ಕಳೆದ ಒಂಬತ್ತೂವರೆ ವರುಷಗಳಿಂದ ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟನಾಗಿ ಸೇವೆ ಸಲ್ಲಿಸುತ್ತಿರುವ ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ಡಾ. ಮುರಲೀಮೋಹನ್ ಚೂಂತಾರುರವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.ಇವರು ಸಲ್ಲಿಸಿದ ಪ್ರಾಮಾಣಿಕ, ಪಾರದರ್ಶಕ, ನಿಷ್ಪಕ್ಷಪಾತ ಮತ್ತು ನಿಷ್ಕಾಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಗೃಹ ಮಂತ್ರಾಲಯದ
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಆಶ್ರಯದಲ್ಲಿ ಕ್ರೀಡಾಕೂಟವನ್ನು ದಿನಾಂಕ 11.08.2024 ರಂದು ಭಾರತ್ ಮಾತಾ ಪ್ರಾಥಮಿಕ ಶಾಲೆ, ಪುನರೂರು ಇಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಕೋಟ್ಯಾನ್ ಹರಿಪಾದೆಯವರು ವಹಿಸಿ ಕ್ರೀಡೆಯಿಂದ ಮಕ್ಕಳ ಮಾನಸಿಕ,ಶೈಕ್ಷಣಿಕ ಮತ್ತು ದೈಹಿಕ ಸಮತೋಲನ ಸಾಧ್ಯ
ಮಂಗಳೂರು: ನಾಗರಾಧನೆ, ದೈವಾರಾಧನೆ, ದೇವತಾರಾಧನೆಯ ಮುಖೇನ ಪ್ರಕೃತಿಯನ್ನು ಆರಾಧಿಸುವ ಪುಣ್ಯ ನೆಲ ತುಳುನಾಡು. ಈ ನೆಲದಲ್ಲಿ 12 ತಿಂಗಳಿಗೂ ಮಹತ್ವವಿದೆ, ವಿಶೇಷ ಆಚರಣೆ ಇದೆ. ಆಟಿ ತಿಂಗಳು ಅದರಲ್ಲೂ ಆಟಿ ಅಮಾವಾಸ್ಯೆಯ ದಿವಸ ಸಮಸ್ತ ತುಳುನಾಡಿನ ಜನರು ಜಾತಿ ಮತ ಭೇದವಿಲ್ಲದೆ, ಈ ಔಷಧೀಯ ಗುಣವುಳ್ಳ ಹಾಳೆ ಮರದ ಕೆತ್ತೆ ಕಷಾಯವನ್ನು ವರ್ಷ ಪೂರ್ತಿ ತನ್ನ ರೋಗ ನಿರೋಧಕ ಶಕ್ತಿಯ ವೃದ್ಧಿಗಾಗಿ ಸೇವಿಸುತ್ತಾರೆ. ಆದ್ದರಿಂದ ತುಳುನಾಡು ವಿಶೇಷ ಪರಂಪರೆಗಳ ನಾಡು ಈ ಹಾಳೆ ಮರದ
ಮಂಗಳೂರು : ಆಟಿಯ ಗಮ್ಮತ್ತ್ , ಸಂಭ್ರಮ ಮೊದಲಾದ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ ಆಟಿಯ ಬಗ್ಗೆ ನೈಜ ಚಿತ್ರಣ ನೀಡುವ ‘ಆಟಿದ ಗೇನ’ ಕಾರ್ಯಕ್ರಮ ಭಾನುವಾರ ಮಂಗಳೂರಿನ ತುಳು ಭವನದಲ್ಲಿ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಆಟಿಯ ಹಿನ್ನೆಲೆಯಲ್ಲಿ ಚಿತ್ರ ರಚನಾ ಸ್ಪರ್ಧೆ ಹಾಗೂ ವಿಚಾರ ಮಂಥನ ಕೂಟ ನಡೆಯಿತು. ಹಿರಿಯರು ಹೇಳಿದ ಆಟಿಯ ಮಾಹಿತಿಯ ಬಗ್ಗೆ ಹಾಗೂ ಆಟಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ
ಮಂಗಳೂರು: ಬಸ್‌ನಲ್ಲಿ ಅನಾರೋಗ್ಯಕ್ಕೀಡಾದ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದರ್, ನಿರ್ವಾಹಕರಾದ ಸುರೇಶ್, ಮಹೇಶ್‌ರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಬಳಿಯ ಹೊಟೇಲ್ ವುಡ್ ಲ್ಯಾಂಡ್ ನ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.ಸಂಘದ ಅಧ್ಯಕ್ಷ ಆರ್ ಧನರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ನಿರ್ದೇಶಕ
ದಕ್ಷಿಣಕನ್ನಡ ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು ನಗರದ ಕುಲಶೇಖರ ಕೋಟಿಮುರ ಸಿಲ್ವರ್ ಗೇಟ್‌ನ ಗ್ರಂಥಾಲಯದ ಬಳಿ ಇರುವ ನಾಗೇಶ್ ಎಂಬುವವರ ಮನೆ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ರವರು ಕುಟುಂಬಸ್ಥರಿಗೆ ಧೈರ್ಯ ತುಂಬಿ ಪರಿಹಾರ ಕಾರ್ಯದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕರೆ ಮಾಡಿ ಸೂಚಿಸಿದರು. ಸ್ಥಳದಲ್ಲಿ ಅಜಯ್ ಕುಲಶೇಖರ, ನಿತಿನ್ ಕುಮಾರ್, ಅನಿಲ್, ಹರಿಣಿ ಪ್ರೇಮ್,
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 13ಈ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿ ತಟ್ಟನೆ
ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕಿ ಸವಿತಾ ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ ತುಳುನಾಡಿನಲ್ಲಿ ಆಷಾಡ
ಕರ್ನಾಟಕ ವಿಧಾನಸಭೆಯಲ್ಲಿ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ ಸಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್ ಉಪಸ್ಥಿತರಿದ್ದರು.




























