Home ಕರಾವಳಿ Archive by category ಪುತ್ತೂರು (Page 80)

ಮೂಲಭೂತ ಸೌಕರ್ಯ ವಂಚಿತ ಸಿರಿಬಾಗಿಲು: ಸೇತುವೆ ಇಲ್ಲದೆ ಗ್ರಾಮದ ಜನರ ಪರದಾಟ

ಮಳೆಗಾಲ ಬಂತೆಂದರೆ ಸಾಕು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಿರಿಬಾಗಿಲು ಎನ್ನುವ ಗ್ರಾಮ ಇತರ ಪ್ರದೇಶಗಳ ಸಂಪರ್ಕವನ್ನೇ ಕಳೆದುಕೊಂಡು ದ್ವೀಪವಾಗಿ ಬಿಡುತ್ತದೆ. ಶಿರಾಢಿಘಾಟ್ ನ ಮಧ್ಯಭಾಗದಲ್ಲಿರುವ ಈ ಗ್ರಾಮದ ಸುತ್ತ ಮೂರು ಹೊಳೆಗಳು ಹರಿಯುತ್ತಿದೆ, ಸೇತುವೆಯಿಲ್ಲದ ಕಾರಣ ಮಳೆಗಾಲದಲ್ಲಿ ಈ ಹೊಳೆಗಳು ತುಂಬಿ ಹರಿಯುವ ಕಾರಣ ಇಲ್ಲಿನ ಜನರಿಗೆ ಅಗತ್ಯ

ಪುತ್ತೂರಿನ ಕಜೆ ಎಂಬಲ್ಲಿ ಆವರಣಗೋಡೆ ಕುಸಿತ : ಅಪಾಯದ ಅಂಚಿನಲ್ಲಿ ಮನೆ

ಪುತ್ತೂರು ಕಜೆ ದೇವಿ ನಗರ ಎಂಬಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಸಂತೋಷ್ ಕುಲಾಲ್ ಅವರ ಮನೆಯ ಆವರಣ ಗೋಡೆ ಕುಸಿದಿದ್ದು ಮನೆಯು ಅಪಾಯದ ಅಂಚಿನಲ್ಲಿದೆ ಇಲ್ಲಿಗೆ ರೈ ಎಸ್ಟೇಟ್ ಮಾಲಕರಾದ ಅಶೋಕು ಕುಮಾರ ರೈ ಕೋಡಿಂಬಾಡಿ ಉದ್ಯಮಿಗಳು ಮಂಗಳೂರು ಇವರು ಭೇಟಿ ನೀಡಿ ವೀಕ್ಷಿಸಿದರು ಆವರಣಗೋಡೆ ಕಟ್ಟಲು ಅಂದಾಜು ಸುಮಾರು ಎಂಟು ಲಕ್ಷ ತಗುಲಲಿದ್ದು ಸರಕಾರ ಹಾಗೂ ಸ್ಥಳೀಯರ ಸಹಕಾರದೊಂದಿಗೆ ತಾನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು ಸ್ಥಳೀಯ ಶಾಸಕರ ಗಮನಕ್ಕೆ ತಂದಿದ್ದರು

ಕರಾವಳಿಯಲ್ಲಿ ಭಾರೀ ಮಳೆ: ವಿಟ್ಲ ಹೋಬಳಿ ವ್ಯಾಪ್ತಿಯಲ್ಲಿ ಅಪಾರ ಹಾನಿ

ವಿಟ್ಲ: ವಿಟ್ಲ ಹೋಬಳಿ ವ್ಯಾಪ್ತಿಯ ಹಲವೆಡೆ ಮಳೆಗೆ ಭಾರೀ ಹಾನಿ ಸಂಭವಿಸಿದೆ. ಬೋಳಂತೂರು ಗ್ರಾಮದ ಕೊಕ್ಕಪುಣಿ ಎಂಬಲ್ಲಿ ಗಾಳಿ ಮಳೆಗೆ ನೇಮಕ್ಕುರವರ ಮನೆಯ ಮೇಲಿನ ಬರೆ (ಅವರಣ ಗೋಡೆ) ಕುಸಿದು ಬಿದ್ದಿದ್ದು, ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಪಂಚಾಯತ್ ಸದಸ್ಯ ಯಾಕುಬು ಮತ್ತು ಗ್ರಾಮಕರಣಿಕ ಕರಿಬಸಪ್ಪ ಆಗಮಿಸಿ ಪರಿಶೀಲಿಸಿದರು. ಬೋಳಂತೂರು ಗ್ರಾಮದ ಅಬ್ದುಲ್ ಖಾದ್ರಿ ಅವರ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ. ಚೆನ್ನಪ್ಪ ಪೂಜಾರಿ ಅವರ ಮನೆಯ ಹಿಂಭಾಗದಲ್ಲಿರುವ

ಪುತ್ತೂರಿನ ಚೆಲ್ಯಡ್ಕ ಸೇತುವೆ ಎರಡನೇ ಬಾರಿಗೆ ಮುಳುಗಡೆ

ಪುತ್ತೂರು:ತಾಲೂಕಿನ ಏಕೈಕ ಮುಳುಗು ಸೇತುವೆಯಾಗಿರುವ ಚೆಲ್ಯಡ್ಕ ಸೇತುವೆ ಈ ವರ್ಷದ ಮಳೆಗಾಲದಲ್ಲಿ ಎರಡನೇ ಬಾರಿಗೆ ಮುಳುಗಡೆಯಾಗಿದೆ. ಜು.18ರಂದು ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದ್ದು ಸೇತುವೆಯು ಮುಳುಗಡೆಯಾಗಿದೆ. ಇದರಿಂದಾಗಿ ದೇವಸ್ಯ ಮೂಲಕ ಸಂಚರಿಸಬೇಕಾದ ಖಾಸಗಿ ಬಸ್‌ಗಳು ಹಾಗೂ ಇತರೇ ವಾಹಗಳಿಗೆ ಅಡಚಣೆ ಉಂಟಾಗಿದ್ದು ಸಂಟ್ಯಾರು ರಸ್ತೆಯ ಮೂಲಕ ಸುತ್ತುವರಿದು ಚಲಿಸುವಂತಾಗಿದೆ.  

ವೀರಮಂಗಲದಲ್ಲಿ ರೈಲ್ವೇ ಹಳಿಗೆ ಧರೆ ಕುಸಿತ: ರೈಲು ಸಂಚಾರ ಸ್ಥಗಿತ

ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದೆ.ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ-ಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು ರೈಲಿನ ಗಾರ್ಡ್ ಗೆ ಹಾನಿಯಾಗಿದೆ.ರೈಲು ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಣ್ಣು ತೆರವು ಮಾಡಲಾಗುತ್ತಿದೆ ಎಂದು

ಉಪ್ಪಳಿಗೆಯಲ್ಲಿ ಮನೆ ತಡೆಗೋಡೆ ಕುಸಿತ-ಲಕ್ಷಾಂತರ ರೂಪಾಯಿ ನಷ್ಟ

ಪುತ್ತೂರು: ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜು.16ರಂದು ಇರ್ದೆ ಗ್ರಾಮದ ಉಪ್ಪಳಿಗೆ ಎಂಬಲ್ಲಿ ಧನಂಜಯರವರ ಮನೆಯ ತಡೆಗೋಡೆ ಕುಸಿದು ಬಿದ್ದಿದೆ. ಮನೆ ಅಂಗಳದ ಬದಿಯಲ್ಲಿ ನಿರ್ಮಿಸಲಾದ ತಡಗೋಡೆಯು ಮುಂಜಾನೆಯ ವೇಳೆಗೆ ಹೂವಿನ ಗಾರ್ಡನ್ ಸಹಿತ ಕುಸಿದು ಬಿದ್ದಿದೆ. ಅಂಗಳದಲ್ಲಿ ಬಿರುಕು ಬಿಟ್ಟಿದ್ದು ಮತ್ತಷ್ಟು ಕುಸಿಯುವ ಅಪಾಯದಲ್ಲಿದೆ. ಘಟನೆಯಿಂದಾಗಿ ಲಕ್ಷಾಂತರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

ಪುತ್ತೂರಿನ ಬೊಳ್ಳಾನದಲ್ಲಿ ಧರೆ ಕುಸಿತ: ಅಪಾಯದ ಸ್ಥಿತಿಯಲ್ಲಿ 2 ಮನೆಗಳು

ಪುತ್ತೂರು : ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ ಮನೆಯ ಸಮೀಪದ ಧರೆ ಕುಸಿತ ಗೊಂಡಿದ್ದರಿಂದ ಜಯಲಕ್ಷ್ಮೀ ಮತ್ತು ಕೆಳಭಾಗದಲ್ಲಿರುವ ನವೀನ್ ಎಂಬವರ ಮನೆ ಅಪಾಯದ ಸ್ಥಿತಿಯಲ್ಲಿದೆ. ವಿಷಯ ತಿಳಿದ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸ್ಥಳೀಯ

ಪುತ್ತೂರು ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು : ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದ ಅವಧಿಯಲ್ಲಿ ಮೊದಲ ಬಾರಿಗೆ ಜು.15 ರಂದು ಮಧ್ಯಾಹ್ನ ವೇಳೆ ಮುಳುಗಡೆಯಾಗಿದೆ. ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು ಹೆಸರಾದ ಈ ಸೇತುವೆ ಮುಳುಗಡೆಯಾಗಿದ್ದು ಆ ರಸ್ತೆಯಲ್ಲಿ ಚಲಿಸ ಬೇಕಾದ ವಾಹನಗಳಿಗೆ ಅಡಚಣೆ ಉಂಟಾಗಿ ಸಮಸ್ಯೆಯಾಯಿತು.ಸುತ್ತುವರಿದು ಚಲಿಸ ಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಬನ್ನೂರಿನಲ್ಲಿ ಕುಸಿದು ಬೀಳುವ ಹಂತದಲ್ಲಿರುವ ಮನೆ, ನೆರವಿನ ನಿರೀಕ್ಷೆಯಲ್ಲಿ ಬೀರ್ನಹಿತ್ಲುವಿನ ಬಡ ಮಹಿಳೆ

ಕೊರೊನಾ ಪಾಸಿಟೀವ್ ಪ್ರಕರಣಗಳು ರಾಜ್ಯಲ್ಲಿ ಕೊಂಚ ಇಳಿಮುಖವಾಗುತ್ತಿರುವ ನಡುವೆಯೇ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲೂ ಪ್ರಯತ್ನಗಳು ಆರಂಭಗೊಂಡಿದೆ. ಒಂದು ವೇಳೆ ಶಾಲೆ ಪ್ರಾರಂಭವಾದಲ್ಲಿ ತನ್ನ ಮಗುವಿಗೆ ಹೇಗೆ ಶಿಕ್ಷಣ ನೀಡಲಿ ಎನ್ನುವ ತಳಮಳದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಡ ತಾಯಿಯೊಬ್ಬರಿದ್ದಾರೆ. ಈಕೆಯ ಮನೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ವಾಸಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ. ಕೂಲಿ-ನಾಲಿ ಮಾಡಿ ತನ್ನ ಅನಾರೋಗ್ಯ ಪೀಡಿತ ಮಗುವಿನೊಂದಿಗೆ

ಪುತ್ತೂರಿನಲ್ಲಿ ಮನದಾಳವನ್ನು ಬಿಚ್ಚಿಟ್ಟ ’ಗಿಣಿರಾಮ’ ಖ್ಯಾತಿಯ ರಿತ್ವಿಕ್ ಮಠದ್

ಪುತ್ತೂರು: ತಮ್ಮ ರಗಡ್ ಲುಕ್, ’ಮಾಸ್ತರ ಮಗಳೇ’ ಎಂಬ ಗಡಸು ದನಿಯ ಡೈಲಾಗ್ ನಿಂದಲೇ ಕನ್ನಡಿಗರ ಮನಗೆದ್ದ ’ಗಿಣಿರಾಮ’ ಧಾರವಾಹಿ ಖ್ಯಾತಿಯ ಶಿವರಾಮ್ ಅಲಿಯಾಸ್ ರಿತ್ವಿಕ್ ಮಠದ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದಿದ್ದು, ಕ್ಯಾಮರಾ ಮುಂದೆ ಒಂದಿಷ್ಟು ಮನಬಿಚ್ಚಿ ಮಾತನಾಡಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆರಾಧ್ಯ ಭಕ್ತರಾಗಿರುವ ರಿತ್ವಿಕ್ ಮಠದ್ ಅವರು ಇದು ನಾಲ್ಕನೇ ಬಾರಿ ಪುತ್ತೂರಿನೊಡೆಯ ಮಹಾಲಿಂಗೇಶ್ವರನ ದರ್ಶನ ಮಾಡಿರೋದಂತೆ. ’ತಮ್ಮ