ಪುತ್ತೂರು: ಎಸ್ ಎಸ್ ಎಲ್. ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಬೆಥನಿ ಪ್ರೌಢಶಾಲಾ ವಿದ್ಯಾರ್ಥಿನಿ ತನಿಶಾ ರೈ 625 ರಲ್ಲಿ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಇವರು ಸಂಪ್ಯದ ಪ್ರಸನ್ನ ಕುಮಾರ್ ರೈ,ಜ್ಯೋತಿ ಪಿ ರೈ ದಂಪತಿ ಪುತ್ರಿಯಾಗಿದ್ದಾಳೆ.
ವಿಟ್ಲ: ಕೇರಳದಲ್ಲಿ ಕೋವಿಡ್ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೇರಳ- ಕರ್ನಾಟಕ ಗಡಿ ಪ್ರದೇಶವಾಗಿರುವ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿಯವರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರಂಭದಲ್ಲಿ ಕೇರಳ- ಕರ್ನಾಟಕ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2021-22ನೇ ಸಾಲಿನಲ್ಲಿ ಒಟ್ಟು ರೂ. 92.11ಕೋಟಿ ಅಭಿವೃದ್ಧಿ ಅನುದಾನ ರಾಜ್ಯ ಸರಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರುಗೊಳಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಇನ್ನಷ್ಟು ಅನುದಾನ ಮಂಜೂರು ಮಾಡುವ ಭರವಸೆ ನೀಡಿದ್ದಾರೆ. ಶ್ರಾವಣ ಮಾಸದಲ್ಲಿ ಈ ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ನಡೆಸಲಾಗುವುದು ಎಂದು ಪುತ್ತೂರು ಶಾಸಕ
ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು
ಜುಲೈ.29ರಂದು 64 ಜಾನುವಾರುಗಳನ್ನು ಏಲಂ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು, ನಕಲಿ ರೈತರ ಹೆಸರಿನಲ್ಲಿ ಜಾನುವಾರುಗಳನ್ನು ಪಡೆದುಕೊಂಡು ಅವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುವ ಸಾಧ್ಯತೆಗಳಿವೆ. ಆದ ಕಾರಣ ಕೂಡಲೇ ಜಾನುವಾರುಗಳ ಏಲಂ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೆ. ಕೃಷ್ಣ ಪ್ರಸನ್ನ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನುವಾರುಗಳ ಏಲಂ
ಪುತ್ತೂರು: ಕಾರ್ಗಿಲ್ ಯುದ್ಧದ ಬಳಿಕ ರಾಷ್ಟ್ರ ಭಕ್ತಿಯ ಅನಾವರಣಗೊಂಡಿದ್ದು, ಕಾರ್ಗಿಲ್ ಯುದ್ಧದಲ್ಲಿ ಗಳಿಸಿದ ವಿಜಯವು ಎಲ್ಲಾ ದೇಶವಾಸಿಗಳಿಗೆ ಪ್ರೇರಣೆಯಾಗಿದೆ. ಕಾರ್ಗಿಲ್ ಯುದ್ಧದ ಸಮಯದಲ್ಲಿ ಜೀವದ ಹಂಗು ತೊರೆದು ಹೋರಾಟ ನಡೆಸಿದ ಸೈನಿಕರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರಿನ ಮಿನಿ ವಿಧಾನ ಸೌಧದ ಮುಂಬಾಗದಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ
ಪುತ್ತೂರು; 2020-21 ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮನೆಗೆ ತೆರಳಿ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ( ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣ ದಂಪತಿ ಪುತ್ರಿ), ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿ ದಂಪತಿ ಪುತ್ರ),ಮನೋಜ್ ಎಸ್.ಆರ್(
ಪುತ್ತೂರು: 20 ವರ್ಷಗಳ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಯಾರದಲ್ಲಿ ತಂಡವೊಂದರಿಂದ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿ ತಲೆ ಮರೆಸಿಕೊಂಡಿದ್ದರು. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆಯವರ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಿದ ಪುತ್ತೂರು ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಗೋಪಾಲ್ ನಾಯ್ಕ್ ಮತ್ತು ಸಿಬ್ಬಂದಿಗಳು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. 2020ನೇ ನ.20ರಂದು ಮಧ್ಯಾಹ್ನ
ಪುತ್ತೂರು ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಅಂಗಡಿಗಳ ತೆರವು ಕಾರ್ಯಾಚರಣೆಗೆ ಪುತ್ತೂರು ನಗರ ಸಭೆ ಜು.೨೩ರ ಬೆಳ್ಳಂಬೆಳಗ್ಗೆ ಮುಂದಾಗಿದೆ. ಜೆಸಿಬಿ ಮೂಲಕ ನಗರ ಸಭೆ ಪೌರಾಯುಕ್ತ ಹಾಗೂ ಇತರ ಅಧಿಕಾರಿಗಳ ಸಮಕ್ಷಮದಲ್ಲಿ ಆಕ್ರಮ ಶೆಡ್ ಗಳನ್ನೂ ಕೆಡವಲಾಗುತ್ತಿದೆ. ತಳ್ಳು ಗಾಡಿಯ ಅನುಮತಿ ಪಡೆದು, ಒಂದಷ್ಟು ಸಮಯದ ಬಳಿಕ ಅಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ವ್ಯಾಪಾರ ನಡೆಸುತಿದ್ದವರಿಗೆ ನಗರ ಸಭೆ ಈ ಮೂಲಕ ಇಂದು ನಸುಕಿನ ವೇಳೆ ಆಘಾತ ನೀಡಿದೆ. ಈ ಅಂಗಡಿಗಳು
ಕಳೆದ 15 ವರ್ಷಗಳಿಂದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಅಧ್ಯಕ್ಷನಾಗಿದ್ದು, ಇದೀಗ ನನ್ನ ಅವಧಿ ಆ.15 ಕ್ಕೆ ಪೂರ್ಣಗೊಳ್ಳಲಿದ್ದು, ದ.ಕ.ಜಿಲ್ಲಾ ಕಾರ್ಯದರ್ಶಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಳೆದ ೧೫ ವರ್ಷಗಳ ಕಾಲ ಅಧ್ಯಕ್ಷನಾಗಿ ಸಂಘವನ್ನು ಕಟ್ಟಿ, ಬೆಳೆಸಿ, ಸಂಘದ, ಸಮುದಾಯದವರಿಗೆ ಪ್ರತಿಯೊಂದು ವಿಚಾರದಲ್ಲೂ ನ್ಯಾಯ ಒದಗಿಸಿಕೊಟ್ಟು


















