ಮೂಡುಬಿದಿರೆ : ಸೇವಾ ದಿವಸದ ಅಂಗವಾಗಿ ಕೇಂದ್ರ ಸರಕಾರವು ಭಾರತ ಸ್ವಚ್ಛತಾ ಲೀಗ್ ‘ ಎಂಬ ಅಂತರ್ ನಗರ ಸ್ಪರ್ಧೆಯನ್ನು ಆಯೋಜಿಸಿದ್ದು ಮೂಡುಬಿದಿರೆಯ ಪುರಸಭೆಯು ವಿವಿಧ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಗರದ ಪ್ರಮುಖ ಸ್ಥಳಗಳಲ್ಲಿ ಸಮಗ್ರ ಸ್ವಚ್ಛತಾ ಆಂದೋಲನ ನಡೆಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಹಸಿರು ನಿಶಾನೆ ತೋರಿಸುವ ಮೂಲಕ ಅಭಿಯಾನಕ್ಕೆ ಚಾಲನೆ
ಮೂಡುಬಿದಿರೆ ತಾಲೂಕಿನ ಅಶ್ವಥಪುರದ ಬೇರಿಂಜೆ ಗುಡ್ಡ ಎಂಬಲ್ಲಿ ಒಂಟಿ ಮಹಿಳೆ ಕಮಲ ಅವರ ಮನೆಗೆ ಕಳೆದ 15 ದಿನಗಳ ಹಿಂದೆ ನುಗ್ಗಿ ಕುತ್ತಿಗೆ ಹಿಡಿದು ಚಿನ್ನಾಭರಣ ಕಳವು ಮಾಡಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಶ್ವತ್ಥಪುರದ ನಿವಾಸಿಗಳಾದ ದಿನೇಶ್ ಪೂಜಾರಿ, ಸುಕೇಶ್ ಪೂಜಾರಿ ಹಾಗೂ ಹರೀಶ್ ಪೂಜಾರಿ ಬಂಧಿತ ಆರೋಪಿಗಳು. ಅಂಗನವಾಡಿ ಸಹಾಯಕಿಯಾಗಿ ದುಡಿಯುತ್ತಿದ್ದ ಕಮಲ ಒಂಟಿಯಾಗಿ ವಾಸವಿದ್ದು. ಇದರ ಮಾಹಿತಿ ಇದ್ದ ಆರೋಪಿಗಳು ಕಳೆದ ತಿಂಗಳು 2 ಜನ
ಮೂಡುಬಿದಿರೆ: ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ ದ.ಕ.ಪ.ಪೂ ಕಾಲೇಜುಗಳ ಪ್ರಾಂಶುಪಾಲರುಗಳ ಸಂಘ ಹಾಗೂ ಮೂಡುಬಿದಿರೆಯ ಜೈನ್ ಪ.ಪೂ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಹೊಸ ಶಿಕ್ಷಣ ನೀತಿಯಲ್ಲಿ ರಾಜ್ಯಶಾಸ್ತ್ರದ ವ್ಯಾಪ್ತಿ ಮತ್ತು ಸ್ವರೂಪ’ದ ಕುರಿತು ರಾಜ್ಯಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಗಾರ ಜೈನ ಪ.ಪೂ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಕಾರ್ಯಗಾರವನ್ನು ಉದ್ಘಾಟಿಸಿ
ವಸತಿ ಯೋಜನೆಗಳಗೆ ಸರಕಾರದಿಂದ ಅನುದಾನ ಬಿಡುಗಡೆಯಾಗದೆ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಹಿಂದೆ ಮಂಜೂರಾತಿ ಆದೇಶ ನೀಡಿದ ಅನೇಕ ಪಲಾನುಭವಿಗಳ ಮನೆಗಳು ಅನುದಾನ ಇಲ್ಲದೆ ಅರ್ಧದಲ್ಲಿ ನಿಂತಿವೆ. ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಫಲಾನುಭವಿಗಳ ಜತೆಗೂಡಿ ಮರಸಭೆ ಮತ್ತು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವುದಾಗಿ ಪುರಸಭೆಯ ಕಾಂಗ್ರೆಸ್ ಸದಸ್ಯರು ಎಚ್ಚರಿಕೆ ನೀಡಿದರು. ಪುರಸಭೆ ವಿಶೇಷ ಸಭೆ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ
ಮೂಡುಬಿದಿರೆ: ಜೇಸಿಐ ಮೂಡುಬಿದಿರೆ ತ್ರಿಭುವನ್ ವತಿಯಿಂದ ಜೇಸಿ ಸಪ್ತಾಹದಂಗವಾಗಿ ನಿಶ್ಮಿತಾ ಪ್ಯಾರಡೈಸ್‍ನಲ್ಲಿ ನಡೆದ ಅವಿಭಜಿತ ದ.ಕ.ಜಿಲ್ಲಾ ಮಟ್ಟದ ಕರೋಕೆ ಸಂಗೀತ ರಿಯಾಲಿಟಿ ಶೋ ಸ್ಪರ್ಧೆಯಲ್ಲಿ ಬಂಟ್ವಾಳದ ಸಾತ್ವಿಕ್ ವಿನ್ನರ್ ಆಗಿ ಮೂಡಿ ಬಂದರು. ಹೆಬ್ರಿಯ ಸಂದೀಪ್ ರನ್ನರ್ ಅಪ್ ಹಾಗೂ ಮಂಗಳೂರಿನ ಅಭಿನವ್ ಎಸ್. ಭಟ್ ತೃತೀಯ ಬಹುಮಾನ ಗಳಿಸಿದರು. ರವಿ ಮಿಜಾರು, ಮುರಾರಿ ರಾವ್ ಹೊಸಬೆಟ್ಟು ಹಾಗೂ ಅನುಷಾ ಉಡುಪಿ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ಸಂಜೆ
ಮೂಡುಬಿದಿರೆ : ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್, ಎಂಕೆ ಅನಂತರಾಜ್ ಕಾಲೇಜು ಓಫ್ ಫಿಸಿಕಲ್ ಎಜುಕೇಶನ್ ಹಾಗೂ ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸೆಂಟರ್ ಜಂಟಿಯಾಗಿ ಸಮಾಜಮಂದಿರದಲ್ಲಿ ಆಯೋಜಿಸಿದ 19ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕೆಲರಾಯ ರೆಡ್ ಕ್ಯಾಮಲ್ ಇಂಗ್ಲಿಷ್ ಮೀಡಿಯಂ ಶಾಲೆಯು ಸಮಗ್ರ ತಂಡ ಪ್ರಶಸ್ತಿಯನ್ನು ಗಳಿಸಿದೆ. ಅಡ್ಯಾರ್ ಕಣ್ಣೂರಿನ ಬರಕ ಇಂಟರ್ನಾಷನಲ್ ಶಾಲೆಯು ತಂಡ ರನ್ನರ್ಸ್ ಗೆದ್ದುಕೊಂಡಿದೆ. ತೃತೀಯ ಸ್ಥಾನವನ್ನು
ಮೂಡುಬಿದಿರೆ : ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ(ಸಿ)ಯು 2021-22ನೇ ಸಾಲಿನಲ್ಲಿ ರಲ್ಲಿ ಹದಿಮೂರು ಲಕ್ಷದ ಎರಡು ಸಾವಿರದ ಐನೂರ ಅರವತ್ತ ಒಂಭತ್ತು ರಷ್ಟು ಲಾಭಾಂಶವನ್ನು ಹೊಂದಿರುತ್ತದೆ. ಈ ಸಾಲಿನ ಸದಸ್ಯರಿಗೆ ಶೇ 12 ಡಿವಿಡೆಂಡ್ ನೀಡಲು ಆಡಳತ ಮಂಡಳಿ ಶಿಫಾರಸ್ಸು ಮಾಡಿದೆ ಹಾಗೂ ಈ ಹಿಂದೆ ಸಂಘದ ಸದಸ್ಯರುಗಳಿಗೆ ಮನೆ ರಿಪೇರಿಗಾಗಿ ರೂ ಲಕ್ಷವನ್ನು 5 ನೀಡುತ್ತಿತ್ತು ಇದೀಗ ಈ ವರ್ಷದಿಂದ ನಮ್ಮ ಗ್ರಾಹಕರಿಗೆ ಅತೀ ಕಡಿಮೆ ಬಡ್ಡಿ ದರದಲ್ಲಿ ಮನೆ
ಮೂಡುಬಿದಿರೆ : ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೇಶವ ಪ್ರಕಾಶ್ ( 60ವ) ಅವರು ಇಂದು ಮುಂಜಾನೆ ತನ್ನ ಬೆಳುವಾಯಿಯಲ್ಲಿರುವ ಮನೆಯಲ್ಲಿ ಹೃದಯಾಘಾತವಾಗಿ ನಿಧನ ಹೊಂದಿದರು.ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ನಿವೃತ್ತಿಯನ್ನು ಹೊಂದಿದ್ದರು.ಹಳೆಯಂಗಡಿ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು
ನಮ್ಮ ದೇಶ ಹಾಗೂ ಸದೃಢವಾದ ಸಮಾಜ ಕಟ್ಟಬಲ್ಲಂತ ಸಾಮರ್ಥ್ಯವಿರುವ ಏಕೈಕ ಸಮರ್ಥ ಕ್ಷೇತ್ರವೆಂದರೆ ಅದು ಶಿಕ್ಷಣ ಕ್ಷೇತ್ರಕ್ಕೆ ಮಾತ್ರ. ಮಕ್ಕಳಿಗೆ ಪಠ್ಯಪುಸ್ತಕದಲ್ಲಿ ಇರುವುದನ್ನು ಮಾತ್ರ ಹೇಳುವುದಲ್ಲದೆ, ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಹೇಳಿದರು. ಅವರು ಇಲ್ಲಿನ ಕನ್ನಡ ಭವನದಲ್ಲಿ ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ.) ವಿವಿಧ ವಿಷಯವಾರು ಉಪನ್ಯಾಸಕರ ಸಂಘಗಳು,
ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ ಕಲ್ಲೊಟ್ಟುವಿನಲ್ಲಿ ಕುಮ್ಮಿ ಜಾಗದ ವಿಚಾರದಲ್ಲಿ ವಿವಾದ ಉಂಟಾಗಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂದಿ ಸಿದ್ದಾರೆ. ಪಡುಮಾರ್ನಾಡು ಗ್ರಾ.ಪಂ. ಉಪಾಧ್ಯಕ್ಷ ಅಭಿನಂದನ್ ಬಲ್ಲಾಳ್ ಮತ್ತು ಅವರ ಸ್ನೇಹಿತ ಹರೀಶ್ ಹೆಗ್ಡೆ ಬಂಧಿತರು. ಪಡುಮಾರ್ನಾಡಿನಲ್ಲಿ ಕುಮ್ಮಿ ಹಕ್ಕಿಗೆ ಸಂಬಂಧಿಸಿದಂತೆ ಹರೀಶ್ ಮತ್ತು ಶಕುಂತಳ ಮಧ್ಯೆ ವ್ಯಾಜ್ಯ




























