ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ವೀರಯೋಧ (ನಿವೃತ್ತ) ಲಾರೆನ್ಸ್ ಡಿಸೋಜ ಪಣಪಿಲ ಇವರು ನಿಧನರಾಗಿದ್ದು ನಿವೃತ್ತ ಸೈನಿಕರ ಸಂಘ ಮೂಡುಬಿದಿರೆ ಇವರಿಂದ ಅಂತಿಮ ಗೌರವ ಸಲ್ಲಿಸಲಾಯಿತು. ದೇಶದ ತ್ರಿವರ್ಣ ಧ್ವಜವನ್ನು ಮೃತದೇಹದ ಮೇಲೆ ಹೊದಿಸಿ ಸರ್ಕಾರಿ ಸಮಾನ ಗೌರವ ಅರ್ಪಿಸಲಾಯಿತು. ಮೃತ ಯೋಧ ಲಾರೆನ್ಸ್ ಡಿಸೋಜರವರು ಭಾರತೀಯ ಭೂಸೇನೆಯಲ್ಲಿ ಸುಮಾರು ೨೭ ವರ್ಷಗಳ ಕಾಲ
ಪುರಸಭೆಯ ಬೀದಿದೀಪ, ವಿದ್ಯುತ್ ದಾರಿದೀಪ ದುರಸ್ತಿ ಮತ್ತು ನಿರ್ವಹಣೆ ಮತ್ತು ಕೊಳವೆ ಬಾವಿಗಳಿಗೆ ಜೋಡಿಸಿದ ಎಲ್ಲಾ ರೀತಿಯ ಪಂಪುಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ಜೋಡಿಸಿ ದುರಸ್ತಿಪಡಿಸುವ ಕಾಮಗಾರಿಯ ಟೆಂಡರ್ ಮತ್ತು ಪುರಸಭಾ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್‌ಗೆ ಅನುಮೋದನೆ ನೀಡುವಿಕೆಯಲ್ಲಿ ಗಂಭೀರ ಲೋಪದೋಷಗಳಾಗಿವೆ. ಹೀಗಾಗಿ ಈ ಟೆಂಡರ್‌ಗೆ ಅನುಮೋದನೆಯನ್ನು
ಕಾಂಗ್ರೆಸ್ ಹಿರಿಯ ಮುಖಂಡ ಅಸ್ಕರ್ ಫೆರ್ನಾಂಡಿಸ್ ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಬುಧವಾರದಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯವನ್ನು ವಿಚಾರಿಸಿದರು. ತದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರಿಗೆ ಸದ್ಯ ಪರಿಣಿತ ತಜ್ಞ ವೈದ್ಯರ ತಂಡ ಚಿಕಿತ್ಸೆ ಕೊಡ್ತಾ ಇದ್ದಾರೆ.ಮಣಿಪಾಲ್ ವೈದ್ಯರು
ಮೂಡುಬಿದಿರೆ : ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ ” ಕರ್ನಾಟಕ ಕ್ರೀಡಾರತ್ನ” ಪ್ರಶಸ್ತಿಯನ್ನು ಪಡೆದಿರುವ, ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರನ್ನು ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಯುವಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡ ಅವರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಆರೋಪಿಯ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಶಾಸಕ
ಮೂಡುಬಿದಿರೆ : ಸಾಂಪ್ರಾದಾಯಿಕ ಕಂಬಳಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಕಂಬಳಗಳಲ್ಲಿ ಬೆಳಿಗ್ಗೆ 9.೦೦ಗಂಟೆಗೆ ಕೋಣಗಳನ್ನು ಕರೆಗೆ ಇಳಿಸಿ 24 ಗಂಟೆಗಳೊಳಗೆ ಮುಗಿಸುವ ಸಂಪೂರ್ಣ ಜವಾಬ್ದಾರಿ ಮತ್ತು ಹೊಣೆಗಾರಿಕೆಯನ್ನು ಆಯಾಯ ಸ್ಥಳಿಯ ಕಂಬಳದ ವ್ಯವಸ್ಥಾಪಕರು ಶಿಸ್ತನ್ನು ಕೈಗೊಳ್ಳುವ ಬಗ್ಗೆ ಹಾಗೂ ಕಂಬಳದ ಪ್ರತಿ ಓಟಗಾರರು ಮೂರು ಜತೆ ಕೋಣಗಳನ್ನು ಮಾತ್ರ ಆಯಾಯ ಕಂಬಳಗಳಲ್ಲಿ ಓಡಿಸಬಹುದು. ಆದರೆ 2 ಜತೆ (ಎ,ಬಿ) ಕೋಣಗಳ ಯಜಮಾನರ ಇಬ್ಬರು ಓಟಗಾರರ ಪೈಕಿ ಒಬ್ಬರಿಗೆ ಗಂಭೀರ
ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ ಉದ್ದೇಶದಿಂದ ಮಂಗಳವಾರದಂದು ಮೂಡುಬಿದಿರೆಯ ಜೈನ್ ಪೇಟೆಯ ಬಳಿ ಇರುವ ಆಸಿಸ್ ಪಿಂಟೋ ಗದ್ದೆಯಲ್ಲಿ ಕೋಣ ಮತ್ತು ಟಿಲ್ಲರ್‌ನಲ್ಲಿ ಉಳುವೆ ಮಾಡುವ ಮೂಲಕ ಯುವಕರಿಗೆ ಮಾದರಿಯಾದರು. ಬ್ಲಾಕ್ ಕಾಂಗ್ರೆಸ್ ಮತ್ತು ಕಿಸಾನ್ ಘಟಕದ ವತಿಯಿಂದ ಈ
ಮೂಡುಬಿದಿರೆ: ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಹಾಗೂ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಇವುಗಳ ವತಿಯಿಂದ ಪಣಪಿಲ ಶ್ರೀ ರಾಜ್ ಕೊಟ್ಟಾರಿಬೆಟ್ಟು ಪಣಪಿಲ ಇಲ್ಲಿ ಮೀನು ಕೃಷಿ ಕುರಿತು ತರಬೇತಿ ಹಾಗೂ ಕ್ಷೇತ್ರೋತ್ಸವ ಮತ್ತು ಮಾರಾಟ ಕಾರ್ಯಕ್ರಮ ಶನಿವಾರ ನಡೆಯಿತು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಮೇಶ್ ಟಿ.ಜೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮೀನು ಕೃಷಿ
ಮೂಡುಬಿದಿರೆ: ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಜೈಲು ಸೇರಿ ಕಾನೂನು ಹೋರಾಟ ನಡೆಸುತ್ತಿರುವಾಗಲೇ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಮೃತಪಟ್ಟ ಧರ್ಮಗುರು, ಸಾಮಾಜಿಕ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಅವರಿಗೆ ಇನ್ನಾದರು ಸರ್ಕಾರ ನ್ಯಾಯ ಒದಗಿಸಬೇಕೆಂದು ವಿನೋದ್ ವಾಲ್ಟರ್ ಪಿಂಟೊ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರ ಆರೋಪವನ್ನು ಸಾಬೀತುಪಡಿಸಲು ತನಿಖಾಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಾದ್ಯವಾಗಿಲ್ಲ. ತೀವ್ರ
ಮೂಡುಬಿದಿರೆ: ಆನೆಗಳ ಆಹಾರವಾಗುವ ಬಿದಿರಿನ ತಳಿಗಳನ್ನು ಕಾಡಿನಂಚಿನಲ್ಲಿ ನೆಟ್ಟರೆ ಆನೆಗಳು ನಾಡಿಗೆ ಬರುವ ಪ್ರಮೇಯ ತಪ್ಪುತ್ತದೆ. ಅಂತಹ ಬಿದಿರಿನ ತಳಿಗಳನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಒಂಟಿಕಟ್ಟೆಯ ಕಡಲ ಕೆರೆ ನಿಸರ್ಗಧಾಮದ ಸಾಲುಮರ ತಿಮ್ಮಕ್ಕ ಸಸ್ಯೋದ್ಯಾನವನ ಆವರಣದಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನವನ್ನು ಶುಕ್ರವಾರ ಸಾಯಂಕಾಲ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪರಿಸರವನ್ನು ನಾವು ಸಂರಕ್ಷಿಸಿದಲ್ಲಿ
ಪೆಟ್ರೋಲ್ ಮತ್ತು ಡೀಸೆಲ್, ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಅವರು ಮೂಡುಬಿದಿರೆಯಲ್ಲಿ ಒಂಟಿಯಾಗಿ ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಮೂಡುಬಿದಿರೆಯಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮೂಡುಬಿದಿರೆ ಪೊಲೀಸರು ಇದಕ್ಕೆ ಅನುಮತಿ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಯಚಂದ್ರ ಜೈನ್


















