ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಪಕ್ಕದ ಕೇರಳದ ಗ್ರಾಮಸ್ಥರು ಬಂದು ಕೋವಿಡ್ ಲಸಿಕೆ ಪಡೆದುಕೊಳ್ಳಲು ಅವಕಾಶವಿಲ್ಲ. ನಮ್ಮ ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಲಸಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸ್ಪಷ್ಟ ನಿರ್ದೇಶನ ನೀಡಿದರು. ಪುತ್ತೂರು ತಾಲೂಕಿನ ಗಡಿ ಗ್ರಾಮವಾದ ನೆಟ್ಟಣಿಗೆ ಮುಡ್ನೂರು ಪ್ರಾಥಮಿಕ ಆರೋಗ್ಯ
ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದರು. ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ನಗರ ಸಭೆ
ಪುತ್ತೂರು: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ನಡೆದಿದೆ. ಗ್ರಾಮ ಪಂಚಾಯತ್ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಮಾಣಿಲ ಗ್ರಾಮದ ಕೊಡಂದೂರು ನಿವಾಸಿ ವಿಜಯ ಕುಮಾರ್ ಕ್ರಾಸ್ತಾ(40), ಮತ್ತು ಮಂಜೇಶ್ವರ ತಾಲೂಕಿನ ಸೀತಂಗೋಳಿ ಬೆದ್ರಂಪಲ್ಲ ನಿವಾಸಿ ಜಯಪ್ರಕಾಶ್(40) ಬಂಧಿತ ಆರೋಪಿಗಳು. ಸಂಘದ ಮೇಲ್ಚಾವಣಿ ಹಂಚನ್ನು ಕಳ್ಳರು ತೆಗೆದು ಒಳಗಡೆ ಬಂದು ಕಚೇರಿಯ ಕಪಾಟಿನ ಬಾಗಿಲು ತೆಗೆದು ಹುಡುಕಾಡಿದ್ದು
ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಇವರು ತಮ್ಮ ತಪ್ಪು ತಿದ್ದಿಕೊಳ್ಳದಿದ್ದಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಎಚ್ಚರಿಸಿದ್ದಾರೆ. ಅವರು ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ
ಪುತ್ತೂರು: ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್‍ಗೆ ಒಳಪಟ್ಟ ಕುರಿಯ ಗ್ರಾಮದ ಒಂದನೇ ವಾರ್ಡ್ ನ ನೈತ್ತಾಡಿ ಅಮ್ಮುಂಜೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚರಿಸಲು ಅಯೋಗ್ಯವೆನಿಇಸದೆ. ಈ ರಸ್ತೆಯು ಸರಿಸುಮಾರು ಎರಡು ಕೀಲೊ ಮಿಟರ್ ಇರುವ ರಸ್ತೆಯಾಗಿದು, ಅಮ್ಮುಂಜೆ ಗ್ರಾಮವಾಸಿಗಳನ್ನು ಮುಖ್ಯ ರಸ್ತೆಗೆ ಸೇರಿಸುವ ರಸ್ತೆಯಿದು. ಈ ರಸ್ತೆಯು ಮಳೆಯಿಂದಾಗಿ ಕೆಸರುಮಾಯವಾಗಿದು ತುಂಬಾ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದಾಗಿದೆ. ಈ ರಸ್ತೆಯ ಸ್ಥಿತಿಗತಿಗಳ ಬಗ್ಗೆ
ಪೆರುವಾಜೆ ಗ್ರಾಮದ ಕಾನಾವು ಸಮೀಪದ ಪೆರುವಾಜೆ ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯಲಾಗಿದೆ. ತಜ್ಞ ವೈದ್ಯರ ತಂಡ ಅರವಳಿಕೆ ಮದ್ದು ಪ್ರಯೋಗಿಸಿದ ಅನಂತರ ಚಿರತೆಯನ್ನು ಸೆರೆ ಹಿಡಿದು ಬೋನಿನ ಮೂಲಕ ಪಶ್ಚಿಮ ಘಟ್ಟದ ಕಾಡಿಗೆ ಕೊಂಡೊಯ್ಯಲಾಯಿತು. ಕಾರ್ಯಾಚರಣೆ ವೇಳೆ ಸಂದರ್ಭದಲ್ಲಿ ಪುತ್ತೂರು, ಸುಳ್ಯ ಉಪವಿಭಾಗದ ಅರಣ್ಯಧಿಕಾರಿಗಳು ಪಾಲ್ಗೊಂಡಿದ್ದರು.
ಕಾಣಿಯೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ. ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿದ್ದಾರೆ. ಅರವಳಿಕೆ ತಜ್ಞರು ಬಂದ ಬಳಿಕ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಹಿಡಿಯಬೇಕಷ್ಟೆ ಎಂದು ತಿಳಿದು ಬಂದಿದೆ.
ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ. ಹಿಂದೂ ಸಂಘಟನೆಗಳ ಮುಂದಾಳು, ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ಮತ್ತು ಅವರ ಪತ್ನಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಭಾವಚಿತ್ರವನ್ನು ಪ್ರೊಫೈಲ್ ಹಾಕಿರುವ ನಕಲಿ ಫೇಸ್ಬುಕ್ ಖಾತೆ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದವರಲ್ಲಿ ಹಣಕ್ಕೆ ಬೇಡಿಕೆ
ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಆ.10ರಂದು ದೆಹಲಿಯಲ್ಲಿ ಕೇಂದ್ರದ ಕೃಷಿ ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತರ ಕನ್ನಡ ಜಿಲ್ಲೆಯ ಮಾದರಿಯಲ್ಲೇ ಸೋಲಾರ್ ಪಂಪ್ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಮಾಡಿದರು. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು ಅಳವಡಿಸುವಾಗ ಸರಕಾರ ಸಬ್ಸಿಡಿ ನೀಡುತ್ತಿದೆ. ಆ ಸಬ್ಸಿಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೂ ವಿಸ್ತರಿಸಬೇಕು


















