ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10 ನೇ ಕಾವಳಮುಡೂರು – ಎನ್. ಸಿ.ರೋಡು ಶಾಖೆ ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ತೌಹೀದ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ನೂತನ ಶಾಖೆಯನ್ನು ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಜನರಿಗೆ ಆರ್ಥಿಕ
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ ಮತ್ತು ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು 2021-22 ನೇ ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಬಾಲ್ಯ, ಯೌವನ ನಮ್ಮ ಸಂಪತ್ತು ಅದನ್ನು
ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿದ್ದ ಬೃಹತ್ ಗಾತ್ರದ ಅರಳಿ ಮರ(ಅಶ್ವತ್ಥ)ವೊಂದು ಗುರುವಾರ ಬೆಳೆಗ್ಗೆ ಧರೆಗುರುಳಿದ್ದು, ಮರ ವಿದ್ಯುತ್ ತಂತಿಯ ಮೇಲೆ ಬಿದ್ದು 5-6 ವಿದ್ಯುತ್ ಕಂಬಗಳು ಧರೆಗುರುಳಿರುವ ಜತೆಗೆ ರಸ್ತೆಗೆ ಬಿದ್ದ ಪರಿಣಾಮ ಕೆಲವೊತ್ತು ಸಂಚಾರ ವ್ಯತ್ಯಯ ಉಂಟಾಯಿತು. ಬೆಳ್ಳಗ್ಗಿನ ಹೊತ್ತು ಜನಸಂಚಾರ ಹಾಗೂ ವಾಹನ ಸಂಚಾರ ಹೆಚ್ಚಿರುವ ಸಮಯವಾದರೂ, ದೇವರ ಪವಾಡದ ರೀತಿಯಲ್ಲಿ ಯಾವುದೇ ಜೀವಹಾನಿ ಉಂಟಾಗಿಲ್ಲ. ಕಳೆದೆರಡು ದಿನಗಳಲ್ಲಿ
ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಬಹಿರಂಗ ಅಧಿವೇಶನ ನಡೆಯಿತು. ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಹಾಗೂ ಗೌರವ ಕೋಶಾಧ್ಯಕ್ಷ ಬಿ. ಐತಪ್ಪನಾಯ್ಕ ಹತ್ತು ನಿರ್ಣಯಗಳನ್ನು ಮಂಡಿಸಿದರು: ಜಿಲ್ಲೆಯಲ್ಲಿ ಮಂಜೂರಾದ ಕನ್ನಡ ಭವನಗಳ
ಬಂಟ್ವಾಳ: ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ಮತ್ತು ಕೊಮಾಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಾಳಿಗೆಯಲ್ಲಿ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಜನ ಜಮಾವಣೆಗೊಂಡಿದ್ದು, ನಂದಿಸುವ
ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಡಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿ ಹೊರೆಕಾಣಿಕೆ ಮೆರವಣಿಗೆಗೆ ಮಾರ್ನಬೈಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ ನೀಡಿದರು. ಮಾರ್ನಬೈಲು ಮುಖ್ಯ ರಸ್ತೆಯ ಮೂಲಕ ದೇವಸ್ಥಾನಕ್ಕೆ ಸಾಗಿ ಬಂದ ಮೆರವಣಿಗೆಗೆ ಗೊಂಬೆ ಕುಣಿತ,
ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ಅವರ ನೇತೃತ್ವ ದಲ್ಲಿ ನಡೆಯಲಿರುವ ಗ್ರಾಮ ವಿಕಾಸಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಿಮಿಸಿರುವ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದರು. ದೇವಳದ ಆಡಳಿತಮಂಡಳಿ
ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್‍ಗೆ ಭೇಟಿ ನೀಡಿದರು.ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು. ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ರೋಟರಿ ಕ್ಲಬ್ ಬಂಟ್ವಾಳದ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು.ಈ
ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿಯಾಗಿರುವ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದು, ಇವರ ಮೃತದೇಹವನ್ನು ಇಂದು (ಜ. 27) ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತರ ಸ್ವಗೃಹ ಪಚ್ಚಿನಡ್ಕದ ಶುಭ ನಿಲಯದಲ್ಲಿ ಇಡಲಾಗುತ್ತಿದ್ದು, ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.
ಉಜಿರೆ, ಜ 26: ಉಜಿರೆಯ ಎಸ್.ಡಿ.ಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣವು ದೇಶದ ವೈವಿಧ್ಯತೆ, ಶಿಸ್ತುಬದ್ಧತೆ ಮತ್ತು ಸಾಂಸ್ಕøತಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸಿತು. ಗಣರಾಜ್ಯೋತ್ಸವ ದಿನದ ಅಂಗವಾಗಿ ಕಾಲೇಜಿನ ಎನ್.ಸಿ.ಸಿ ವಿಭಾಗದ ಎಲ್ಲಾ ಕೆಡೆಟ್‍ಗಳ ಶಿಸ್ತುಬದ್ಧ ಪಾಲ್ಗೊಳ್ಳುವಿಕೆ ಮುಖ್ಯ ಆಕರ್ಷಣೆಯಾಗಿತ್ತು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಧ್ವಜಾರೋಹಣವನ್ನು ನೆರವೇರಿಸಿದರು.




























