Home ಕರಾವಳಿ Archive by category ಬಂಟ್ವಾಳ (Page 3)

ಯಕ್ಷಗಾನದ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಭಾರತೀಯ ಸಾಂಪ್ರದಾಯಿಕ ಯುದ್ಧ ಕಲೆ ಥಾಂಗ್ – ತಾ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕಂಚು ಗೆದ್ದ ಗ್ರಾಮೀಣ ಪ್ರತಿಭೆ

ಬಂಟ್ವಾಳ: ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ‌ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವಿಭಾಗದ ಪ್ರಥಮ‌ ವರ್ಷದ ಡಿಪ್ಲೋಮ ವಿದ್ಯಾರ್ಥಿ ಸತೀಶ್ ಎಸ್. ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅ.5 ರಿಂದ ಅ.7 ರವರೆಗೆ ತಾಂಗ್- ತಾ ಫೆಡರೇಷನ್ ಆಫ್ ಇಂಡಿಯದ ಸಹಕಾರದೊಂದಿಗೆ ನಡೆದ ಈ

ವಿಟ್ಲ: ಕೇಪುನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ವಿಟ್ಲ: ರವಿವಾರ ಸಂಜೆ ಗುಡುಗು- ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಕೇಪುನಲ್ಲಿ ಮನೆಗೆ ಸಿಡಿಲು ಬಡಿದು ಹಾನಿಯಾಗಿರುವ ಜೊತೆಗೆ ನರಿಕೊಂಬುವಿನಲ್ಲಿ ಮನೆಯ ಮೇಲೆ ತೆಂಗಿನಮರ ಬಿದ್ದು ಹಾನಿಯಾಗಿದೆ. ಕೇಪು ಗ್ರಾಮದ ಕೋಡಂದೂರಿನಲ್ಲಿ ಜಯರಾಮ ನಾಯ್ಕ ಅವರ ಮನೆಗೆ ಸಿಡಿಲು ಬಡಿದು ಗೋಡೆ ಬಿರುಕು ಬಿಟ್ಟಿದ್ದು, ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದೆ. ಅಳಿಕೆ ಗ್ರಾಮದ ಅರುಂಬು ನಾರಾಯಣ ಮೂಲ್ಯ ಅವರ ಮನೆಗೆ ಸಿಡಿಲು ಬಡಿದು ಗೋಡೆಗೆ ಹಾನಿಯಾಗಿದೆ.

ವಿಟ್ಲ: ನದಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

ವಿಟ್ಲ : ಭಾನುವಾರ ವಿಟ್ಲ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ ನದಿಗೆ ಬಿದ್ದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಸಂಜೆ ವೇಳೆ ವ್ಯಕ್ತಿಯೊಬ್ಬರು ಸೇತುವೆಯಲ್ಲಿ ಹೋಗುತ್ತಿದ್ದಾಗ ಆಯತಪ್ಪಿ ನದಿಗೆ ಬಿದ್ದಿದ್ದಾರೆ. ಕೂಡಲೇ ಅಲ್ಲೇ‌ ಇದ್ದ ಯುವಕರು ನದಿಯ ಪ್ರವಾಹವನ್ನೂ ಲೆಕ್ಕಿಸದೆ ಹಾರಿ ಈಜಾಡಿಕೊಂಡು ಹೋಗಿ

ಬಂಟ್ವಾಳ : ಕ್ಷಯ ರೋಗಿಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಕ್ಷಯ ರೋಗಿಗಳಿಗೆ ಧವಸ ಧಾನ್ಯಗಳನ್ನೊಳಗೊಂಡ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಸಮಾರಂಭ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಆಹಾರ ಕಿಟ್ ವಿತರಿಸಿದ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸಂಜಿತ್ ಎಸ್.ಶೆಟ್ಟಿ ಮಾತನಾಡಿ, ಸೇವಾ ಕಾರ್ಯಗಳಿಗೆ ಮನಸ್ಸು ಅತಿ ಮುಖ್ಯವಾಗಿದ್ದು, ಆಗ ನಾವು ನೀಡಿದ ಸೇವೆಯೂ ಸಾರ್ಥಕತೆಯನ್ನು ಪಡೆಯುತ್ತದೆ. ಸೇವಾ ಕಾರ್ಯಗಳಲ್ಲಿ

ಕರಾವಳಿಯಲ್ಲಿ ತೆನೆ ಹಬ್ಬದ ಸಂಭ್ರಮ..!

ಏಸು ಕ್ರಿಸ್ತರಿಗೆ ಜನ್ಮ ನೀಡಿದ ಮಹಾ ಮಾತೆ ಪವಿತ್ರ ಮೇರಿ ಮಾತೆಯ ಜನ್ಮ ದಿನವಾಗಿರೋ ಇಂದು ಕರಾವಳಿಯ ಕೊಂಕಣಿ ಕ್ರೈಸ್ತರಿಗೆ ವಿಶೇಷ ದಿನ. ಮೇರಿ ಮಾತೆಯ ಹುಟ್ಟು ಹಬ್ಬವನ್ನ ವಿಶೇಷ ರೀತಿಯಲ್ಲಿ ಆಚರಿಸೋ ಕ್ರೈಸ್ತರು ಇದನ್ನ ತೆನೆ ಹಬ್ಬ ಅಥವಾ ಬೆಳೆ ಹಬ್ಬ ಅಂತ ಆಚರಿಸ್ತಾರೆ. ಈ ಸಂಧರ್ಭದಲ್ಲಿ ವಿಶೇಷವಾಗಿ ಹೂವುಗಳನ್ನ ಎಸೆದು ಹೊಸ ಪೈರುಗಳನ್ನ ಹಿಡಿದು ಮೇರಿ ಮಾತೆಗೆ ಸ್ವಾಗತ ನೀಡ್ತಾರೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯದಲ್ಲಿ

ಬಂಟ್ವಾಳ: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ನವವಿವಾಹಿತೆ ಸಾವು

ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ

ಪೊಳಲಿ, ಉಳಾಯಿಬೆಟ್ಟು ಸೇತುವೆ ಘನ ವಾಹನ ಸಂಚಾರ ನಿಷೇಧ – ತುರ್ತು ಓಡಾಟ ಅನುಮತಿಗೆ ಶಾಸಕರು ,ಸಂಸದರ ಸಲಹೆ

ಗುರುಪುರ : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಅವರು ಡೀಸಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ, ಪರ್ಯಾಯ

ಪ್ರವಾಹಪೀಡಿತ ಪ್ರದೇಶಗಳಿಗೆ ಪದ್ಮರಾಜ್ ಆರ್. ಪೂಜಾರಿ ಭೇಟಿ

ಬಂಟ್ವಾಳ ತಾಲೂಕಿನ ನಾವೂರು, ದೇವಸ್ಯಪಡೂರು, ಸರಪಾಡಿ ಗ್ರಾಮದಲ್ಲಿ ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿಪಾದೆ ಚರ್ಚ್ ಧರ್ಮಗುರುಗಳಾದ ಫಾ.ರೋಬರ್ಟ್ ಡಿಸೋಜ, ಚರ್ಚ್ ಉಪಾಧ್ಯಕ್ಷರಾದ. ನವೀನ್ ಮೊರಾಸ್, ಸರಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿನ್ಸೆಂಟ್ ಪಿಂಟೋ, ಬಾಲಕೃಷ್ಣ ಪೂಜಾರಿ, ನಾವೂರು ಗ್ರಾಮ ಪಂಚಾಯಿತಿ ಸದಸ್ಯರಾದ ಲವೀನಾ ಮೊರಾಸ್,