ಉಜಿರೆ: ಯಾವುದೇ ದೇಶದ ಆರ್ಥಿಕ ಬಿಕ್ಕಟ್ಟು ಆಯಾ ದೇಶದ ಸಂಪನ್ಮೂಗಳ ಮೇಲೆ ಅವಲಂಬಿತವಾಗಿರುತ್ತವೆ. ಲಭ್ಯವಿರುವ ಸಂಪನ್ಮೂಲಗಳನ್ನು ಹೇಗೆ ಸದುಪಯೋಗಮಾಡಿಕೊಳ್ಳುತ್ತಾರೆ ಎಂಬುದರ ಮೇಲೆ ರಾಷ್ಟ್ರದ ಉನ್ನತಿ ನಿರ್ಧಾರವಾಗುತ್ತದೆ ಎಂದು ಮಂಗಳೂರು ವಿಶ್ವ ವಿದ್ಯಾಲಯದ ಮಂಗಳಗಂಗೋತ್ರಿಯ ಕುಲಸಚಿವರು ಡಾ.ಕಿಶೋರ್ ಕುಮಾರ್ ಸಿ.ಕೆ ಹೇಳಿದರು. ಉಜಿರೆಯ ಎಸ್.ಡಿ.ಎಂ ಕಾಲೇಜು ಹಾಗೂ
ಬೆಳ್ತಂಗಡಿ : ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪ ಕುಮೇರು ನಿವಾಸಿ ಅಶೋಕ್ (28) ವೃದ್ಧೆಯನ್ನು ಕೊಲೆಗೈದ ಆರೋಪಿ. ಅಶೋಕ್ ಕೊಲೆಯಾದ ಅಕ್ಕು ಅವರ ಪುತ್ರ ಡೀಕಯ್ಯ ಅವರ ಪತ್ನಿಯ ಸಹೋದರಿಯ ಪುತ್ರನಾಗಿದ್ದ. ಈತ ಐಸ್ ಕ್ರೀಂ ವಾಹನದಲ್ಲಿ ಕೆಲಸ ಮಾಡುತ್ತಿದ್ದ.
ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಪರಾರಿ ಶಾಂತಿನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಅವರು ಯುವಕರ ತಂಡದಿಂದ ಹಲ್ಲೆಗೊಳಗಾಗಿ ಮೃತಪಟ್ಟವರು. ಜಾರಪ್ಪ ನಾಯ್ಕ್ ಅವರ
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.
ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ನಿರಂತರ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ರಾಜ್ಯ ಹೆದ್ದಾರಿಯ ಬದಿಯಲ್ಲಿ ಬೀದಿ ಬದಿ ವ್ಯಾಪಾರದಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಂಗಡಿಯನ್ನು ದ್ವಂಸ ಮಾಡಿದ್ದನ್ನು ವಿರೋಧಿಸಿ ಅಲ್ಲಿನ ವ್ಯಾಪಾರಸ್ಥರು ಹಾಗೂ ಕಮ್ಯುನಿಸ್ಟ್ ಪಾರ್ಟಿಯ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನ್ಯಾಯವಾದಿಗಳಾದ ಬಿ. ಎಂ.ಭಟ್ ಮಾತನಾಡಿ ಕಾನೂನು ಹಾಗೂ ಸಂವಿಧಾನ ವಿರೋಧಿಸಿ ಸುಪ್ರೀಂ ಕೋರ್ಟಿನ ಆದೇಶವನ್ನು ಉಲ್ಲಂಘಿಸಿ pwd ಇಲಾಖೆ
ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಲಿಮ್ಕೊ ಸಂಸ್ತೆ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳ್ತಂಗಡಿ ವತಿಯಿಂದ ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ವಿಕಲ ಚೇತನರ ಶ್ರೆಯಾಭಿವೃದ್ದಿ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಮ್ಮ
ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದು ಕೊಂಡಿದೆ ಈ ದೇಶದ ರೈತರ ಒಗ್ಗಟ್ಟಿನ ಹೋರಾಟ ಇದಕ್ಕೆ ಕಾರಣ,ಒಂದು ವರ್ಷದಿಂದ ಹೋರಾಟ ಮಾಡುತಿದ್ದ ರೈತರು ಈ ಹಂತಕ್ಕೆ ತಲುಪುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದವರು ಮಸೂದೆ ವಾಪಸ್ ಪಡೆದಿದ್ದಾರೆ, ನಾವು ಈ ವಿಚಾರವಾಗಿ
ಉಜಿರೆ:ಶ್ರೀ.ಧ.ಮಂ ಪದವಿ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮವು೧೫/೧೧/೨೦೨೧ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಹೊಸ ಶಿಕ್ಷಣ ನೀತಿಯನ್ನು ಕಾಲೇಜಿನಲ್ಲಿ ಸಮರ್ಪಕವಾಗಿ ಅನುಷ್ಠಾನದ ತಯಾರಿ ನಡೆಯುತ್ತಿದೆ.ದೇಶದಲ್ಲಿ ಕೇವಲ ೨೭% ಯುವಜನತೆ ಮಾತ್ರ ಉನ್ನತ ಶಿಕ್ಷಣವನ್ನು ಪಡೆಯುತ್ತಾರೆ. ಉಳಿದವರು ಈ ಅವಕಾಶಗಳಿಂದ ವಂಚಿತರಾಗಿದ್ದಾರೆ. ಕಾಲೇಜಿನಲ್ಲಿ ಅನೇಕ





















