Home ಕರಾವಳಿ Archive by category ಮೂಡಬಿದರೆ (Page 35)

ಮೂಲ್ಕಿ: ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಡಾ. ಗಣೇಶ ಅಮೀನ್ ಸಂಕಮಾರ್ ಆಯ್ಕೆ

ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು ಕನ್ನಡ ಸಾಹಿತಿ ಡಾ ಗಣೇಶ ಅಮೀನ್ ಸಂಕಮಾರ್ ಆಯ್ಕೆಯಾಗಿದ್ದಾರೆ ಎಂದು ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದೇ ಡಿಸೆಂಬರ್ 27ರಂದು ಮೂಲ್ಕಿ ಕಾರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.  ಡಾ.ಗಣೇಶ ಅಮೀನ್

ಮೂಡುಬಿದಿರೆ: ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್‌ಗೆ ಕ್ಷಣಗಣನೆ

ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ  ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ  ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29ನೇ ವರ್ಷದ ಸಡಗರಕ್ಕೆ ಸಜ್ಜಾಗಿದ್ದು  ಇಂದಿನಿಂದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಲಾಸಕ್ತರಿಗೆ ರಸದೌತಣ

ಮೂಡುಬಿದಿರೆ: ಹಿರಿಯ ಆಟೋ ಚಾಲಕ ಗುರುವಪ್ಪ ಪೂಜಾರಿ ನಿಧನ

ಮೂಡುಬಿದಿರೆ: ಕಳೆದ ಹಲವಾರು ವರ್ಷಗಳಿಂದ ಮೂಡುಬಿದಿರೆಯಲ್ಲಿ ಹಿರಿಯ ಅಟೋ ಚಾಲಕರಾಗಿ, ರಂಗಕಲಾವಿದರಾಗಿ ಗುರುತಿಸಿಕೊಂಡಿದ್ದ ಒಂಟಿಕಟ್ಟೆಯ ಗುರುವಪ್ಪ ಪೂಜಾರಿ ಗುರುವಪ್ಪ ಪೂಜಾರಿಒಂಟಿಕಟ್ಟೆಯ ಗುರುವಪ್ಪ ಪೂಜಾರಿ(68)ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು.ಮೂಡುಬಿದಿರೆಯಲ್ಲಿ ಸುಮಾರು 45 ವರ್ಷಗಳಿಂದ ರಿಕ್ಷಾ ಚಾಲಕರಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಹಲವು ತುಳು ನಾಟಕಗಳಲ್ಲಿ ಅಭಿನಯಿಸಿದ್ದ ಅವರು ಸಾಂಸ್ಕೃತಿಕ, ಧಾರ್ಮಿಕ

ಮೂಡುಬಿದರೆ: ಬೈಕ್-ಕಾರು ಢಿಕ್ಕಿ : ಯುವಕ ಸಾವು

ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಪೆÇಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ. ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ. ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ

ಮೂಡುಬಿದಿರೆ: ಆಳ್ವಾಸ್ ಶಾಲೆಯಲ್ಲಿ ಇಂಡಿಯನ್ ಸೈನ್ಸ್ ಸೊಸೈಟಿ ಸ್ಪರ್ಧೆ: 5 ಮಾದರಿಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಮೂಡುಬಿದಿರೆ:‘ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಿದಾಗ ಸಾರ್ಥಕ’ಎಂದು ಅಮೆರಿಕ ಫ್ಲಾರಿಡಾದ ಹೂಡಿಕೆ ಬ್ಯಾಂಕರ್ ಎಮಿಲಿ ಆಳ್ವ ಹೇಳಿದರು. ಭಾರತೀಯ ವಿಜ್ಞಾನ ಸಮಾಜ(ಇಂಡಿಯನ್ ಸೈನ್ಸ್ ಸೊಸೈಟಿ) ಸಹಯೋಗದಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆ (ಸಿಬಿಎಸ್‌ಸಿ)ಯಲ್ಲಿ ಶನಿವಾರ ನಡೆದ ‘ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿAಗ್ ಮೇಳ (ಇನ್‌ಸೆಫ್)’ದ ಪ್ರಾದೇಶಿಕ ಮೇಳ ಮತ್ತು ವಿಜ್ಞಾನ ವಿಸ್ತರಣಾ ಕಾರ್ಯಕ್ರಮ’ದಲ್ಲಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ‘ಕುತೂಹಲ ಹಾಗೂ

ಮೂಡುಬಿದಿರೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಧಾನ್ ಎಂ. ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ಬೀದರ್ ನ ಗುರುನಾನಕ್ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ರಾಜ್ಯ ಮಟ್ಟದ ಟೆಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು , ಇದರಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಪ್ರಧಾನ್ ಎಂ. (ಪ್ರಥಮ ಪಿ.ಯು.ಸಿ) ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ

ಮೂಡುಬಿದಿರೆ: ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾಟ, ದ.ಕ ಜಿಲ್ಲೆಗೆ ಪ್ರಥಮ ಸ್ಥಾನ

ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ಇದರಲ್ಲಿ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಇಲ್ಲಿನ ವಿದ್ಯಾರ್ಥಿಗಳಾದ ವಿನ್ಯಾಸ್ ವಿ ಪೂಜಾರಿ, ನಿಧೀಶಾ ಶೆಟ್ಟಿ, ಪ್ರಣಾಮ್ಯ ದೇವಾಡಿಗ ಇವರು ಹರಿಯಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಜವಾಬ್ದಾರಿ ಮೂಡಿಸುವುದು ಯುವ ಸಂಸತ್ತಿನ ಆಶಯ’ ಎಂದು ಶಾಸಕ ಉಮಾನಾಥ್ ಎ ಕೋಟ್ಯಾನ್ ಹೇಳಿದರು. ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ' ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದ ಅಭಿವೃದ್ಧಿ ನಿಟ್ಟಿನಲ್ಲಿ ಶಾಸನಗಳನ್ನು

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2023 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ ಆಳ್ವಾಸ್ ವಿರಾಸತ್ ಸಂದರ್ಭದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಡಿಸೆಂಬರ್ 14ರಿಂದ 17ರವರೆಗೆ

ಮೂಡುಬಿದಿರೆ: ಸಹಕಾರಿ ಸಂಘಗಳಲ್ಲಿ ಸಾಮಾಜಿಕ ಕಳಕಳಿ ಇದೆ- ಡಾ. ಎಂ.ಎನ್ ರಾಜೇಂದ್ರ ಕುಮಾರ್

ಮೂಡುಬಿದಿರೆ: ವಾಣಿಜ್ಯ ಬ್ಯಾಂಕ್‍ಗಳ ಲಾಭದ ಪಾಲು ಗ್ರಾಹಕರಿಗೆ ಸಿಗುವುದು ಕಡಿಮೆ. ಆದರೆ ಸಾಮಾಜಿಕ ಕಳಕಳಿ ಹೊಂದಿರುವ ಸಹಕಾರಿ ಬ್ಯಾಂಕ್‍ಗಳು ತಮ್ಮ ಲಾಭದಲ್ಲಿ ಹೆಚ್ಚಿನ ಪಾಲನ್ನು ಸದಸ್ಯರ ಹಿತಕ್ಕೋಸ್ಕರ ವಿನಿಯೋಗಿಸುತ್ತಿವೆ ಎಂದು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಎಂಸಿಎಸ್ ಸೊಸೈಟಿಯಲ್ಲಿ ನಡೆಯುತ್ತಿರುವ ಸಹಕಾರ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.