ಪಂಜಿಕಲ್ಲು ಗ್ರಾಮದಲ್ಲಿ ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಬುಧವಾರ ಗುಡ್ಡ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಓರ್ವ ರಾತ್ರಿ ಮೃತಪಟ್ಟಿದ್ದರೆ, ಇನ್ನೋರ್ವ ಮುಂಜಾವ ಕೊನೆಯುಸಿರೆಳೆದಿದ್ದಾನೆ. ಓರ್ವ ಬಂಟ್ವಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(೧೯) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ
ಬಂಟ್ವಾಳ: ಮಳೆಗಾಲ ಆರಂಭವಾದಾಗ ಅನೇಕ ಜಲಪಾತಗಳು ಮೈದುಂಬಿಕೊಂಡು ಹರಿಯಲಾಂಭಿಸುತ್ತವೆ. ದಟ್ಟ ಅರಣ್ಯಗಳ ಮಧ್ಯೆ ಅದೆಷ್ಟೋ ಸುಂದರವಾದ ಜಲಪಾತಗಳು ಇದ್ದರೂ ಹೊರ ಜಗತ್ತಿಗೆ ತಿಳಿಯದೇ ಅಜ್ಞಾತವಾಗಿಯೇ ಉಳಿಯುತ್ತವೆ. ಈ ಪೈಕಿ ತಾಲೂಕಿನ ವೀರಕಂಬ ಗ್ರಾಮದ ಕಲ್ಮಲೆ ಎಂಬಲ್ಲಿ ದಟ್ಟ ಅರಣ್ಯದ ಮಧ್ಯೆ, ಪ್ರಕೃತಿ ರಮಣೀಯ ಸ್ಥಳದಲ್ಲಿ ಇರುವ ಜಲಪಾತವೊಂದು ಬಂಡೆಕಲ್ಲುಗಳ ನಡುವೆ ಧುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿದೆ.
ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಕತ್ತಿ ಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಅತನ ಸ್ನೇಹಿತ ನೌಫಾಲ್ ಮತ್ತು ಇನ್ನೊಬ್ಬ ನ ಹೆಸರು ಸಿಕ್ಕಿಲ್ಲ ಇಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.ಇವರು ಗಾಂಜ ಗಿರಾಕಿಗಳಾಗಿದ್ದು , ತಲಪಾಡಿ ರಾಷ್ಟ್ರೀಯ ಹೆದ್ದಾರಿ
ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ರಂದು ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ
ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ನಿರಂತರ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ
ಬಂಟ್ವಾಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಾಲೂಕಿನ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಮೆಮಾರಿನಲ್ಲಿ ಭೂ ಕುಸಿತ ಉಂಟಾಗಿ ಅನೇಕ ಮನೆಗಳು ಅಪಾಯಕ್ಕೆ ಸಿಲುಕಿದೆ. ನಿರಂತರ ಮಳೆಯಿಂದಾಗಿ ಈ ಮನೆಗಳು ಇನ್ನಷ್ಟು ಅಪಾಯಕ್ಕೀಡಾಗುವ ಆತಂಕ ಎದುರಾಗಿದೆ. ಮನೆಯಲ್ಲಿ ವಾಸಿಸುವುದೇ ಅಪಯಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಪರ್ಯಾಯ ವ್ಯವಸ್ಥೆಗೆ ಮನೆಮಂದಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಕುಸಿಯುವ ಭೀತಿಯಲ್ಲಿರುವ ದಲಿತರ
ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ಸಂಸ್ಕರಣ ಘಟಕದ ಗೇಟಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಬೀಗ ಜಡಿದಿದ್ದಾರೆ. ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಒಣಕಸ ಮಾತ್ರ ಹಾಕಬೇಕು ಎನ್ನುವ ಸೂಚನೆಯನ್ನು ತಿರಸ್ಕರಿಸಿ ಹಸಿ ತ್ಯಾಜ್ಯಗಳನ್ನು ಹಾಕಿದ್ದ ಪರಿಣಾಮ ತ್ಯಾಜ್ಯಗಳು ಮಳೆ ನೀರಿಗೆ ಕೊಳೆತು ದುರ್ನಾತ ಬೀರಿ ಪರಿಸರವನ್ನು ಕಲುಷಿತಗೊಳಿಸಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ತಪ್ಪಿದ್ದಲ್ಲಿ ಜಿಲ್ಲಾಧಿಕಾರಿ
ಬಂಟ್ವಾಳ: ಉಡುಪಿ ಜಿಲ್ಲೆಯ ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್ ನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ವಿತರಣಾ ಲೈನ್ ಮತ್ತು ಟವರ್ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಹಾಗೂ ಭೂಮಿ ಕಳೆದುಕೊಳ್ಳಲಿರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಹಾಗೂ ಪರಿಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದರು. ಈ ಯೋಜನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ , ಮಂಗಳೂರು, ಮೂಡಬಿದ್ರೆ, ಮುಲ್ಕಿ
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲು ಯಶಸ್ವಿಯಾಗಿದೆ. ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದಿದ್ದು. ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ

























