Home ಕರಾವಳಿ Archive by category ಬೆಳ್ತಂಗಡಿ (Page 4)

ಬೆಳ್ತಂಗಡಿ : ನೀರಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು

ಬೆಳ್ತಂಗಡಿ ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ತಾಲೂಕಿನ ನೆರಿಯ ಗ್ರಾಮದ ಮುನ್ನೂರು ಎಕ್ರೆ ಎಂಬಲ್ಲಿ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಈಜು ಬಾರದೆಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದಿದೆ ಇವರು ಮೂಲತಃ ಮೂಡಿಗೆರೆ ನಿವಾಸಿಯಾಗಿದ್ದು ಮದುವೆಯಾಗಿ ನೆರಿಯದಲ್ಲಿ ಹಲವಾರು

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಗುರುವಾಯಿನಕೆರೆ: ವಿದ್ವತ್ ಪಿಯು ಕಾಲೇಜು – ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ – ಸಾಧಕರೊಂದಿಗೆ ಸಂವಾದ

ಗುರುವಾಯನಕೆರೆಯ ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ“ ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ- ಸಾಧಕರೊಂದಿಗೆ ಸಂವಾದ “ಕಾರ್ಯಕ್ರಮ ನಡೆಯಿತು. ಪಿಯು ವಿದ್ಯಾರ್ಥಿಗಳನ್ನು ಸಾಧಕ ಆಕಾಂಕ್ಷಿಗಳನ್ನಾಗಿ ಪ್ರೇರೆಪಿಸಿ, ಪರಿವರ್ತಿಸಲೆಂದೇ ಆಯೋಜಿಸಲಾಗಿದ್ದ ಈ ವಿಶೇಷ ಪ್ರಯತ್ನಕ್ಕೆ ಮಂಜುನಾಥ್ ಎಸ್. ಅವರು ಅತಿಥಿಯಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, “ಪ್ರಯತ್ನಶೀಲತೆ ಹಾಗೂ ಪರಿಣಾಮಕಾರಿ” ಅಭ್ಯಾಸ ನಿರಂತರವಾಗಿರಬೇಕೆಂದು ಹೇಳಿ, ವೈಜ್ಞಾನಿಕ ಸ್ಟಡಿ ಮಾದರಿ, ಫಲೋಅಪ್,

ಕುಟುಂಬ ಸಮೇತರಾಗಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

ಮಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಇದೆ ವೇಳೆ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು ಬಳಿಕ ನಾಗರಾಧನೆಗೆ ಪ್ರಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕುಕ್ಕೆ

ಪುತ್ತೂರು: ಪತಿಯಿಂದ ಪತ್ನಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು

ಪುತ್ತೂರು : ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ. ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರಿ ಸಜರಾ (40) ಹಲ್ಲೆಗೊಳಗಾದವರು. ಆಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಹಕೀಂ ಮತ್ತು ಸಜರಾ ಅವರ ವಿವಾಹ 15 ವರ್ಷಗಳ ಹಿಂದೆ ನಡೆದಿತ್ತು. ವಿವಾಹವಾದ ಕೆಲ

ಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದು ಬಂದ ಪ್ರವಾಹ – ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಅಂಗಳಕ್ಕೆ ನುಗ್ಗಿದ ನೀರು

ನೆಲ್ಯಾಡಿ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಅಂಗಳ ತನಕ ಬಂದಿದೆ. ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಅಂಗಳಕ್ಕೆ ಬಂದಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ

ಗುರುವಾಯನಕೆರೆ: ವಿದ್ವತ್ ಸ್ಪೂರ್ತಿ ಸಂಚಿಕೆ ಮೊದಲನೇ ಭಾಗದ ಅನಾವರಣ

  ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರಿದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ವಿದ್ವತ್ ಪಿಯು ಕಾಲೇಜಿನಲ್ಲಿ ಮಹತ್ವದ ಓರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.  ” ವಿದ್ವತ್ ಸ್ಫೂರ್ತಿ  ಸಂಚಿಕೆಯ ಮೊದಲನೇ ಭಾಗವಾದ ಈ ಕಾರ್ಯಕ್ರಮವನ್ನ ವಿದ್ವತ್ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಅವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ  ಸ್ಫರ್ಧಾತ್ಮಕ ಪರೀಕ್ಷೆಗೆ ಓದುವ ವಿಧಾನ

ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ. ಸಕಲೇಶಪುರ ಮೂಲದ ವಿನಯ ಕುಮಾರ್ ಹಾಗೂ ಮಂಜ ಗಾಯಗೊಂಡ ಲಾರಿ ಚಾಲಕರು. ಇವರಿಬ್ಬರು

ಉಳ್ಳಾಲ:ಮನೆಯ ಗಾಡ್ರೆಜ್‌ನೊಳಗಿದ್ದ ಚಿನ್ನಾಭರಣ ಕಳವು ಪ್ರಕರಣ-ಇಬ್ಬರು ಅಪ್ರಾಪ್ತರು ಸೇರಿದಂತೆ ಐವರ ಬಂಧನ

ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ಮನೆಯೊಂದರ ಗಾಡ್ರೆಜ್‌ನೊಳಗಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿಗಳಾದ ಶ್ರೇಯಸ್, ತೌಸೀಫ್ ಹಾಗೂ ಉರ್ವ ನಿವಾಸಿ ಪೃಥ್ವಿರಾಜ್ ಬಂಧಿತ ಮೂವರು ಆರೋಪಿಗಳು. ಧರ್ಮನಗರ ನಿವಾಸಿ ಶ್ರೀಧರ್ ಎಂಬವರ ಮನೆಯಲ್ಲಿ ಜೂನ್ 8ರ ಬೆಳಗ್ಗೆ 8ರಿಂದ ಜೂ.16ರ ಮಧ್ಯಾಹ್ನ 12ರ ನಡುವೆ ನಡುವೆ 15

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ದಿಢೀರ್ ದಾಳಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಾಲೂಕು ಕಚೇರಿ ಅಧಿಕಾರಿಗಳು ಕಡತ ವಿಲೇವಾರಿ ಮಾಡಲು ಜನರನ್ನು ಸತಾಯಿಸುತ್ತಿದ್ದರು. ಆದ್ದರಿಂದ ಶಾಸಕರು ಕಚೇರಿ ದಿಢೀರ್ ಅಂತಾ ಭೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ತಾಲೂಕು ಕಚೇರಿಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ, ಜನರ ಸಮಸ್ಯೆ ಆಲಿಸಿದ ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೇರಿದಂತೆ ಇತರೆ ಅಧಿಕಾರಿಗಳನ್ನ ತರಾಟೆಗೆ