Home ಕರಾವಳಿ Archive by category ಸುಳ್ಯ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ 77ನೇ ಗಣರಾಜ್ಯೋತ್ಸವ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ

ಕಾಂಗ್ರೆಸ್ ಒಳಜಗಳ- ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮಶೇಖರ್ ಕೊಯಿಂಗಾಜೆ ರಾಜೀನಾಮೆ

ಸಂಪಾಜೆ: ಮುಂಬರುವ ಪಂಚಾಯತ್ ಚುನಾವಣೆಗಳ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪಾಜೆ ವಲಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ದೀರ್ಘಕಾಲದಿಂದ ವಲಯ ಕಾಂಗ್ರೆಸ್ ಘಟಕವನ್ನು ಮುನ್ನಡೆಸುತ್ತಿದ್ದ ಹಿರಿಯ ನಾಯಕ ಸೋಮಶೇಖರ್ ಕೊಯಿಂಗಾಜೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಒಳಚಟುವಟಿಕೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜೀನಾಮೆಯ ಘೋಷಣೆ ಮಾಡಿದ ಅವರು, ಸುಮಾರು 28

ಪರಂಪರಾಗತ ಕೃಷಿ ವಿಕಾಸ ಯೋಜನೆ ಮಾಹಿತಿ ಕಾರ್ಯಗಾರ

ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಗುಚ್ಛ ದ ರೈತರಿಗೆ ಸಾವಯವ ಕೃಷಿ, ಪಿ ಜಿ ಎಸ್ ದೃಡೀಕರಣ ಹಾಗೂ ಬೆಳೆ ರೋಗ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ ಪಂಜ ಲಯನ್ಸ್ ಸಭಾಭವನ ದಲ್ಲಿ ಜ.13 ರಂದು ನಡೆಯಿತು. ಪರಿವಾರ ಪಂಜ ರೈತ ಉತ್ಪಾದಕ ಕಂಪನಿ […]

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆ

ನಗರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ – ಡ್ರೋನ್ ಹಾಗೂ ಸಿಸಿ ಕ್ಯಾಮರಾ ಮೂಲಕ ನಿಗಾ ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿಯುತ ಜಾತ್ರೋತ್ಸವ ನಡೆಸುವ ಉದ್ದೇಶದಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಸೂಕ್ಷ್ಮ ಕಣ್ಗಾವಲು ವ್ಯವಸ್ಥೆಯ ಭಾಗವಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಈ ಬಾರಿ

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ

ಫೇಸ್‌ಬುಕ್ ಪೋಸ್ಟ್‌ಗೆ ಬಿಜೆಪಿ ತೀವ್ರ ಆಕ್ರೋಶ – ಮಂಡಲ ಬಿಜೆಪಿ ಖಂಡನೆ, ಉಗ್ರ ಪ್ರತಿಭಟನೆ ಎಚ್ಚರಿಕೆ ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್‌ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ ಸಂದೇಶ್ ಎನ್ನುವ ಫೇಸ್‌ಬುಕ್ ಖಾತೆಯಲ್ಲಿ ಶಾಸಕರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ರೀತಿಯಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿರುವುದು

ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ – ಲತಾಶ್ರೀ ಸುಪ್ರೀತ್

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, 43 ವರ್ಷದ ಇತಿಹಾಸವಿರುವ ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ 2026ನೇ ಸಾಲಿನಲ್ಲಿ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಸಾಹಿತಿ, ಲೇಖಕಿ, ಸಂಘಟಕಿ, ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರು 44ನೇ ಅಧ್ಯಕ್ಷರಾಗಿ ನಿಯೋಜನೆಗೊಂಡಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಹೆಚ್.ಜಿ.ಎಫ್. ಸುರೇಶ್ ಕಾಮತ್ ಜಯನಗರ,

ಹಿನ್ನೋಟ”- ಇದು ನೆನಪಿನ ಬುತ್ತಿ ಕೃತಿ ಅನಾವರಣ

ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ ಬಿ ಫೌಂಡೇಶನ್ ಅಭ್ಯಕ್ಷರಾದ ಎಂ ಬಿ ಸದಾಶಿವ ಕೃತಿಯನ್ನು

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು -ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯದಲ್ಲಿ ದ್ವಿತೀಯ ಸ್ಥಾನ

ಡಿ. 23 ರಂದು ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ಆತಿಥ್ಯದಲ್ಲಿ ಆಯೋಜಿಸಲಾದ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ವಿಧ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪಂದ್ಯಾಟವು ಸುಳ್ಯದ ನೆಹರೂ ಮೆಮೋರಿಯಲ್ ಮೈದಾನದಲ್ಲಿ ನಡೆದಿದ್ದು ರಾಜ್ಯ ಮಟ್ಟದಿಂದ ಹತ್ತಾರು ತಂಡಗಳು ಭಾಗವಹಿಸಿದ್ದವು.

ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮ

ಸುಳ್ಯದಲ್ಲಿ ಡಿ. 14 ರಂದು ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ರಿ.) ಇದರ ನೂತನವಾಗಿ ಪ್ರಾರಂಭವಾದ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮವು ಕೆ ವಿ ಜಿ ಆಯುರ್ವೇದ ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಎ/ಸಿ ಆಡಿಟೋರಿಯಂನಲ್ಲಿ ನೆರವೇರಿತು. ಈ ಕಾರ್ಯಕ್ರಮದ ಪದಗ್ರಹಣ ಅಧಿಕಾರಿ ಆಗಿ ಜಿಲ್ಲಾ ಆಯುಷ್ ಆಫೀಸರ್ ಡಾ. ಮೊಹಮ್ಮದ್ ಇಕ್ಬಾಲ್ ರವರು ಸರಕಾರಿ ಕಾರ್ಯಕ್ರಮ ಹಾಗೂ ಇನ್ನಿತೀರ ಎಲ್ಲಾ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಇಂತಹ ಅಸೋಸಿಯೇಷನ್ ಅತ್ಯಮೂಲ್ಯ

ಎನ್‌ಎಸ್‌ಎಸ್ ಸೇವಾ ಸಂಗಮದ ದಶಮಾನೋತ್ಸವ ಲೋಗೋ ಬಿಡುಗಡೆ

ಸುಳ್ಯ: ಎನ್‌ಎಸ್‌ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ದಶಮಾನೋತ್ಸವದ ಲೋಗೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷರಾದ ಬಾಲಕೃಷ್ಣ ಬೊಳ್ಳೂರು ವಹಿಸಿದ್ದರು. ಗೌರವ ಸಲಹೆಗಾರರಾದ ಜಯಪ್ರಕಾಶ್ ಕಲ್ಲುಗದ್ದೆ, ಚಂದ್ರಶೇಖರ ಬಿಳಿನಲೆ, ಡಾ.