ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಇವರು ತಮ್ಮ ತಪ್ಪು ತಿದ್ದಿಕೊಳ್ಳದಿದ್ದಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ
ಪುತ್ತೂರು: ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್‍ಗೆ ಒಳಪಟ್ಟ ಕುರಿಯ ಗ್ರಾಮದ ಒಂದನೇ ವಾರ್ಡ್ ನ ನೈತ್ತಾಡಿ ಅಮ್ಮುಂಜೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚರಿಸಲು ಅಯೋಗ್ಯವೆನಿಇಸದೆ. ಈ ರಸ್ತೆಯು ಸರಿಸುಮಾರು ಎರಡು ಕೀಲೊ ಮಿಟರ್ ಇರುವ ರಸ್ತೆಯಾಗಿದು, ಅಮ್ಮುಂಜೆ ಗ್ರಾಮವಾಸಿಗಳನ್ನು ಮುಖ್ಯ ರಸ್ತೆಗೆ ಸೇರಿಸುವ ರಸ್ತೆಯಿದು. ಈ ರಸ್ತೆಯು ಮಳೆಯಿಂದಾಗಿ ಕೆಸರುಮಾಯವಾಗಿದು ತುಂಬಾ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದಾಗಿದೆ. ಈ ರಸ್ತೆಯ ಸ್ಥಿತಿಗತಿಗಳ ಬಗ್ಗೆ
ಪೆರುವಾಜೆ ಗ್ರಾಮದ ಕಾನಾವು ಸಮೀಪದ ಪೆರುವಾಜೆ ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯಲಾಗಿದೆ. ತಜ್ಞ ವೈದ್ಯರ ತಂಡ ಅರವಳಿಕೆ ಮದ್ದು ಪ್ರಯೋಗಿಸಿದ ಅನಂತರ ಚಿರತೆಯನ್ನು ಸೆರೆ ಹಿಡಿದು ಬೋನಿನ ಮೂಲಕ ಪಶ್ಚಿಮ ಘಟ್ಟದ ಕಾಡಿಗೆ ಕೊಂಡೊಯ್ಯಲಾಯಿತು. ಕಾರ್ಯಾಚರಣೆ ವೇಳೆ ಸಂದರ್ಭದಲ್ಲಿ ಪುತ್ತೂರು, ಸುಳ್ಯ ಉಪವಿಭಾಗದ ಅರಣ್ಯಧಿಕಾರಿಗಳು ಪಾಲ್ಗೊಂಡಿದ್ದರು.
ಕಾಣಿಯೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ. ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿದ್ದಾರೆ. ಅರವಳಿಕೆ ತಜ್ಞರು ಬಂದ ಬಳಿಕ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಹಿಡಿಯಬೇಕಷ್ಟೆ ಎಂದು ತಿಳಿದು ಬಂದಿದೆ.
ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ. ಹಿಂದೂ ಸಂಘಟನೆಗಳ ಮುಂದಾಳು, ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ಮತ್ತು ಅವರ ಪತ್ನಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಭಾವಚಿತ್ರವನ್ನು ಪ್ರೊಫೈಲ್ ಹಾಕಿರುವ ನಕಲಿ ಫೇಸ್ಬುಕ್ ಖಾತೆ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದವರಲ್ಲಿ ಹಣಕ್ಕೆ ಬೇಡಿಕೆ
ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಆ.10ರಂದು ದೆಹಲಿಯಲ್ಲಿ ಕೇಂದ್ರದ ಕೃಷಿ ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತರ ಕನ್ನಡ ಜಿಲ್ಲೆಯ ಮಾದರಿಯಲ್ಲೇ ಸೋಲಾರ್ ಪಂಪ್ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಮಾಡಿದರು. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು ಅಳವಡಿಸುವಾಗ ಸರಕಾರ ಸಬ್ಸಿಡಿ ನೀಡುತ್ತಿದೆ. ಆ ಸಬ್ಸಿಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೂ ವಿಸ್ತರಿಸಬೇಕು
ಪುತ್ತೂರು: ಎಸ್ ಎಸ್ ಎಲ್. ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಬೆಥನಿ ಪ್ರೌಢಶಾಲಾ ವಿದ್ಯಾರ್ಥಿನಿ ತನಿಶಾ ರೈ 625 ರಲ್ಲಿ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಇವರು ಸಂಪ್ಯದ ಪ್ರಸನ್ನ ಕುಮಾರ್ ರೈ,ಜ್ಯೋತಿ ಪಿ ರೈ ದಂಪತಿ ಪುತ್ರಿಯಾಗಿದ್ದಾಳೆ.
ವಿಟ್ಲ: ಕೇರಳದಲ್ಲಿ ಕೋವಿಡ್ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೇರಳ- ಕರ್ನಾಟಕ ಗಡಿ ಪ್ರದೇಶವಾಗಿರುವ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿಯವರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರಂಭದಲ್ಲಿ ಕೇರಳ- ಕರ್ನಾಟಕ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2021-22ನೇ ಸಾಲಿನಲ್ಲಿ ಒಟ್ಟು ರೂ. 92.11ಕೋಟಿ ಅಭಿವೃದ್ಧಿ ಅನುದಾನ ರಾಜ್ಯ ಸರಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರುಗೊಳಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಇನ್ನಷ್ಟು ಅನುದಾನ ಮಂಜೂರು ಮಾಡುವ ಭರವಸೆ ನೀಡಿದ್ದಾರೆ. ಶ್ರಾವಣ ಮಾಸದಲ್ಲಿ ಈ ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ನಡೆಸಲಾಗುವುದು ಎಂದು ಪುತ್ತೂರು ಶಾಸಕ
ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು


















