ನಮ್ಮಲ್ಲಿರುವ ಒಳ್ಳೆ ಗುಣಗಳನ್ನು ಬೆಳೆಸಬೇಕು.ನಮ್ಮನ್ನು ನಾವು ಗುರುತಿಸಿ ಕೊಳ್ಳಬೇಕು ಎಂದು ಮೂಡಬಿದ್ರೆಯ ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷರಾದ ಯುವರಾಜ್ ಜೈನ್ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಅನಾರು ದೇವಸ್ಥಾನದಲ್ಲಿ ಧಾರ್ಮಿಕ ಭಾಷಣದಲ್ಲಿ ಮಾತನಾಡಿ ದೇವರನ್ನು ನಾವು ನಮ್ಮ ಹೃದಯದಲ್ಲಿ ಕಾಣಬೇಕು. ಜೀವನದಲ್ಲಿ ದೇವರು ಮೆಚ್ಚುವಂತಹ ಒಳ್ಳೆಯ ಕೆಲಸ ಮಾಡಬೇಕು
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ , ಬಾಲ್ಯ ವಿವಾಹ , ಗರ್ಭಪಾತ ಸೇರಿದಂತೆ ಶಿಬಾಜೆಯ ದಲಿತ ಯುವಕನ ಕೊಲೆ , ತೋಟತ್ತಾಡಿಯ ಆತ್ಮಹತ್ಯೆ ಪ್ರೇರಣೆ ಪ್ರಕರಣದ ಆರೋಪಿಗಳೊಂದಿಗೆ ಶಾಸಕ ಹರೀಶ್ ಪೂಂಜಾರ ನಂಟು ಏನು ? ಬೆಂಗಳೂರಿನಲ್ಲಿ ನಡೆಯುವ ಹಲ್ಲೆ ಪ್ರಕರಣದ ಬಗ್ಗೆ ಮಾತನಾಡುವ ಶಾಸಕ ತನ್ನ ಕ್ಷೇತ್ರದ ಕ್ರಿಮಿನಲ್ ವ್ಯಕ್ತಿಗಳನ್ನು ರಕ್ಷಿಸುವ ಹಿನ್ನೆಲೆ ಏನು ಎಂದು ಸಿಪಿಐ(ಎಂ) ಮುಖಂಡ ಶೇಖರ್ ಲಾಯಿಲ ಪ್ರಶ್ನಿಸಿದ್ದಾರೆ .
ಉಜಿರೆ: ಜ್ಞಾನ ಮತ್ತು ಕೌಶಲ್ಯಗಳು ಪ್ರಾಯೋಗಿಕವಾಗಿ ಅನ್ವಯವಾದಾಗ ಮಾತ್ರ ಕಲಿಕೆಯ ಸಾರ್ಥಕತೆ ಸಾಧ್ಯ ಎಂದು ‘ಜೆಸಿಐ ಬೆಳ್ತಂಗಡಿ ಮಂಜುಶ್ರೀ’ಯ ಅಧ್ಯಕ್ಷರಾದ ಶಂಕರ್ ರಾವ್ ಬಿ ನುಡಿದರು. ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಕ್ ದರ್ಶನ್ ಸಭಾಂಗಣದಲ್ಲಿ ವ್ಯವಹಾರ ಆಡಳಿತ ವಿಭಾಗವು ಶನಿವಾರ ಆಯೋಜಿಸಿದ್ದ ಅಂತರ್ ವಿಭಾಗ ‘ಶಾರ್ಟ್ ಫಿಲ್ಮ್ ಫೆಸ್ಟಿವಲ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಿಕೆಯ ಹಂತದಿಂದಲೇ ವಿದ್ಯಾರ್ಥಿಗಳು ವಿಭಿನ್ನವಾಗಿ ಯೋಚಿಸುವ
ಬೆಳ್ತಂಗಡಿ ತಾಲೂಕಿನ ಮೊಗ್ರೂ ಗ್ರಾಮದ ಮುಗೇರಡ್ಕ ಎಂಬಲ್ಲಿ ನಡೆಯುವ ಅಕ್ರಮ ಮರಳು ದಂಧೆ ಮತ್ತು ನೀರಾವರಿ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕರಾದ ವಸಂತ ಬಂಗೇರ ಹೇಳಿದರು. ಅವರುಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಮುಗೇರಡ್ಕದಲ್ಲಿ ನಡೆಯುವ ಅಕ್ರಮ ಮರಳು ದಂಧೆ ಮತ್ತು 250 ಕೋಟಿಯ ಕಾಮಗಾರಿಯಲ್ಲಿ ಭ್ರಷ್ಟಾಚಾರ, ಅಕ್ರಮ ಸಕ್ರಮಗಳಲ್ಲಿ ವಿಳಂಬ ನೀತಿ, ಬಿಜೆಪಿ ಸರಕಾರದ 40% ಕಮಿಷನ್ ದಂಧೆ, ತಾಲೂಕು
ಅಡಿಕೆಯ ಬಗ್ಗೆ ಹಗುರವಾಗಿ ಮಾತನಾಡಿದ ಗೃಹ ಸಚಿವರ ವಿರುದ್ಧ ಗರಂ ಆದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಅವರ ಮಾತು ಖಂಡನಾರ್ಹ ಎಂದು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಗೃಹ ಸಚಿವರು ಆ ರೀತಿ ಹೇಳಬಾರದಿತ್ತು ಅಡಿಕೆ ಬೆಳೆಗಾರರ ಬಗ್ಗೆ ಕೀಳಾಗಿ ಮಾತನಾಡಬಾರದು ಅಡಿಕೆ ಬೆಳೆಗಾರರು ಹೆದರುವಂಥ ಅವಶ್ಯಕತೆ ಇಲ್ಲ ಅಡಿಕೆಗೆ ಬೆಲೆ ಯಾವತ್ತೂ ಕಡಿಮೆಯಾಗುವುದಿಲ್ಲ ಎಂದು ಅಡಿಕೆ ಬೆಳೆಗಾರರಿಗೆ ಧೈರ್ಯ ಹೇಳಿದರು ಈ ಸಂದರ್ಭದಲ್ಲಿ ಮಾಜಿ ಸಚಿವ
ಬೆಳ್ತಂಗಡಿ : ಉಪ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರಿಗೆ ಸಂಘಪರಿವಾರಗಳ ಬೆದರಿಕೆ ಇರುವ ಕಾರಣ ಅವರಿಗೆ ರಕ್ಷಣೆಗೆ ಆಗ್ರಹಿಸಿ ಹಾಗೂ ಸಂಘಪರಿವಾರದ ಹಿಂದುತ್ವವಾದಿಗಳು ಜಾತ್ಯಾತೀತವಾದ ಹಿಂದು ಧರ್ಮದ ಮಾನ ತೆಗೆಯವುದರ ವಿರುದ್ದ, ಹಿಂದುಗಳ ದೇವರ ಸ್ಮರಣೆಯ ಭಾಗವಾದ ಭಜನೆಯನ್ನು ಗೇಲಿ ಮಾಡುವಂತೆ ಪೋಲೀಸ್ಟೇಶನ್ ಎದುರು ಭಜನೆ ನಡೆಸಿ ಹಿಂದುಗಳಿಗೆ ಅವಮಾನಿಸಿದ ಸಂಘಪರಿವಾರದ ವಿರುದ್ದ ಹಾಗೂ ಹಿಂದುಳಿದ , ದಲಿತ ವರ್ಗದವರ ಧ್ವನಿ ಅಡಗಿಸುವ ಕುತಂತ್ರ ನಡೆಸುವ
ಗುರುಕೇಂದ್ರಿತವಾಗಿದ್ದ ಶಿಕ್ಷಣ ವ್ಯವಸ್ಥೆ ಇಂದು ಪೋಷಕ ಕೇಂದ್ರಿತವಾಗಿಯೂ ಉಳಿಯದೇ ಬರೀ ಯಂತ್ರ ಕೇಂದ್ರಿತವಾಗಿ ಮಾರ್ಪಟ್ಟಿದೆ. ಹಾಗಾಗಿ ನಾವು ಭಾವನಾತ್ಮಕ ಸಂಬಂಧಗಳನ್ನು, ನೈತಿಕ ಜವಾಬ್ದಾರಿಗಳನ್ನು ಕಳೆದುಕೊಳ್ಳುತ್ತಾ ಸಾಗುತ್ತಿದ್ದೇವೆ ಎಂಬುದಾಗಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು ಉಜಿರೆ ಶ್ರೀ ಧ. ಮಂ. ಕಾಲೇಜಿನ ಕನ್ನಡ ವಿಭಾಗ ಮತ್ತು ಆಂತರಿಕ ಗುಣಮಟ್ಟ ಕೋಶ
ಬೆಳ್ತಂಗಡಿ ತಾಲೂಕಿನ ಶಿಬಾಜೆ ಕುರುಂಜಿ ಗ್ರಾಮದ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಗೈದಿರುವ ಆರೋಪಿಗಳ ಮೇಲೆ ಕೊಲೆ, ದರೋಡೆ, ಹಲ್ಲೆ, ದಲಿತ ದೌರ್ಜನ್ಯ ದಾಖಲಾದರೂ ರಾಜಕೀಯ ಒತ್ತಡಕ್ಕೆ ಒಳಗಾದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸದೆ ರಕ್ಷಣೆಗೆ ಮುಂದಾಗಿರುವ ಘಟನೆ ನಡೆದಿದೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕ್ರಮ ಜರುಗಿಸಬೇಕೆಂದು ಮೊಗೇರ ಸಂಘ ಮತ್ತು ದಲಿತ ಸಂಘಗಳು ಒತ್ತಾಯಿಸಿವೆ. ಈ
ಉಜಿರೆ: ಜ್ಞಾನ ಪಡೆಯಲು ಹಲವಾರು ಮಾರ್ಗಗಳಿವೆ, ಅವುಗಳತ್ತ ಸಾಗಬೇಕಾಗಿರುವುದು ನಮ್ಮ ಕರ್ತವ್ಯ. ಇಕೋ ಸೃಜನಎಂದರೆ ಸಾಹಿತ್ಯ ಭಾಷೆಯಲ್ಲಿ ತಗೋ ಸೃಜನಶೀಲತೆ ಎಂದರ್ಥ ಎಂದು ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿಯ ಪ್ರಾಂಶುಪಾಲಡಿ.ಯದುಪತಿ ಗೌಡ ಹೇಳಿದರು. ಎಸ್.ಡಿ.ಎಂ.ಕಾಲೇಜಿನ ಅರ್ಥಶಾಸ್ತ್ರssss ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಸಹಯೋಗದಲ್ಲಿ ನಡೆದ ಇಕೋ ಸೃಜನ್ ೨೦೨೨ರಕಾರ್ಯಕ್ರಮನ್ನು ಉದ್ಘಾಟಿಸಿ ಇವರು ಮಾತನಾಡಿದರು. ಬತ್ತಿ ಹಾಗೂ ಎಣ್ಣೆ ಬೇರೆ ಬೇರೆಯಾಗಿದ್ದರೆ
ಉಜಿರೆ: ಏನನ್ನಾದರು ಸಾಧಿಸುವ ಮೊದಲು ನಾವು ಮಾನವರಾಗಬೇಕು, ಮಾನವೀಯತೆಯೇ ಮನುಷ್ಯನ ಮೊದಲ ಧರ್ಮವಾಗಬೇಕು. ಸೋತವರ ಜೊತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಗುಣವನ್ನು ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ | ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಪದವಿ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ಶ್ರೀ. ಧ. ಮಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಎಸ್.ಡಿ.ಎಂ. ನೆನಪಿನಂಗಳ ಎಂಬ

























