ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಬಸ್‍ಗಳಲ್ಲಿ ಶೇ.50 ರಿಯಾಯಿತಿ, ನಿತ್ಯ ಪ್ರಯಾಣಿಕರಿಗೆ ಶೇ.20 ರಿಯಾಯಿತಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಪಡೆಯದೆ, ಲಾಭ-ನಷ್ಟಗಳನ್ನು ನೋಡದೆ ಈ ಸೌಲಭ್ಯವನ್ನು ಚಲೋ ಬಸ್ ಕಾರ್ಡ್‍ನ ಮುಖಾಂತರ ನೀಡುತ್ತಿದ್ದು, ಇದು ಸಂಪೂರ್ಣ ಡಿಜಿಟಲ್
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.
ಮೂಡುಬಿದಿರೆ : ಇಟ್ಟಿಗೆ, ಮರಳು ಮತ್ತು ಸಿಮೆಂಟಿನಿಂದ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ. ಉನ್ನತ ಮಟ್ಟದಲ್ಲಿ ಪಕ್ಷವನ್ನು ಕಟ್ಟಲು ಮತ್ತು ಮತ ಬ್ಯಾಂಕ್ ಪರಿವರ್ತನೆಯಾಗಬೇಕಾದರೆ ಜನ ಸ್ಪಂದನೆ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಅವರು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾಜ ಮಂದಿರದಲ್ಲಿ ನಡೆದ ಪುತ್ತಿಗೆ ಜಿ.ಪಂ.ಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸರಕಾರಗಳು ಗ್ರಾ.ಪಂಗಳ ಮೂಲಕ 42 ವಿವಿಧ
ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯನ್ನು ಹೈಜಾಕ್ ಮಾಡಿ ಗುಣಪಾಲ ಕಡಂಬರ ಕಂಬಳ ಅಕಾಡೆಮಿಯನ್ನು ಫೋಕಸ್ ಮಾಡಲಾಗುತ್ತಿದೆ. ಸುಕುಮಾರ್ ಶೆಟ್ಟಿ, ಚಂದ್ರ ಆಳ್ವ, ಪಾಟಿಲ ಭಾಸ್ಕರ್ ಕೋಟ್ಯಾನ್, ಶಾಂತರಾಮ ಶೆಟ್ಟಿ, ನವೀನ್, ಸತೀಶ್ಚಂದ್ರ ಸಾಲ್ಯಾನ್ ಅವರಂತಹ ಹಿರಿಯ ಯಜಮಾನರು ಅಕಾಡೆಮಿ ಅಧ್ಯಕ್ಷರ ಏಕಪಕ್ಷೀಯ ನಿರ್ಧಾರಗಳನ್ನು ಸಹಿಸಿಕೊಂಡಿರುವುದು ಅಚ್ಚರಿ ಮೂಡಿಸುತ್ತಿದೆ. ಜಿಲ್ಲಾ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ
ಮೂಡುಬಿದಿರೆ: 24 ಗಂಟೆಯೊಳಗಡೆ ಕಂಬಳ ಮುಗಿಸುವುದು, ರೆಫ್ರಿಗಳಿಗೆ ಭದ್ರತೆ, ವ್ಯವಸ್ಥಾಪಕರಿಂದ ಸೂಕ್ತ ವ್ಯವಸ್ಥೆ, ಕೋಣಗಳನ್ನು ಕಟ್ಟುವ ವ್ಯವಸ್ಥೆ, ವ್ಯವಸ್ಥಿತ ಕಂಬಳವನ್ನು ಆಯೋಜಿಸುವ ಬಗ್ಗೆ ಹಾಗೂ ನವೆಂಬರ್ ತಿಂಗಳಿನಲ್ಲಿ ಪ್ರಾರಂಭಗೊಳ್ಳುವ ಕಂಬಳಕೂಟಗಳನ್ನು ಕೋಣಗಳ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ವರ್ಷದ ಮಾರ್ಚ್ನೊಳಗಡೆ ಮುಕ್ತಾಯಗೊಳಿಸುವ ಕುರಿತು ಸಮಾಜಮಂದಿರದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು
ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಬಿರಾವು ಎಂಬಲ್ಲಿ ಭಾನುವಾರ ಸುರಿದ ಗಾಳಿ ಮಳೆಗೆ ಬೃಹತ್ ಆಲದ ಮರ ಬಿದ್ದು, ಕೆಲ ಸಮಯ ಬಂಟ್ವಾಳ-ಮೂಡುಬಿದಿರೆ ಸಂಚಾರಕ್ಕೆ ತೊಂದರೆಯಾಯಿತು.ಮರ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು, ಇಂಟರ್ನೆಟ್ ಸಂಪರ್ಕ ತಂತಿಗಳು ಕಡಿದು ಬಿದ್ದಿದ್ದು, ಭಾನುವಾರ ಮಧ್ಯಾಹ್ನದಿಂದ ಬಿರಾವು, ತಾಕೋಡೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಅವರ ಮುತುವರ್ಜಿಯಲ್ಲಿ ಮರವನ್ನು ಒಂದು
ತೋಡಾರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಡಸಮೇತ ಆಲದ ಧರೆಗುರುಳಿದ್ದು ಅಡಿಯಲ್ಲಿದ್ದ ಹಣ್ಣಿನ ಅಂಗಡಿ ಜಖಂಗೊಂಡಿದೆ.ಆಲದ ಮರದ ಬುಡದಲ್ಲಿಯೇ ತೋಡಾರಿನ ಅಬೂಬಕ್ಕರ್ ಎಂಬವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು. ಇಂದು ಬೆಳಿಗ್ಗೆ ಬೀಸಿದ ಗಾಳಿಯ ರಭಸಕ್ಕೆ ಬುಡ ಸಮೇತ ಆಲದ ಮರದ ಬಿದ್ದಿದೆ .ಸ್ಥಳೀಯರಿಂದ ಮಿಂಚಿನ ಕಾರ್ಯಾಚರಣೆ ಮರದ ಗೆಲ್ಲುಗಳ ತೆರವಿಗೆ ಕಾರ್ಯಾರಂಭ,ಸಹಕಾರಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ತಾತ್ಕಾಲಿಕ ವ್ಯವಸ್ಥೆ ಸುಗಮ ವಾಹನ ಸಂಚಾರಕ್ಕಾಗಿ
ತುಳುನಾಡಿನ ಇತಿಹಾಸದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಜೈನ ಮನೆತನದ ವಾರಸುದಾರ, ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ. ತುಳುನಾಡಿನ ಭವ್ಯ ಪರಂಪರೆ, ಪರೋಪಕಾರಿಗಳು ಆಗಿರುವಂತಹ ಶ್ರೀಮಂತ ಜೈನ ಮನೆತನದ ವಾರಸುದಾರರಾದ ಕೃಷಿಕರೂ, ಉದ್ಯಮಿ ಜಯವರ್ಮರಾಜ್ ಬಲ್ಲಾಳ್ ಅವರ ಸುಪುತ್ರರಾಗಿದ್ದ ರಾಹುಲ್ ಬಲ್ಲಾಳ್ ಕಾನೂನು ಪಧವೀಧರರು. ತನ್ನ ಕುಟುಂಬದ ಕೃಷಿ ಹಾಗೂ ಹೋಟೇಲ್ ಉದ್ಯಮವನ್ನು ಮುನ್ನಡೆಸಲು ರಾಹುಲ್ ಅವರು
ಮೂಡುಬಿದಿರೆ:ತಾಲ್ಲೂಕಿನ ವಿವಿದೆಡೆ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮೈಟ್ ಎಂಜಿನಿಯರಿಂಗ್ ಕಾಲೇಜಿನ ಆವರಣಗೋಡೆ ಕುಸಿದು ಬಿದ್ದು ಮೂರು ವಾಹನಗಳಿಗೆ ಹಾನಿಯಾಗಿದೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರವೇಶ ನಡೆಯುತ್ತಿದ್ದು ಆವರಣಗೋಡೆಯ ಬದಿಯಲ್ಲಿ ಪೋಷಕರ ವಾಹನಗಳನ್ನು ನಿಲ್ಲಿಸಲಾಗಿತ್ತು. ನಿರಂತರ ಮಳೆಯಿಂದಾಗಿ ಸುಮಾರು 20 ಅಡಿ ಎತ್ತರದಲ್ಲಿದ್ದ ಆವರಣಗೋಡೆ ಕುಸಿದು ಹತ್ತಿರದಲ್ಲಿದ್ದ ಮೂರು
ಮೂಡುಬಿದಿರೆ: ಶರೀಯಾ ಬೇಕೆಂದು ಕೇಳುವ ನಿಮಗೆ ಸಿವಿಲ್ ಕೋಡ್, ಹಿಂದೂಗಳಿಗೆ ಕ್ರಿಮಿನಲ್ ಕೋಡ್ ಎಂದು ಹೇಳುವ ನೀವು ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಲಾಲ್, ಅಮರಾವತಿಯಲ್ಲಿ ಮುಕೇಶ್‍ರನ್ನು ಹತ್ಯೆ ಮಾಡಿರುವ ಪಾತಕಿಗಳನ್ನು ಗಲ್ಲಿಗೇರಿಸಬೇಡಿ. ಅವರ ಕೈ-ಕಾಲುಗಳನ್ನು ಕತ್ತರಿಸಿ ಹಾಕಿ ಶರೀಯತ್ ಪ್ರಕಾರ ಶಿಕ್ಷೆ ನೀಡಿ ಇದು ಹಿಂದೂ ಸಮಾಜದ ಆಗ್ರಹ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ ಹೇಳಿದರು. ಇತ್ತೀಚೆಗೆ ರಾಜಸ್ತಾನ,


























