ಮೂಡುಬಿದಿರೆ : ಗಂಟಾಲ್ ಕಟ್ಟೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ ನೇತೃತ್ವದ ತಂಡವು ದಾಳಿ ನಡೆಸಿ ಸುಮಾರು 50 ಕೆ.ಜಿ ದನದ ಮಾಂಸ, ಪರಿಕರಗಳು ಹಾಗೂ 2 ಕಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ನಡೆದಿದೆ. ಗಂಟಾಲ್ ಕಟ್ಟೆಯ ಜಲೀಲ್ ಎಂಬವನ ಮನೆಯ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಹಸುವನ್ನು ಕಡಿದು
ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ
ಮೂಡುಬಿದಿರೆ : ವಿವಿಧ ಪೂಜಾ ಸಾಮಗ್ರಿಗಳ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಟೀಲು ದೇವಳದ ಆಡಳಿತ ಮಂಡಳಿಯವರು ವಿವಿಧ ಸೇವೆಗಳ ಮೌಲ್ಯವನ್ನು ಏರಿಸಿದ್ದರೂ ಅದು ಕಾಂಗ್ರೆಸ್ ಸರಕಾರವೇ ಏರಿಸಿದ್ದು ಎಂದು ಜನಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಮೂಡುವಂತೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.ಬಿಜೆಪಿಯ ಐಟಿ ಸೆಲ್,ವಾಟ್ಸಾಪ್ ಮತ್ತು ಫೇಸ್ ಬುಕ್ ಗಳಂತಹ ಸಾಮಾಜಿಕ
ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ಬಳಿ ಇರುವ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ವಿವಾಹಿತ ಮಹಿಳೆಯೋವ೯ರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ಮಂಗಳೂರು ಬೊಂದೆಲ್ ನಿವಾಸಿ ರೋಹಿತ್ ಫೆರ್ನಾಂಡಿಸ್ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ (24ವ)ಮೃತಪಟ್ಟ ಮಹಿಳೆ. ಈಕೆ ಮೂಡುಬಿದಿರೆಯ ಪ್ಲಾನೆಟ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು.
ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕನೊಬ್ಬ ಹೃದಯಾಘಾತವಾಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ಪುತ್ತೂರು ಬೆಟ್ಟಂಪ್ಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್ ಎನ್. (25ವ) ಹೃದಯಾಘಾತಕ್ಕೆ ಬಲಿಯಾದ ಯುವಕ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಡುಬಿದಿರೆ: ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿ ಪಡೆದಿದೆ.ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಮೋಹಿತ್ (ಪ್ರಥಮ), ಆದೇಶ್ ಕುಮಾರ್ (ದ್ವಿತೀಯ), ಶುಭಂ(ತೃತೀಯ), ರೋಹಿತ್(4ನೇ
ಮೂಡುಬಿದಿರೆ : ಬ್ಲಾಕ್ ಕಾಂಗ್ರೆಸ್ ವಕ್ತಾರ, ರಂಗನಟ,ವಾಗ್ಮಿ ರಾಜೇಶ್ ಕಡಲಕೆರೆ ಅವರು ಕನ್ನಡ ಜಾಗೃತಿ ಸಮಿತಿ ದ.ಕ.ಜಿಲ್ಲಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಪ್ರತೀ ಜಿಲ್ಲಾ ಮಟ್ಟದಲ್ಲಿ ಈ ಸಮಿತಿಯನ್ನು ರಚಿಸಿದ್ದು ದ.ಕ.ಜಿಲ್ಲೆಯಿಂದ 5 ಮಂದಿ ಸದಸ್ಯರ ಪೈಕಿ ಮೂಡುಬಿದಿರೆಯಿಂದ ರಾಜೇಶ್ ಕಡಲಕೆರೆ ಅವರನ್ನು ನೇಮಕ ಮಾಡಲಾಗಿದೆ. ಹಲವಾರು ತುಳು,ಕೊಂಕಣಿ
ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ಸಮಾಜ ಮಂದಿರ ಪುರಸ್ಕಾರ 2025 ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ಧಾರೆ. ಸೆ 22ರಿಂದ 26ರವರೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರತೀ ದಿನ ಸಂಜೆ 7 ರಿಂದ ಸಾಹಿತ್ಯ […]
ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ‍್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಭವಿಷ್ಯದ ನೌಕಕರಾಗಬಾರದು.
ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್




























