಸಮ್ಮತ ವಿಚಾರದಲ್ಲಿ ಕಾರ್ಮಿಕರಿಗೆ ಈಗ ಆಗಿರುವ ಅನ್ಯಾಯವನ್ನು ವಿರೋಧಿಸಿ ಅ. 21ರಿಂದ ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗ ಕಚೇರಿಯ ಮುಂದೆ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು
ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ ಮನೆಯಲ್ಲಿ ಈ ಘಟನೆ ನಡೆದಿದ್ದು ರಾಘವ, ಅವರ ತಾಯಿ ಹೊನ್ನಮ್ಮ, ಪತ್ನಿ ಲತಾ, ಪುತ್ರಿ ತೃಷಾ, ಸಹೋದರಿ ಬೇಬಿ, ಬಾವಂದಿರಾದ ದೇವಪ್ಪ, ಕೇಶವ, ರಾಘವರವರ ಸಹೋದರಿಯರ ಮಕ್ಕಳಾದ ಸುದೇಶ್, ಧನುಷ್ ಹಾಗೂ ಅರ್ಚನಾ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು ಅ. 8ರಂದು ಬೆಳಗ್ಗೆ 1೦ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ಶ್ರೀ ದೇವಾಲಯದ ಆಡಳಿತ
ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ ಯುವಜನತೆ ಹಿಂದೆ ಬೀಳುತ್ತಿದೆ. ಸಮಗ್ರಭಾರತವನ್ನು ಸದೃಢವಾಗಿ ಕಟ್ಟುವಲ್ಲಿ ಯವಜನರ ಪಾತ್ರ


















