Home ಕರಾವಳಿ Archive by category ಮಂಗಳೂರು (Page 12)

ಉರ್ವ ಶ್ರೀ ಮಹಾಗಣಪತಿ ದೇವಳದಲ್ಲಿ ಬ್ರಹ್ಮಕಲಶೋತ್ಸವ

ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ

ಫೆ.4ರಂದು ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್

ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16 ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮವನ್ನು ಫೆಬ್ರವರಿ 4ರಂದು ಆದಿತ್ಯವಾರ ಬೊಂದೆಲ್ ಶಾಲಾ ವಠಾರದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಗಣ್ಯ ವ್ಯಕ್ತಿ: ವ| ಫಾ ಆಂಡ್ರ್ಯೂ ಲಿಯೋ ಡಿಸೋಜ, “ಶ್ರೀ ರಾಯ್ ಕಾಸ್ಟೆಲಿನೊ” ಶ್ರೀ ಲುವಿ ಪಿಂಟೊ,ಶ್ರೀ ಜೋಸೆಫ್ ಮಾಥಾಯಸ್, ಶ್ರೀ

ಮಂಗಳೂರು: ಬಿಎನ್‌ ಐ ಯುನಿಟಿ ಕಪ್ ಸೀಸನ್-4ಗೆ ಚಾಲನೆ

ಮುಕುಂದ್ ಎಂಜಿಎಮ್ ರಿಯಾಲಿಟಿ ವತಿಯಿಂದ ಬಿಎನ್‌ಐ ಮಂಗಳೂರು ಮತ್ತು ಉಡುಪಿ ಸಹಯೋಗದೊಂದಿಗೆ ಯುನಿಟಿ ಕಪ್ ಸೀಸನ್ -4 ನಗರದ ಪದವು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿರುವ ಬಿಎನ್‌ಐ ಸಂಸ್ಥೆ, ಉದ್ಯಮದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಬಿಡುವಿನ ಸಂದರ್ಭದಲ್ಲಿ ಕ್ರೀಡಾಕೂಟವನ್ನು ಆಯೋಜಿಸಿ, ಕ್ರೀಡೆಗೆ ಕೂಡ ಪ್ರೋತ್ಸಾಹ ನೀಡಿಕೊಂಡು ಬರುತ್ತಿದ್ದಾರೆ. ಅಂತೆಯೇ ಇಂದು ನಗರದ ಪದವು

ಪಡುಬಿದ್ರಿ: ಯುಪಿಸಿಎಲ್‌ನಿಂದ ಕೇರಳಕ್ಕೆ ವಿದ್ಯುತ್ ಸರಬರಾಜು, ಗ್ರಾಮಸ್ಥರ ವಿರೋಧ

ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ ಜನರಿಗೆ ಯಾವುದೇ ಮಾಹಿತಿ ನೀಡದೆ ಇನ್ನಾ ಪ್ರೌಢಶಾಲಾ ಬಳಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್

ಚಿಕ್ಕಮಂಗಳೂರು: ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ಜಿಲ್ಲೆಯ ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ರಾಘವೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ವಾಸು ಪೂಜಾರಿ,ಗಣೇಶ್ ಪೂಜಾರಿ,ಉಪಾಧ್ಯಕ್ಷರಾದ ಸತೀಶ್

ದೇಶವಾಸಿಗಳಿಗೆ ನಿರಾಶೆಯ ಬಜೆಟ್ : ಮಂಜುನಾಥ ಭಂಡಾರಿ

ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ ಭಾಷಣ ಮಾಡಿದರೇ ಹೊರತು ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಯಾವುದೇ ಯೋಜನೆ ಪ್ರಕಟಿಸಿಲ್ಲ. ದೇಶದ ಆದಾಯ ಮೂಲವಾದ ಕೃಷಿ, ಉದ್ಯಮ, ಸೇವಾ ಕ್ಷೇತ್ರವನ್ನು ಕಡೆಗಣಿಸಲಾಗಿದೆ. ಬಹುನಿರೀಕ್ಷೆಯಿಂದ ಬಜೆಟ್‌ನ್ನು ಕಾಯುತ್ತಿದ್ದ ದೇಶವಾಸಿಗಳಿಗೆ ಕೇಂದ್ರ ಸರಕಾರ ನಿರಾಶೆ ಮೂಡಿಸಿದೆ ಎಂದು

ಪ್ರಗತಿ ಹಿನ್ನಡೆಯ ಸಂಕೇತ: ಕೆ. ಹರೀಶ್ ಕುಮಾರ್

ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್‌ನಲ್ಲಿ 17.68 ಕೋಟಿ ರೂ. ನಗದು ಜಮಾ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ

ಮಂಗಳೂರು : ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ವೈಷ್ಣವಿಗೆ ಸನ್ಮಾನ

ಕುಲಶೇಖರದ ಕಟ್ಟೆ ಫ್ರೆಂಡ್ಸ್ ವತಿಯಿಂದ 26ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಊರ ಹತ್ತು ಸಮಸ್ತರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಶ್ರೀ ವೀರನಾರಾಯಣ ಅಶ್ವಥ ಕಟ್ಟೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕುಮಾರಿ ವೈಷ್ಣವಿ ಯವರಿಗೆ ಶಾಲು ಹೊದಿಸಿ ಫಲ ಪುಷ್ಪ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ

ಫೆ.2ರಂದು ಕರಾವಳಿಯಲ್ಲಿ ಕ್ಲಾಂತ ಸಿನಿಮಾ ಬಿಡುಗಡೆ

ಸಸ್ಪೆನ್ಸ್, ಥ್ರಿಲ್ಲರ್, ಆಕ್ಷನ್ ಬೇಸ್ಡ್ ಸಿನಿಮಾ `ಕ್ಲಾಂತ ಕರಾವಳಿಯ ಸಿನಿಮಾ ಮಂದಿರದಲ್ಲಿ ಫೆ.2ರಂದು ಬಿಡುಗಡೆ ಕಾಣಲಿದೆ. ಚಿತ್ರದ ಬಹುತೇಕ ಭಾಗ ಕರಾವಳಿಯಲ್ಲಿಯೇ ಚಿತ್ರೀಸಲಾಗಿದೆ ಎಂದು ಚಿತ್ರದ ನಿರ್ದೇಶಕ ವೈಭವ್ ಪ್ರಶಾಂತ್ ಹೇಳಿದರು.ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಮಣ್ಣಿನ ಮಹಿಮೆ, ಆಚಾರ ವಿಚಾರ, ಸಂಸ್ಕೃತಿಯ ಜತೆಯಲ್ಲಿ ಕೊರಗಜ್ಜ ದೈವದ ಪವಾಡ ಸಾರುವ ವಿಚಾರಗಳು ಚಿತ್ರದಲ್ಲಿ ನೀಡಲಾಗಿದೆ.