ಮೂಡುಬಿದಿರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ 50ರ ಪ್ರಯುಕ್ತ ಮೂಡುಬಿದಿರೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜೈನ ಪದವಿಪೂರ್ವ ಕಾಲೇಜಿನ ಕೃತಿ ಮತ್ತು ಸಮೀಕ್ಷಾ ಶೆಟ್ಟಿ, ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. “ಕರ್ನಾಟಕದ ಬಹುತ್ವದ ಸಂಸ್ಕೃತಿಗೆ ಕರಾವಳಿ ಕರ್ನಾಟಕದ ಕೊಡುಗೆಗಳು
ಮೂಡುಬಿದಿರೆ : ಜೇಸಿ ಸಪ್ತಾಹದಂಗವಾಗಿ ಜೆಸಿಐ ಮೂಡುಬಿದಿರೆ ತ್ರಿಭುವನ್ ಮತ್ತು ಇನ್ನರ್ ವೀಲ್ ಕ್ಲಬ್ ನ ಜಂಟಿ ಆಶ್ರಯದಲ್ಲಿ ಮಾಸ್ತಿಕಟ್ಟೆ ಅರ್ಹತಾ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನ ಚಿತ್ರಕಲಾ ಸ್ಪರ್ಧೆ ನಡೆಯಿತು. ಎಲ್ ಕೆಜಿಯಿಂದ 7ನೇ ತರಗತಿಯವರೆಗೆ ವಿವಿಧ ವಿಭಾಗದಲ್ಲಿ ನಡೆದ ಸ್ಪರ್ಧೆಯನ್ನು ಇನ್ನರ್ ವೀಲ್ ಅಧ್ಯಕ್ಷೆ ಬಿಂದಿಯಾ ಎಸ್.ಶೆಟ್ಟಿ ಉದ್ಘಾಟಿಸಿದರು.ಜೆಸಿಐ ನ ಅಧ್ಯಕ್ಷ ಪ್ರದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಜೆಸಿಐ ಸೀನಿಯರ್
ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮತ್ತು ಬಂಟರ ಮಹಿಳಾ ಘಟಕದ ಆಶ್ರಯದಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಮಾನಸಿಕ ಒತ್ತಡ – ಪರಿಹಾರೋಪಾಯಗಳು ಎಂಬ ವಿಷಯದ ಕುರಿತು ವಿಶೇಷ ಮಾಹಿತಿ ಶಿಬಿರವು ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಣಿಪಾಲ ಮಾಹೆ ಸಂಸ್ಥೆಯ ಸ್ಟುಡೆಂಟ್ ಕೌನ್ಸೆಲ್ಲರ್ ಡಾ. ರಾಯನ್ ಮಥಾಯಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಇಂದಿನ ಸಮಾಜದಲ್ಲಿ ಮಾನಸಿಕ ಒತ್ತಡಗಳಿಗೆ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ
ಮೂಡುಬಿದಿರೆ: ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಹಲವು ಬಾರಿ ಸೋತವರೂ ತಾವು ಮುಖ್ಯಮಂತ್ರಿ ಪದವಿಗೆ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿರುವುದರಿಂದ ರಾಜಕೀಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.’ಪ್ರಾಸಿಕ್ಯೂಷನ್ ಆದೇಶದ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರ ಬೆಂಬಲಕ್ಕೆ
ಮೂಡುಬಿದಿರೆ: ತಾಲೂಕಿನ ಪೊಲೀಸ್ ಠಾಣೆಯ ಆವರಣದಲ್ಲಿ ಸುಮಾರು ನಾಲ್ಕು ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪೊಲೀಸ್ ವಸತಿಗೃಹಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಕೋಟ್ಯಾನ್ ಅವರು ನಾಲ್ಕು ಕೋ.ವೆಚ್ಚದ ಮೂರು ಅಂತಸ್ತಿನಲ್ಲಿ ಒಟ್ಟು 12 ವಸತಿಗೃಹಗಳು ನಿರ್ಮಾಣವಾಗಲಿದ್ದು ಪೊಲೀಸ್ ಕುಟುಂಬಕ್ಕೆ ಸಹಕಾರಿಯಾಗಲಿದೆ,ಮುಂದೆ ಹಂತಹಂತವಾಗಿ ಪೊಲೀಸರ ಬೇಡಿಕೆಯಂತೆ ವಸತಿಗೃಹಗಳಿಗೆ ಆದ್ಯತೆ
ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ ನಿರ್ಕೇರೆ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ.ಕೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ ನಿರ್ಕೇರೆ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ.ಕೆ ಅವರು
ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು, ಗ್ರಂಥಾಲಯ ಸಹಾಯಕಿಯಾಗಿದ್ದ ಶ್ರೀಮತಿ ಹೇಮಲತಾ (49) ಅಲ್ಪ ಕಾಲದ ಅಸ್ವಾಸ್ಥ್ಯದಿಂದ ಸೆ 2ರಂದು ನಿಧನ ಹೊಂದಿದರು. ಅವರು ಪತಿಯನ್ನು ಅಗಲಿದ್ದಾರೆ. ಕಳೆದ 10 ವರ್ಷಗಳಿಂದ ಅವರು ಕಾಲೇಜಿನ ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ನಿಧನಕ್ಕೆ ಮಹಾವೀರ ಕಾಲೇಜು ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.
ಮೂಡುಬಿದಿರೆ : ದ್ವಿಚಕ್ರ ವಾಹನ ಸವಾರರಿಬ್ಬರು ವೃದ್ಧೆಯೋರ್ವರ ಬಳಿ ದಾರಿ ಕೇಳುವ ನೆಪದಲ್ಲಿ ಮಾತನಾಡಿ ಆಕೆಯ ಕುತ್ತಿಗೆಯಲ್ಲಿದ್ದ 3 ಪವನಿನ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲೂಕಿನ ಪಡುಮಾರ್ನಾಡು ಗ್ರಾ.ಪಂ.ನ ಮಾರ್ನಾಡಿನಲ್ಲಿಸೋಮವಾರ ಮಧ್ಯಾಹ್ನ ನಡೆದಿದೆ. ಮಾರ್ನಾಡು ವರ್ಧಮಾನ ಬಸದಿ ಬಳಿಯ 82 ರ ವಯಸ್ಸಿನ ವೃದ್ಧೆ ಪ್ರೇಮಾ ಅವರು ತಮ್ಮ ಮನೆಯ ಸಮೀಪದ ಅಂಗಡಿಯಿಂದ ಹಾಲು ಹಾಲು ತರುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸವಾರರಿಬ್ಬರು
ಪವರ್ ಫ್ರೆಂಡ್ಸ್ ಬೆದ್ರ ಮಹಿಳಾ ಘಟಕ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅದ್ಯಕ್ಷ ಬಿಂದಿಯಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ನಮಗೆ ಆರೋಗ್ಯ ಮುಖ್ಯವಾಗಿ ಬೇಕು. ಒಂದೊಂದು ಅಂಗವೂ




























