ಉಪ್ಪಿನಂಗಡಿ: ಹಳೇಗೇಟು ಬಳಿ ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಸಿ ಮೀನು ಮಾರಾಟದ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಸೆ. 6ರಂದು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಯಿತು. ಬೆಂಕಿ ಹಚ್ಚಿರುವ ಘಟನೆ ಖಂಡಿಸಿ ಹಿಂದೆ ರಾಸ್ತಾರೋಕೋ ನಡೆಸಲಾಗಿತ್ತು.
ಬಂಟ್ವಾಳ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬರನ್ನು ಯಾವುದೇ ಝೀರೋ ಟ್ರಾಫಿಕ್ ಇಲ್ಲದೆ ಕೇವಲ ಇಂಡಿಕೇಟರ್ ಹಾಕುವ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಮಾರು 19 ಕಿ.ಮೀ. ದೂರವನ್ನು ಕೇವಲ 8.5 ನಿಮಿಷದಲ್ಲಿ ತಲುಪಿಸಿದ ಮಾಣಿಯ ಯುವಕ ಮಂಡಲ ಸದಸ್ಯರೂ ಆಗಿರುವ ಯುವ ಕಾಂಗ್ರೆಸ್ ವಲಯಾಧ್ಯಕ್ಷ ವಿಕೇಶ್ ಶೆಟ್ಟಿ ಅವರ ಕಾರ್ಯ ಈಗ ಪ್ರಶಂಸೆಗೆ ಪಾತ್ರವಾಗಿದೆ. ಗುರುವಾರ ರಾತ್ರಿ ಮಾಣಿ ಸಮೀಪ ಬುಡೋಳಿಯ ಯುವತಿಯೊಬ್ಬರು ಉಸಿರಾಟದ ತೊಂದರೆಯನ್ನು
ಕೇರಳ ಗಡಿಭಾಗವನ್ನು ಹಂಚಿಕೊಂಡಿರುವಂತಹ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 16 ಹಾಗೂ 17 ರ ಆಸುಪಾಸಿನಲ್ಲಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಹೇಳಿದರು. ಅವರು ಪುತ್ತೂರಿನ ತಮ್ಮ ಕಚೇರಿಯಲ್ಲಿ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವಿಟಿ ರೇಟ್ ಕಡಿಮೆಯಾಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫೂ ಹೇರಲಾಗಿದೆ. ಆದರೆ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಇದೀಗ ವರ್ತಕರ ಸಂಘ ವಿರೋಧ ವ್ಯಕ್ತಪಡಿಸಲಾರಂಭಿಸಿದೆ. ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಪೇಟೆಗಳಲ್ಲಿ ಈ ವಾರ ವೀಕಂಡ್ ಕರ್ಫೂ ನಲ್ಲಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ತೆರೆದಿಟ್ಟು, ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವ ನಿರ್ಧಾರಕ್ಕೆ
ಪುತ್ತೂರು: ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಜುರುಪಾದೆಯ ಅಬ್ದುಲ್ ಮಜೀದ್, ಪಂಜ ಎಣ್ಮೂರಿನ ಪಾರೂಕ್ ಅವರನ್ನು ಸೆ.1ರಂದು ತಡ ರಾತ್ರಿಯೇ ಪೊಲೀಸರು ಬಂಧಿಸಿದ್ದರು. ಉಳಿದಂತೆ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದ ಪೊಲೀಸರು ಇದೀಗ ಇನ್ನೋರ್ವ ಆರೋಪಿ ಅಲೆಬಿ ಎಂಬವರನ್ನು
ವಿಟ್ಲ: ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮದರಸದಲ್ಲಿ ತಾಲಿಬಾನಿಗಳನ್ನು, ಭಯೋತ್ಪಾದಕರನ್ನು ಸೃಷ್ಟಿ ಮಾಡ್ತಾರೆ ಎಂದು ಹೇಳಿಕೆ ನೀಡಿರುವುದನ್ನು ನಾವು ಖಂಡಿಸುತ್ತೇವೆ ತಕ್ಷಣವೇ ಅವರು ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರು ಆಗ್ರಹಿಸಿದರು. ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಟಿ ರವಿ ಅಲ್ಲ ಅವರು ಕೋಟಿ ರವಿಯಾಗಿದ್ದು, ನಮ್ಮ ಮದರಸ ಇಸ್ಲಾಂ ಧರ್ಮದ ದೀನಿನಚೌಕಟ್ಟಿನ ಒಳಗೆ
ಉಪ್ಪಿನಂಗಡಿ: ಕಡಬ ತಾಲೂಕಿನ ಆಲಂಕಾರು ಸಮೀಪ ಪೊಲೀಸರು ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಕಾಲರ್ ಪಟ್ಟಿ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕಡಬ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಪೇಟೆ ಸಮೀಪ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಮಯದಲ್ಲಿ ತನ್ನ ಮಕ್ಕಳೊಂದಿಗೆ ವ್ಯಕ್ತಿಯೊಬ್ಬ ದಾರಿಯಲ್ಲಿ ಬಂದಿದ್ದು, ಮಕ್ಕಳು ಮಾಸ್ಕ್ ಧರಿಸಿರಲಿಲ್ಲ
ಪುತ್ತೂರು: ಸ್ವಚ್ಚ ಪುತ್ತೂರು, ಸುಂದರ ಪುತ್ತೂರಿಗೆ ಆದತ್ಯೆಯ ಗುರಿ ಹೊಂದಿರುವ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ 57 ನೇ ಹುಟ್ಟು ಹಬ್ಬದ ಅಂಗವಾಗಿ ನಗರಸಭೆ ಪೌರ ಕಾರ್ಮಿಕರು ತಮ್ಮ ಕಾಯಕಕ್ಕೆ ಹೊರಡುವ ಮುಂದೆ ನಗರಸಭೆ ಅಧ್ಯಕ್ಷರಿಗೆ ಹೂ ಗುಚ್ಚಗಳನ್ನು ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರೊಂದಿಗೆ ಚಹಾ ಸವಿದು, ಉಪಹಾರ ಮಾಡಿದರು. ನಗರಸಭೆ ಅಧ್ಯಕ್ಷರು ಪ್ರತಿ ದಿನ ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ಒಂದು
ಪುತ್ತೂರು; ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ದುರಸ್ಥಿ ಕೆಲಸ ಮಾಡುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಪಟ್ಟ ಓರ್ವನನ್ನು ಮಧು (36) ಎಂದು ಹೇಳಲಾಗಿದೆ. ಈತ ಶಿವಮೊಗ್ಗ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಮೆಕಾನಿಕ್ ಆಗಿರುವ
ಪುತ್ತೂರು: ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿದ್ದ ಡಾ.ಸಂದೀಪ್ ಕುಮಾರ್ ಬೋರ್ಕರ್(51) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೂಲತಃ ಉಡುಪಿ ಜಿಲ್ಲೆಯ ಶಿರ್ವ ಮಂಚಕಲ್ಲು ನಿವಾಸಿಯಾದ ಅವರು ಕಳೆದ ಸುಮಾರು 20 ವರ್ಷಗಳಿಂದ ಪುತ್ತೂರಿನಲ್ಲಿ ಹೆಸರಾಂತ ಪ್ರಸೂತಿ ತಜ್ಜರಾಗಿ ಸೇವೆ ಸಲ್ಲಿಸುತ್ತಿದ್ಸು, ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಇವರು ಹಿಂದೆ ಮಂಗಳೂರಿನ


















