ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್
ಪುತ್ತೂರು : ಇದೇ ಜನವರಿ 28 ರಿಂದ ಫೆಬ್ರವರಿ 1 ರ ತನಕ ಉತ್ತರಾಖಂಡ್ ರಾಜ್ಯದಲ್ಲಿ ನಡೆಯಲಿರುವ ರಾಷ್ಟಿಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ಪುರುಷರ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಇವರು ಆಯ್ಕೆಯಾಗಿದ್ದಾರೆ. ಖೋಖೋ ಕೋಚಿಂಗ್‌ನಲ್ಲಿ ಎನ್.ಐ.ಎಸ್ ಅರ್ಹತೆ ಇರುವ ತರಬೇತುದಾರರಾಗಿರುವ ಇವರು ಪ್ರಸ್ತುತ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ. ಇವರು
ಪುತ್ತೂರು: ಎವಿಜಿ ಅಸೋಸಿಯೇಷನ್ ನ ಬೆಳ್ಳಿ ಹಬ್ಬದ ಪ್ರಯುಕ್ತ ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 19 ಆದಿತ್ಯವಾರದಂದು ತಾಲೂಕು ಮಟ್ಟದ ಚಿತ್ರೋತ್ಸವ ಸ್ಪರ್ಧೆಯು ನಡೆಯಿತು. ಸಮಾರೋಪ ಸಮಾರಂಭದ ಮೊದಲಿಗೆ ಒಂದು ಗಂಟೆಯ ಕಾಲಾವಧಿಯೊಂದಿಗೆ ವಿವಿಧ ಶಾಲೆಗಳಿಂದ ಪಾಲ್ಗೊಂಡಂತಹ ವಿದ್ಯಾರ್ಥಿ ವಿದ್ಯಾರ್ಥಿನಿಯರ 5 ವಿಭಾಗಗಳ ಚಿತ್ರರಚನಾ ಸ್ಪರ್ಧೆಯು ನಡೆಯಿತು. ಸ್ಪರ್ಧೆಯಲ್ಲಿ ಪೂರ್ವ ಪ್ರಾಥಮಿಕದಿಂದ 10 ನೇ ತರಗತಿವರೆಗಿನ 175 ಮಂದಿ ವಿದ್ಯಾರ್ಥಿ
ಕಡಬ ಠಾಣಾ ವ್ಯಾಪ್ತಿಯ ಮರ್ದಾಳ ಸಮೀಪದ ಮನೆಯೊಂದರಿಂದ ಹಾಡಹಗಲೇ ಬಾಗಿಲು ಮುರಿದು ಒಳ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿರುವ ಕಳ್ಳನನ್ನು ಪೋಲೀಸರು ಗುರುವಾರ ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂಬಾತನನ್ನು ಬಂಧಿಸಿದ್ದಾರೆ.ಕ್ಷಿಪ್ರ ಕಾರ್ಯಾಚನೆ ನಡೆಸಿರುವ ಕಡಬ ಪೊಲೀಸರು ಐದೇ ದಿನದಲ್ಲಿ ಕಳ್ಳನನ್ನು ಪತ್ತೆ ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಕೆರ್ಮಯಿ ಚರ್ಚ್ ಸಮೀಪದ, ಅಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ್ ಅವರು
ಕಡಬ: ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ. ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ
ಕಡಬ ತಾಲೂಕಿನ ಸವಣೂರು, ಸುಬ್ರಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರು ಕಡಬ ತಾಲೂಕು ತಹಶಿಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ರವರು, ಪ್ರಧಾನಮಂತ್ರಿ
ಕಡಬ : ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ ತಮ್ಮ ಅರ್ಜಿಯನ್ನು ಶ್ರೀ ದೇವಳಕ್ಕೆ ಸಲ್ಲಿಸಬಹುದು ಎಂದು ಶ್ರೀ ದೇವಳದ ಪ್ರಕಟಣೆ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಇಲ್ಲಗೊಂಜಿ ಗೇನೊದ ಬಂಡಾರ’ ( ಮನೆಗೊಂದು ತುಳು ಗ್ರಂಥಾಲಯ) ಅಭಿಯಾನಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕೋಡಿಂಬಾಡಿಯ ಮನೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಅಕಾಡೆಮಿ ಪ್ರಕಟಿಸಿದ ಹಾಗೂ ಇತರ ತುಳು ಪುಸ್ತಕಗಳು ಸೇರಿದಂತೆ ಹತ್ತು ಸಾವಿರ ರೂಪಾಯಿ ಮೌಲ್ಯದ 150 ಕೃತಿಗಳನ್ನು ಖರೀದಿಸುವ ಮೂಲಕ ಅಶೋಕ್ ರೈ ಅವರು ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನಕ್ಕೆ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆಯಾಗಿದ್ದಾರೆ. ಪುತ್ತೂರು ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಇವರು ಬಹುಮುಖ ಪ್ರತಿಭಾವಂತ ಯುವ ಸಾಧಕರು.ರಂಗ
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿರುತ್ತಾರೆ. ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನ ವನ್ನು ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ




























