Home ಕರಾವಳಿ Archive by category ಸುಳ್ಯ (Page 4)

ಸಂಪಾಜೆ: ಆಟಿ ಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಸಂಪಾಜೆ ಗ್ರಾಮ ಪಂಚಾಯತ್ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ತ್ರೀ ಶಕ್ತಿ ಸಂಘಗಳು ಹಾಗೂ ಆದರ್ಶ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ಆಟಿ ಕೂಟ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕರು ಚಿಂತಕರಾದ ಚಿದಾನಂದ ಮಾಸ್ಟರ್

ಸುಳ್ಯ.ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ, ದೈಹಿಕ ಶಿಕ್ಷಣ ಶಿಕ್ಷಕ ರಘುನಾಥ ಶೆಟ್ಟಿ ನಿವೃತ್ತಿ

ಶಾಂತಿನಗರ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ರಘುನಾಥ ಶೆಟ್ಟಿ ಅವರು ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ ಐತಪ್ಪ ಶೆಟ್ಟಿ ಮತ್ತು ಸೀತಮ್ಮ ದಂಪತಿಗಳ ಪುತ್ರ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಬರಡ್ಕ, ಇಲ್ಲಿ ಪೂರೈಸಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಪೂರೈಸಿರುತ್ತಾರೆ ಇವರು ವಯಸ್ಸಿನಲ್ಲಿಯೇ ಕ್ರೀಡಾಕ್ಷೇತ್ರದಲ್ಲಿಗೆ ಆಕರ್ಷಿತರಾಗಿ ಶಾಲಾ ದಿನಗಳಲ್ಲಿಯೇ ಕ್ರೀಡಾಪಟುವಾಗಿದ್ದ ಇವರು

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು ಅವರು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಆಟಿ ಎನ್ನುವಂತದ್ದು ಹಿಂದೆ ಬಹಳ ಕಷ್ಟಕರವಾದ ದಿನವಾಗಿತ್ತು. ಇಂತಹ ಕಷ್ಟಕರವಾದ ದಿನಗಳಲ್ಲೂ ನಮ್ಮ ಪೂರ್ವಜರು ಯಾವ ರೀತಿಯಲ್ಲಿ ಜೀವನ ನಡೆಸಿದರು

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ – ವಿದ್ಯಾರ್ಥಿ ಸಂಘದ ರಚನೆ, ಪ್ರತಿಜ್ಞಾ ಸ್ವೀಕಾರ ವಿಧಿ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡಿಗೆ ಸಮಾರಂಭ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು 30.07.2025 ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಸಭಾಧ್ಯಕ್ಷತೆ ವಹಿಸಿದ ಅವರು, 1996 ರಿಂದ ಕಾಲೇಜು

ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕಿನಲ್ಲಿ 26 ನೇ ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆಯನ್ನು ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಸಭಾಭವನದಲ್ಲಿ ನಡೆಸಲಾಯಿತು. ಉದ್ಘಾಟನೆಯನ್ನು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರ ಅಧ್ಯಕ್ಷರಾದ ಜಯರಾಮ್ ರೈ ರವರು ಹಣ್ಣಿನ ಗಿಡವನ್ನು ನಾಟಿ ಮಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಹಿಳೆಯರ ಜೀವನವನ್ನು ಹಸನು

ಸುಳ್ಯದ ಸೃಜನಾ ಬಿ. ಎಸ್ ಗೆ ನಾಟಾ ಪರೀಕ್ಷೆಯಲ್ಲಿ 35 ನೇ ರ್‍ಯಾಂಕ್

ಸೃಜನಾ ಬಿ. ಎಸ್ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 35ನೇ ರ‌್ಯಾಂಕ್ ಪಡೆದಿರುತ್ತಾರೆ. ಇವರು ಎಕ್ಸಲೆಂಟ್ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ . ಸುಳ್ಯದ ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನ ಅಧ್ಯಕ್ಷರಾದ ಶ್ರೀಯುತ ಶುಭಕರ ಬೋಳುಗಲ್ಲು ಹಾಗೂ ಸಂಚಾಲಕರು ಶ್ರೀಮತಿ ಗೀತಾಂಜಲಿಯವರ ಪುತ್ರಿ.

ಹುತಾತ್ಮ ಪ್ರವೀಣ್ ನೆಟ್ಟಾರು ಸ್ಮೃತಿ ದಿನ : ಸಂಸದರು, ಶಾಸಕರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಿಂದ ದಿ.ಪ್ರವೀಣ್ ಪ್ರತಿಮೆಗೆ ಪುಷ್ಪ ನಮನ

ಕಳೆದ ಮೂರು ವರ್ಷದ ಹಿಂದೆ ಕ್ರೂರ ಮತಾಂಧ ಶಕ್ತಿಗಳ ಸಂಚಿಗೆ ಬಲಿಯಾದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಸ್ಮೃತಿ ದಿನ ಜು. 26ರಂದು ಅವರ ಮನೆಯಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು. ಸುಳ್ಯ ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಆರ್. ಕೆ ಭಟ್ ಕುರುಂಬುಡೇಲು ಪ್ರಾಸ್ತವಿಕವಾಗಿ ಮಾತನಾಡಿ ಪ್ರವೀಣ್ ನೆಟ್ಟಾರು ಅಪ್ಪಟ ಪಕ್ಷ ನಿಷ್ಠ ಕಾರ್ಯಕರ್ತ, ಸಿದ್ಧಾಂತಕ್ಕೆ ಬದ್ಧನಾಗಿ ಪಕ್ಷಕ್ಕಾಗಿ ಕೆಲಸ ಮಾಡಿದವರು,ಅವರ

ಸುಳ್ಯ ತಾಲೂಕು ಆಸ್ಪತ್ರೆಯ ನೂತನ ಆಡಳಿತ ವೈದ್ಯಾಧಿಕಾರಿಯವರಿಗೆ ಸುಳ್ಯ ಯುವ ಕಾಂಗ್ರೆಸ್ ನಿಂದ ಸ್ವಾಗತ

ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ವೈದ್ಯಾಧಿಕಾರಿಯಾಗಿ ಈ ಹಿಂದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಇದೀಗ ಸುಳ್ಯ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಂಡು ಬಂದು ಆಡಳಿತ ವೈದ್ಯಾಧಿಕಾರಿಯಾಗಿ ನಿಯುಕ್ತರಾಗಿರುವ ಶ್ರೀ ನವೀನ್ ಎಸ್ ಎನ್ ಅವರಿಗೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಆಸ್ಪತ್ರೆಯಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಎಲ್ಲಾ ರೋಗಿಗಳಿಗೆ ಅತ್ಯುತ್ತಮ

ಸುಳ್ಯ:ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ ‘ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಮ್ಮ ಶಾಲೆಯ ಹಿರಿಯ ಪೋಷಕರಾದ ಶ್ರೀಮತಿ . ಪುಷ್ಪಾವತಿ ಮಾಣಿಬೆಟ್ಟು , ಶ್ರೀಮತಿ. ಜಯಲಕ್ಷ್ಮಿ ಇವರು ಭಾಗವಹಿಸಿ ಆಟಿಯ ಮಹತ್ವದ ಬಗ್ಗೆ ಪುಟಾಣಿ ಮಕ್ಕಳಿಗೆ ತಿಳಿಸಿಕೊಟ್ಟರು . ಪೋಷಕರೆಲ್ಲರೂ ಆಟಿಯ ವಿಶೇಷ ಖಾದ್ಯಗಳನ್ನು ತಯಾರಿಸಿ ಮಕ್ಕಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು . ಶಾಲೆಯ ಪುಟಾಣಿ ವಿದ್ಯಾರ್ಥಿಗಳು ನೃತ್ಯ ಮಾಡಿ

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ಕನಕ ಕಾವ್ಯ ವೈಭವ ಎಂಬ ಸಂಗೀತ- ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ – ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು ಗೋವಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಡಾ.