Home ಕರಾವಳಿ Archive by category ಮಂಗಳೂರು (Page 68)

ಮಂಗಳೂರು : ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ ನಿಧನ

ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ಮಧ್ಯಾಹ್ನ ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು ವರ್ಷ ಕೆಲಸ ಮಾಡಿದ್ದರು

ಮಂಗಳೂರು : ಬೈಕಂಪಾಡಿ ಸೀ ಫುಡ್ ಫ್ಯಾಕ್ಟರಿ ಬೆಂಕಿಗಾಹುತಿ

ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಶಿಹಾರ್ ಎಂಟರ್ ಪ್ರೈಸಸ್ ಎಂಬ ಈ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಫ್ಯಾಕ್ಟರಿಯನ್ನು ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಎಂಆರ್ ಪಿಎಲ್, ಎನ್ ಎಂಪಿಟಿನಿಂದ ಸುಮಾರು 8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟವು. ನಿರಂತರ ಮೂರೂವರೆ ಗಂಟೆಗಳ

ಮಾ.30ರಂದು ಕರಿಯರ್ ಎಕ್ಸ್‌ಪ್ಲೋರೇಷನ್ ಕಾರ್ಯಾಗಾರ

ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿಯ ಡಿಸೈನ್ ವಿಭಾಗದ ವತಿಯಿಂದ ಕರಿಯರ್ ಎಕ್ಸ್‌ಪ್ಲೋರೇಷನ್ ಮಾರ್ಚ್ 30ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಅರುಣ್ ಎ ಭಾಗವತ್ ತಿಳಿಸಿದ್ದಾರೆ.ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದ್ವಿತೀಯ ಪಿಯುಸಿ ಆದ ನಂತರ ಮುಂದೇನು ಎಂಬ ಬಗ್ಗೆ ಕಾರ್ಯಾಗಾರ ನಡೆಯಲಿದೆ. ಯೆನೆಪೋಯ ಸಂಸ್ಥೆ ಆರ್ಟ್ಸ್, ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗಾಗಿ

ಪುತ್ತೂರಿನಲ್ಲಿ ಆಯೋಜನೆಗೊಳ್ಳಲಿದೆ ಬೃಹತ್ ಚುನಾವಣಾ ಪ್ರಚಾರ ಸಭೆ : ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಜನಾರ್ದನ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ,

ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಮತ್ತೊಂದು ಸಾಕ್ಷಿ ಇದು: ರವಿಶಂಕರ ಮಿಜಾರು

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿ ಎಂದು ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು ಹೇಳಿದ್ದಾರೆ. ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಚಗುಳಿತನ,

ಮಂಗಳೂರು: ಪಂಪ್ವೆಲ್ ಬಳಿ ಭೀಕರ ಅಪಘಾತ

ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ. ಸಮಿತ್ ಶೆಟ್ಟಿ ಕೊಟ್ಟಾರದಲ್ಲಿರುವ ತನ್ನ ರೂಮ್ ನಿಂದ ಇಂದು ಬೆಳಗ್ಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾ.ಹೆ. 66ರ ಪಂಪ್ವೆಲ್ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ

ರಾಜ್ಯವನ್ನು ದಿವಾಳಿಯೆಬ್ಬಿಸಿ ಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಡಾ. ವೈ ಭರತ್ ಶೆಟ್ಟಿ

ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿ ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.ಕಾಂಗ್ರೆಸ್ ಪಕ್ಷ ತನ್ನ

ಮಂಗಳೂರು: ಸೌಹಾರ್ದ ಇಫ್ತಾರ್ ಕೂಟ – 2024

ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮಗಳ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ನಗರದ ಪುರಭವನದಲ್ಲಿ ಜರುಗಿದ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿ, CSI ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಹೇಮಚಂದ್ರ ಕುಮಾರ್,

ಮಂಗಳೂರು : ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ.,