ಮೂಡುಬಿದಿರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಯ್ಕೆಯಾಗಿರುವ ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ ಕೇಂದ್ರವು ಉದ್ಘಾಟನೆಗೊಂಡಿತು. ಪಂಚಾಯತ್ ಅಧ್ಯಕ್ಷ ಉದಯ್ ಪೂಜಾರಿ ಅವರು ಕೂಸಿನ ಮನೆಯನ್ನು ಉದ್ಘಾಟಿಸಿ, ಗ್ರಾಮಸ್ಥರ ಪ್ರೋತ್ಸಾಹದಿಂದ ಹೆಚ್ಚಿನ ಮಕ್ಕಳ
ಮೂಡುಬಿದಿರೆ: ಇತ್ತೀಚೆಗೆ ಅಕಾಲಿಕವಾಗಿ ಮರಣ ಹೊಂದಿರುವ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬಂದಿ ದಿ.ಚಂದ್ರಹಾಸ್ ಅವರಿಗೆ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಮೂಡುಬಿದಿರೆ ತಾಲೂಕು ಪಂಚಾಯತ್, ತಾ.ಪಂ.ವ್ಯಾಪ್ತಿಯ ಅಧಿಕಾರಿ ಮತ್ತು ನೌಕರರ ವತಿಯಿಂದ ಶನಿವಾರ ಸಮಾಜ ಮಂದಿರದಲ್ಲಿ ಶ್ರದ್ಧಾಂಜಲಿ ಅರ್ಪಿಸುವ ಸಭೆ ನಡೆಯಿತು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಸಭೆಯ ಅಧ್ಯಕ್ಷತೆ ವಹಿಸಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿ
ಮೂಡುಬಿದಿರೆ : 540 ಹಂಚುಗಳನ್ನು 1ನಿಮಿಷ 57 ಸೆಕೆಂಡುಗಳಲ್ಲಿ ಎರಡೂ ಕೈಗಳಿಂದ ಪುಡಿಗಟ್ಟುವ ಮೂಲಕ ಕರಾಟೆ ಪಟು ಮಹಮ್ಮದ್ ನದೀಂ ನೋಬಲ್ ವರ್ಲ್ಡ್ ರೆಕಾಡ್೯ಗೆ ಭಾಜನರಾದರು. ನೋಬಲ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಸ್ಪರ್ಧೆಗಳ ಫಲಿತಾಂಶಗಳನ್ನು ದಾಖಲೀಕರಿಸಿ ನೋಬಲ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿಗೆ ಆಯ್ಕೆ ಮಾಡುವ ಸಂಸ್ಥೆಯಾಗಿದೆ. ಇಲ್ಲಿನ ಸಮಾಜ ಮಂದಿರದಲ್ಲಿ ಶನಿವಾರ ಕರಾಟೆ ರಿಯೂ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಡೆದ ಕರಾಟೆ
ಮೂಡುಬಿದಿರೆ: ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಉಷಾ ಎಸ್. ಆರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಸ್ನಾಚ್ ವಿಭಾಗದಲ್ಲಿ 91 ಕೆ.ಜಿ, ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ118 ಕೆ.ಜಿ ಒಟ್ಟು 209 ಕೆಜಿ ಭಾರ ಎತ್ತಿದ್ದಾರೆ. ಕರ್ನಾಟಕ ರಾಜ್ಯ ದಾಖಲೆ ಆಗಿದೆ. 87 ಕೆ.ಜಿ ತೂಕದ ವಿಭಾಗದಲ್ಲಿ ಸ್ವರ್ಧಿಸಿದ್ದರು.
ಮೂಡುಬಿದಿರೆ: ಮೂರು ವರ್ಷಗಳ ಹಿಂದೆ ಕಡಂದಲೆ ಗ್ರಾಮೀಣ ಅಂಚೆ ಕಚೇರಿಯಲ್ಲಿ ಗ್ರಾಹಕರ ಸುಮಾರು ರೂ 13.50 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಅಂಚೆ ಪಾಲಕ ಅಶೋಕ್ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ.2010ರಿಂದ 2021ರ ಅವಧಿಯಲ್ಲಿ ಅಶೋಕ್ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಸುಮಾರು 22 ಅಂಚೆ ಗ್ರಾಹಕರ ಉಳಿತಾಯ ಖಾತೆ ಮತ್ತು 4 ಗ್ರಾಹಕರ ವಿವಿಧ ವಿಮಾ ಪಾಲಿಸಿಗಳ ಸುಮಾರು 13.50 ಲಕ್ಷ ಹಣವನ್ನು
ಮೂಡುಬಿದಿರೆ: ಪಾಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ನಿ. ಕೇಮಾರು ಇದರ ಅಧ್ಯಕ್ಷೆಯಾಗಿ ನೀರಜಾಕ್ಷಿ ಎಸ್.ಶೆಟ್ಟಿ ಪುನರಾಯ್ಕೆಯಾಗಿದ್ದಾರೆ.ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಈ ಹಿಂದಿನ ಎಲ್ಲಾ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೀರಜಾಕ್ಷಿ ಶೆಟ್ಟಿ ಅವರು ಸತತ 5ನೇ ಬಾರಿಗೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಅಮಿತಾ ನಾಯ್ಕ್, ನಿರ್ದೇಶಕರುಗಳಾಗಿ ನಳಿನಾಕ್ಷಿ
ಮೂಡುಬಿದಿರೆ : ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನ ಸಿಬ್ಬಂದಿ ಚಂದ್ರಹಾಸ (29ವ) ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಲ್ಲಮುಂಡ್ಕೂರು ಗ್ರಾ.ಪಂಚಾಯತ್ ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ.ದಾದು ಎಂಬವರ ಪುತ್ರರಾಗಿರುವ ಚಂದ್ರಹಾಸ್ ಅವರು ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಗೆ ನಡೆದುಕೊಂಡು ಬರುತ್ತಿದ್ದ ಸಂದರ್ಭ ಮನೆಯಿಂದ ನೂರು ಮೀ.ದೂರದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ಕಳೆದ 10 ವರ್ಷಗಳಿಂದ ಪಂಚಾಯತ್ ನಲ್ಲಿ
ಮೂಡುಬಿದಿರೆ : ಕಳೆದ ಮೂರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ವಿವಿಧ ಸಾಧನೆಗಳನ್ನು ಮಾಡಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಈ ಬಾರಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಯ ನಿರ್ದೇಶಕ ಸ್ಥಾನಗಳಿಗೆ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಯಚಂದ್ರ ಜೈನ್ ಕೆ. ಅವರು ಮೂಡುಬಿದಿರೆ ವಿಧಾನ ಸಭಾ
ಮೂಡುಬಿದಿರೆ: ಬಲಿಷ್ಠ ಭಾರತ ನಿರ್ಮಾಣವಾಗಬೇಕಾದರೆ ತರಗತಿಯಲ್ಲಿ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಸಿಗಬೇಕು. ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ಓರ್ವ ಉತ್ತಮವಾದ ಡಾಕ್ಟರ್, ಎಂಜಿನಿಯರ್, ಸಿ.ಎ ಹಾಗೂ ವಕೀಲರನ್ನು ಮಾತ್ರ ತಯಾರು ಮಾಡುವುದಲ್ಲ ಬದಲಾಗಿ ಎಲ್ಲಾ ಕ್ಷೇತ್ರಗಳನ್ನು ನಿಭಾಯಿಸಬಲ್ಲ ಓರ್ವ ಉತ್ತಮವಾದ ರಾಜಕರಣಿಯನ್ನು ನೀಡುವ ಶಕ್ತಿ ಕೇಂದ್ರಗಳಾಗಬೇಕು ಎಂದು ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು. ಅವರು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ
ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಾಲೇಜಿಗೆ 2023-24ರಿಂದ ಮುಂದಿನ ಹತ್ತು ವರ್ಷಗಳಿಗೆ ಅನ್ವಯವಾಗುವಂತೆ ಸ್ವಾಯತ್ತ ಸ್ಥಾನಮಾನ ನೀಡುವ ಕುರಿತು ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು



























