ಅನಿವಾಸಿ ಉದ್ಯಮಿ, ಹೊಸನಾಡು ಕೊಡ್ಯಡ್ಕ ಶ್ರೀದೇವೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಮತ್ತು ಆಡಳಿತ ಮೊಕ್ತೇಸರ ಡಾ. ಕೊಡ್ಯಡ್ಕ ಜಯರಾಮ ಹೆಗ್ಡೆ (73) ಅನಾರೋಗ್ಯದಿಂದ ನ.23, ಮಂಗಳವಾರ ಮಧ್ಯಾಹ್ನ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ನಿಧನ ಹೊಂದಿದರು. ಪತ್ನಿ, ಪುತ್ರ , ಪುತ್ರಿಯನ್ನು ಅವರು ಅಗಲಿದ್ದಾರೆ. 23ನೇ ವಯಸ್ಸಿನಲ್ಲಿ ಮಸ್ಕತ್ ಗೆ ತೆರಳಿ
ಮೂಡುಬಿದಿರೆ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4 ರ ರೂ 10 ಕೋಟಿ ಮೊತ್ತದ ಯೋಜನೆಯಲ್ಲಿ 4.46 ಕೋಟಿ ಮೊತ್ತದ 6 ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಹಾಗೂ ಪುರಸಭಾ ನಿಧಿ 2022-23ರಲ್ಲಿ ರೂ 1.36 ಕೋಟಿ ಮೊತ್ತದ 27 ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಮಂಗಳವಾರ ಒಂಟಿಕಟ್ಟೆಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಪುರಸಭಾ ವ್ಯಾಪ್ತಿಗೆ ಬಹುದೊಡ್ಡ ಮೊತ್ತದ ಅನುದಾನದೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ
ಮೂಡುಬಿದಿರೆ: ಡಿ.24ರಂದು ಮೂಡುಬಿದಿರೆ ಒಂಟಿಕಟ್ಟೆಯಲ್ಲಿ ನಡೆಯುವ 20ನೇ ವರುಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವನ್ನು ಶೂನ್ಯ ತ್ಯಾಜ್ಯವಾಗಿ ಮತ್ತು ಕಾಂತಾರ ಸಿನೆಮಾ ದೊಂದಿಗೆ ವಿಭಿನ್ನವಾಗಿ ಜನಾಕರ್ಷಣೆಯೊಂದಿಗೆ ನಡೆಸಲುದ್ದೇಶಿಸಲಾಗಿದೆ ಎಂದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ತಿಳಿಸಿದರು. ಅವರು ಒಂಟಿಕಟ್ಟೆ ಕಡಲಕೆರೆ ಬಳಿಯ ಸೃಷ್ಟಿ ಗಾರ್ಡನ್ ಸಭಾಂಗಣದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ ಸಮಿತಿಯ ಸಮಾಲೋಚನ ಸಭೆಯ
ಮೂಡುಬಿದಿರೆ ಪ್ರಾಂತ್ಯ ಗ್ರಾಮದ ನಿವಾಸಿಯೊಬ್ಬರು ಉಪ್ಪಿನಂಗಡಿಯಲ್ಲಿರುವ ತಾಯಿಯ ಆರೋಗ್ಯ ವಿಚಾರಿಸಿ ತನ್ನ ಮನೆಗೆ ಮರಳಿದಾಗ ಅವರ ಸಂಬಂಧಿಕರು ಕೂಡಿ ಹಾಕಿ ದರೋಡೆ ಮಾಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿ ಪ್ರಾಂತ್ಯ ಗ್ರಾಮದ ಅತ್ತೂರು ನಸೀಬ್ ಎಂಬವರು ತಾಯಿ ಆರೋಗ್ಯ ವಿಚಾರಿಸಿ ತಮ್ಮ ಮನೆಗೆ ನ.11ರಂದು ಬಂದಾಗ, ಅವರ ಮಾವ ಇಸ್ಮಾಯಿಲ್, ತೋಡಾರು ಶರೀಫ್ ಹಾಗೂ ಇತರ ನಾಲ್ವರು ಮನೆಯಲ್ಲಿದ್ದ ಟಿ.ವಿ,
ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ಆಶ್ರಯದಲ್ಲಿ ಕಲ್ಪವೃಕ್ಷ ಸಭಾಭವನದಲ್ಲಿ ನ.14ರಿಂದ 20ರ ತನಕ ನಡೆದ ಸಹಕಾರ ಸಪ್ತಾಹ ಸಂಭ್ರಮ-2022ರ ಸಮಾರೋಪ ಸಮಾರಂಭ ನಡೆಯಿತು. ಕರ್ನಾಟಕ ರಾಜ್ಯ ಸಹಕಾರಿ ಮಾರ್ಕೆಟಿಂಗ್ ಫೆಡರೇಶನ್ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ಅಧ್ಯಕ್ಷತೆ ವಹಿಸಿ ಮಾತನಾಡಿ ಕಳೆದ 25 ವರ್ಷಗಳಿಂದ ಎಂಸಿಎಸ್ ಸೊಸೈಟಿ ಶೇ. 25 ಡಿವಿಡೆಂಡ್ ನೀಡುತ್ತ
ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ಯೋಜನಾ ಫಲಾನುಭವಿಗಳಿಗೆ ಆದೇಶ ಪತ್ರ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಶಾಸಕ ಉಮಾನಾಥ ಕೋಟ್ಯಾನ್ ಪಂಚಾಯತ್ ಸಭಾಂಗಣದಲ್ಲಿ ಕಿಟ್ ವಿತರಿಸಿದರು. ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಮನೆ ನಿರ್ಮಾಣದ ಪ್ರತಿ ಹಂತದಲ್ಲಿ ಫೋಟೋ ತೆಗೆದು ಪಂಚಾಯತ್ ಗೆ ನೀಡಿದರೆ ಹಂತ ಹಂತವಾಗಿ ಹಣ ಮಂಜೂರಾಗುತ್ತದೆ. ಈ ಬಗ್ಗೆ ಪಂಚಾಯತ್ ನಲ್ಲಿ ಸೂಕ್ತ ಮಾಹಿತಿಗಳನ್ನು ಪಡೆದು ಮನೆ ನಿರ್ಮಾಣ ಕಾರ್ಯ ಮಾಡಬೇಕು. ಸರಕಾರಿ
ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ 2.10 ಕೋ.ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ 1.94 ಕೋಟಿ ವೆಚ್ಚದ ಜಲಜೀವನ್ ಮಿಷನ್ ಯೋಜನೆಯ ಒಟ್ಟು 4.04 ಕೋ.ವೆಚ್ಚದ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು. ನಂತರ ನೀರುಡೆ ಚಚ್ 9 ಬಳಿಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೋಟ್ಯಾನ್ ಅವರು ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ಆಗದ ಅಭಿವೃದ್ಧಿ
ಮೂಡುಬಿದಿರೆ: ಮರಣ ಹೊಂದಿದ್ದ ಅಜ್ಜಿಯ ಕಾರ್ಯವನ್ನು ಮುಗಿಸಿ ಬರುತ್ತಿದ್ದ ಸಂದರ್ಭದಲ್ಲಿ ಮೊಮ್ಮಗ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಕಾಂತವಾರ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.ಮೂಲತ: ಚಿಕ್ಕಮಂಗಳೂರಿನವರಾಗಿದ್ದು ಇದೀಗ ಮಹಾವೀರ ಕಾಲೇಜು ಬಳಿಯ ರಾಣಿಕೇರಿ ನಿವಾಸಿಯಾಗಿರುವ ರಾಜೇಶ್ (28ವ) ರಸ್ತೆ ಅಪಘಾತಕ್ಕೆ ಬಲಿಯಾದ ವ್ಯಕ್ತಿ. ರಾಜೇಶ್ ಅವರ ಅಜ್ಜಿ ಬಾಳೆ ಹೊನ್ನೂರಿನಲ್ಲಿ ನಿನ್ನೆ (ಭಾನುವಾರ) ಬೆಳಿಗ್ಗೆ ಮರಣ ಹೊಂದಿದ್ದು ಅವರನ್ನು
ಮೂಡುಬಿದಿರೆಯ ಒಂಟಿಕಟ್ಟೆಯ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕಡಲಕೆರೆ ಬಳಿ ಇರುವ ಕೋಟಿ-ಚೆನ್ನಯ ಕಂಬಳ ಕರೆಯಲ್ಲಿ ಭಾನುವಾರ ನಡೆದ ಕುದಿ ಕಂಬಳವನ್ನು ಶಾಸಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಿಂಬಾವಳಿ ಅವರು ಒಂಟಿಕಟ್ಟೆಯ ಸಭಾಭವನದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಯೇ ಪಕ್ಕದಲ್ಲಿ ನಡೆಯುತ್ತಿದ್ದ ಕುದಿ ಕಂಬಳದ ಕಡೆಗೆ ಕಣ್ಣು ಹಾಯಿಸಿ ಸ್ವಲ್ಪ ಹೊತ್ತು ಅಲ್ಲಿಯೇ ಕಾಲ ಕಳೆದು ಕಂಬಳದ ಬಗ್ಗೆ ಕೇಳಿ
ಮೂಡುಬಿದಿರೆ: ಡೀಮ್ಡ್ ಅರಣ್ಯ ಕಾನೂನನ್ನು ಸರಕಾರ ಸರಳೀಕೃತಗೊಳಿಸಿದರಿಂದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಸೂಚನೆಯಂತೆ 94ಸಿ ಮತ್ತು 94ಸಿಸಿ ಪಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಮೂಲ್ಕಿ,ಮೂಡುಬಿದಿರೆ, ಮಂಗಳೂರು ತಾಲೂಕುಗಳಲ್ಲಿ 3 ಸಾವಿರಕ್ಕೂ ಅಧಿಕ ಹಕ್ಕುಪತ್ರ ವಿತರಣೆಯಾಗಿದೆ ಆದರೆ ಮಾಜಿ ಸಚಿವ ಅಭಯಚಂದ್ರ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾಹಿತಿ ಕೊರತೆಯಿಂದ ಮಾತನಾಡುತ್ತಿದ್ದಾರೆ ಎಂದು




























