Home ಕರಾವಳಿ Archive by category ಮಂಗಳೂರು (Page 58)

ತುಳು ಭಾಷೆ ಉಳಿಸಿ ಬೆಳೆಸುವಲ್ಲಿ ಹೊರನಾಡ ತುಳುವರ ಕೊಡುಗೆ ಅನನ್ಯವಾದುದು : ತಾರಾನಾಥ್ ಗಟ್ಟಿ ಕಾಪಿಕಾಡ್

ಮಂಗಳೂರು : ತುಳು ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊರನಾಡಿನ ತುಳುವರು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಹೇಳಿದರು.ಅವರು ಭದ್ರಾವತಿಯ ಬಂಟರ ಭವನದಲ್ಲಿ ಶುಕ್ರವಾರ ಸಂಜೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಕೂಟ ಭದ್ರಾವತಿ ಆಯೋಜಿಸಿದ ತುಳು ಉತ್ಸವವನ್ನು

ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮ

ಕೊಣಾಜೆ : ವಿದ್ಯಾರ್ಥಿಗಳು ಜೀವನದಲ್ಲಿ ಇತಿಹಾಸ ನಿರ್ಮಿಸುವಂತಹ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಬಗರ್ ಹುಕುಂ ಸಮಿತಿ ಮಂಗಳೂರು ವಿಧಾನಾಭಾ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಹೇಳಿದರು. ಉಳ್ಳಾಲ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಉಳ್ಳಾಲ ಇವರ ಸಂಯುಕ್ತ ಆಶ್ರಯದಲ್ಲಿ ಮುಡಿಪು ಗೋಪಾಲಕೃಷ್ಣ ಸಭಾಂಗಣದಲ್ಲಿ ಜರಗಿದ ನಾಡಪ್ರಭು ಕೆಂಪೇಗೌಡ ಜಯಂತಿ ಉದ್ಘಾಟಿಸಿ ಮಾತನಾಡಿದರು. ಇತಿಹಾಸವನ್ನು ಓದಿಕೊಳ್ಳುವ ಅಭ್ಯಾಸ ಇಟ್ಟುಕೊಳ್ಳಿ. 500

ಸೂಜಿಕಲ್‌ಗುಡ್ಡೆ ಬಳಿ ಅಪಾಯದಲ್ಲಿರುವ ಮನೆಗಳು

ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಖಾಸಗಿ ಮನೆ ಕಟ್ಟಡ ನಿರ್ಮಿಸಲು ಅಗೆಯಲಾದ ಮಣ್ಣಿನಿಂದ ಎತ್ತರದ ಪ್ರದೇಶದಲ್ಲಿರುವ ಮನೆಗಳು ಕೆಳಗೆ ಬೀಳುವ ಸ್ಥಿತಿಯಲ್ಲಿವೆ. ಈ

ಭಾರತಕ್ಕೆ ರೈಲಿನಲ್ಲಿ ಕಲ್ಲಿದ್ದಲು ಕಳುಹಿಸಿದ ರಶಿಯಾ

ಐಎನ್‌ಎಸ್‌ಟಿಸಿ- ಅಂತರರಾಷ್ಟಿçÃಯ ಬಡಗಣ ತೆಂಕಣ ಸಾಗಣೆ ನೇರದಾರಿಯ ಮೂಲಕ ಇದೇ ಮೊದಲ ಬಾರಿಗೆ ರಶಿಯಾದ ಕಲ್ಲಿದ್ದಲು ಭಾರತಕ್ಕೆ ಬಂತು.ರಶಿಯಾದಿದ ನೇರ ಭಾರತಕ್ಕೆ ಇಂಟರ್‌ನ್ಯಾಶನಲ್ ನಾರ್ತ್ ಸೌತ್ ಟ್ರಾನ್ಸ್ಪೋರ್ಟ್ ಕಾರಿಡಾರ್ ರಚನೆಯನ್ನು ರಶಿಯಾ 2000ದಲ್ಲಿ ಆರಂಭಿಸಿತ್ತು. ಆದರೆ ತಡವಾಗಿ ಆರಂಭವಾಗಿದೆ. ಇರಾನಿನ ಬಂದರ್ ಅಬ್ಬಾಸ್‌ವರೆಗೆ ರೈಲು ಹಾದಿ. ಅಲ್ಲಿಂದ ಹಡಗು. ಮುಂದಿನ ರೈಲು ಹಾದಿ ಆಲೋಚನೆಯಲ್ಲೇ ಇದೆ.ಈಗ ರಶಿಯಾವು ಕಜ್‌ಬಾಸ್‌ನಿಂದ ಎರಡು ರೈಲು ಭರ್ತಿ

ಶಿಬಾಜೆ, ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಯುವತಿ ಬಲಿ

ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು

ಮಂಗಳೂರು : ಹೀರೋ ಮೋಟೋಕಾರ್ಪ್‌ನ ಎಕ್ಸ್‌ಕ್ಲೂಸಿವ್ ಎಲೆಕ್ಟ್ರಿಕ್ ಹೀರೋ ವಿಡಾ ಹಬ್ ಶೋರೂಂ ಮಂಗಳೂರಿನಲ್ಲಿ ಲೋಕಾರ್ಪಣೆ…

ಭಾರತೀಯ ಗ್ರಾಹಕರ ವಿವಿಧ ಬೇಡಿಕೆಗಳಿಗೆ ಅನುಗುಣವಾಗಿ ದ್ವಿಚಕ್ರವಾಹನಗಳ ಮಾರಾಟ ಮತ್ತು ಸೇವೆಯಲ್ಲಿ ಮುಂಚೂಣಿಯಲ್ಲಿರುವ ಹೀರೋ ಮೋಟೋಕಾರ್ಪ್‌ನ ವಿಡಾ ಹಬ್ ಎಕ್ಸ್‌ಕ್ಲೂಸಿವ್ ನೂತನ ಎಲೆಕ್ಟ್ರಿಕ್ ಶೋರೂಂ ಮಂಗಳೂರಿನ ವೆಲೆನ್ಸಿಯಾದಲ್ಲಿ ಲೋಕಾರ್ಪಣೆಗೊಂಡಿತು. ದೇಶದ ಅತ್ಯುನ್ನತ ದ್ವಿಚಕ್ರವಾಹನಗಳ ಉತ್ಪಾದನಾ ಕ್ಷೇತ್ರದಲ್ಲಿ ಮೈಲಿಗಲ್ಲು ಸಾಧಿಸಿರುವ ಹೀರೋ ಮೋಟೋಕಾರ್ಪ್ ಗ್ರಾಹಕರ ಮನೆಮಾತಾಗಿದೆ. ಪರಿಸರ ಸ್ನೇಹಿ ಹಾಗೂ ಇಂದಿನ ಗ್ರಾಹಕರಿಗೆ ಅಗತ್ಯವಾಗಿರುವ

ಮಂಗಳೂರು: ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ಮೃತ್ಯು

ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ದುರಂತ ಸಾವನ್ನಪ್ಪಿದ ಘಟನೆ ನಗರದ ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ಬಳಿ ನಡೆದಿದೆ. ಪುತ್ತೂರು ರಾಮಕುಂಜ ನಿವಾಸಿ ದೇವರಾಜ್ ಗೌಡ(46), ಹಾಸನ ಜಿಲ್ಲೆಯ ಆಲೂರು ಮೂಲದ ರಾಜು (50) ಮೃತರು. ಇವರು ರೊಸಾರಿಯೋ ಸ್ಕೂಲ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಇವರ ಮನೆ ಬಳಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿತ್ತು. ಎಂದಿನಂತೆ ನಸುಕಿನಲ್ಲಿ ನಾಲ್ಕು ಗಂಟೆ ವೇಳೆಗೆ ಚಾಲಕ ರಾಜು

ಮಂಗಳೂರು : ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ

“ಆರಾಟ” ಕನ್ನಡ ಸಿನಿಮಾ ಬಿಡುಗಡೆ ತುಳುನಾಡಿನ ಸಂಸ್ಕ್ರತಿಯನ್ನು ಬಿಂಬಿಸುವ ಸಿನಿಮಾ

ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕ್ರತಿಯನ್ನು,ನಮ್ಮ ಪರಂರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು. ಮುಖ್ಯ ಅತಿಥಿ ಕಟೀಲು ಯಕ್ಷಗಾನ ಮೇಳದ ಮುಖ್ಯಸ್ಥ

ವಿ4 ನ್ಯೂಸ್‌ಗೆ 19ನೇ ವಾರ್ಷಿಕೋತ್ಸವದ ಸಂಭ್ರಮ

ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ವಿ4 ನ್ಯೂಸ್‌ಗೆ 19ನೇ ವರ್ಷದ ಸಂಭ್ರಮ. ನಗರದ ಯೆಯ್ಯಾಡಿಯಲ್ಲಿರುವ ವಿ4 ನ್ಯೂಸ್ ಸ್ಟುಡಿಯೋದಲ್ಲಿ ಕೇಕ್ ಕತ್ತರಿಸಿ ಸಂಭ್ರಮದಿಂದ ವಾರ್ಷಿಕೋತ್ಸವನ್ನು ಆಚರಿಸಲಾಯಿತು. ಕರಾವಳಿ ಕರ್ನಾಟಕದ ಜನಪ್ರೀಯ ಚಾನೆಲ್ ಆಗಿ ಹೊರಹೊಮ್ಮಿರುವ ವಿ4 ನ್ಯೂಸ್ ಕರಾವಳಿಯ ಸುದ್ದಿಗಳು ಮಾತ್ರವಲ್ಲದೆ ರಾಜ್ಯ, ರಾಷ್ಟ್ರೀಯ ಅಂತರರಾಷ್ಟ್ರೀಯ ಸುದ್ದಿಗಳನ್ನು ಭಿತ್ತರಿಸುವುದರ ಜೊತೆಗೆ, ಕಾಮಿಡಿ ಪ್ರೀಮಿಯರ್ ಲೀಗ್