ಕೊಕ್ಕಡ : ಕೊಕ್ಕಡ ಗ್ರಾಮದ ಹಳ್ಳಿಗೇರಿ ಎಂಬಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಜ.2 ರಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಕ್ಕಡ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ನೌಕರ ಕುಂಞಕಣ್ಣನ್ ಅವರ ಪುತ್ರ ಅಜಯ್ ಕುಮಾರ್(39) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಊಟದ ಬಳಿಕ ವಾಸದ ಮನೆಯಲ್ಲಿ ಇದ್ದ
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವಕ್ಕೆ ಶೀರೂರು ಮಠದ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿದ್ದು, ಮುಂದಿನ ಎರಡು ವರ್ಷಗಳ ಕಾಲ ಶ್ರೀ ಕೃಷ್ಣ ದೇವರ ಪೂಜಾ ದೀಕ್ಷೆಯನ್ನು ಸ್ವೀಕರಿಸಲಿದ್ದಾರೆ. ಈ ಮಹತ್ತರ ಜವಾಬ್ದಾರಿಯ ಅಂಗವಾಗಿ ಶ್ರೀಪಾದರು ಕೈಗೊಂಡಿರುವ ದೇಶ–ಗ್ರಾಮ ಪರ್ಯಟನೆಯ ಭಾಗವಾಗಿ ಜ.1ರಂದು ತಮ್ಮ ಪೂರ್ವಾಶ್ರಮದ ಹುಟ್ಟೂರಾದ ನಿಡ್ಲೆ ಗ್ರಾಮಕ್ಕೆ ಆಗಮಿಸಿದರು. ಶ್ರೀಪಾದರ
ನೆಲ್ಯಾಡಿ: ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಮರ ಸಾಗಾಟದ ವಿರುದ್ಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದ್ದು, ಮಂಗಳವಾರ ರಾತ್ರಿ ನಡೆಸಿದ ವಿಶೇಷ ಗಸ್ತು ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ಹೆದ್ದಾರಿ–75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಪ್ರದೇಶದಲ್ಲಿ ಅಕ್ರಮವಾಗಿ ವಿವಿಧ ಕಾಡು ಜಾತಿಯ ಮರಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದೆ. ಉಪ್ಪಿನಂಗಡಿ ಅರಣ್ಯ ವಲಯದ ಅಧಿಕಾರಿಗಳ ತಂಡ ರಾತ್ರಿ ಗಸ್ತು ಕಾರ್ಯಾಚರಣೆ
ಡೈನಾಮಿಕ್ಸ್ ಸಂಸ್ಥೆಯು ಎಂಬ್ರೇರ್ ಸಹಯೋಗದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ವಿಮಾನ ವಿನ್ಯಾಸ ಮತ್ತು ವಿಮಾನಯಾನ ಸ್ಪರ್ಧೆಯಲ್ಲಿ ಮಂಗಳೂರು ಅಮೃತ ವಿದ್ಯಾಲಯಂನ ಗ್ರೇಡ್ 10ರ ವಿದ್ಯಾರ್ಥಿಯಾದ ವೈಭವ್ ಪ್ರಭು ಅವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ವಿವಿಧ ಪ್ರದೇಶಗಳಿಂದ ಭಾಗವಹಿಸಿದ್ದ ಸ್ಪರ್ಧಾರ್ಥಿಗಳ ನಡುವೆ, ವೈಭವ್ ಅವರ ಸಾಧನೆ ವಿಮಾನ ವಿನ್ಯಾಸ ತತ್ವಗಳು, ವಾಯುಗತಿ ಶಾಸ್ತ್ರ ಮತ್ತು ವಿಮಾನಯಾನ ಕಲ್ಪನೆಗಳ ಮೇಲಿನ ಗಟ್ಟಿಯಾದ ಅರಿವಿನ ಮೂಲಕ ವಿಶೇಷವಾಗಿ
ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, 43 ವರ್ಷದ ಇತಿಹಾಸವಿರುವ ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ 2026ನೇ ಸಾಲಿನಲ್ಲಿ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಸಾಹಿತಿ, ಲೇಖಕಿ, ಸಂಘಟಕಿ, ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರು 44ನೇ ಅಧ್ಯಕ್ಷರಾಗಿ ನಿಯೋಜನೆಗೊಂಡಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಹೆಚ್.ಜಿ.ಎಫ್. ಸುರೇಶ್ ಕಾಮತ್ ಜಯನಗರ,
ಕಾಪು: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ವತಿಯಿಂದ ಕೊರಗ ಸಮುದಾಯದ ಯುವ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ-ಸತ್ಯಾಗ್ರಹ ನಡೆಯುತ್ತಿದ್ದು, ಇಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಬೇಡಿಕೆಯ ಬಗ್ಗೆ ಚರ್ಚಿಸಿ ಮನವಿಯನ್ನು ಸ್ವೀಕರಿಸಿದರು.
ಕಾಪು:ಸಮಾಜ ಸೇವಕರು, ಶಿಕ್ಷಣ ತಜ್ಞರು, ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀ ನಿಟ್ಟೆ ವಿನಯ್ ಹೆಗ್ಡೆ ಅವರಿಗೆ ವಿಧ್ಯಾವರ್ಧಕ ಸಂಘ (ರಿ.) ಶಿರ್ವದಲ್ಲಿ ಇಂದು ನಡೆದ ಶೃಧ್ಧಾಂಜಲಿ ಸಭೆಯಲ್ಲಿ ಶಾಸಕರು, ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧ್ಯಾವರ್ಧಕ ಸಂಘ ಸಂಚಾಲಕರಾದ ಮಟ್ಟಾರು ರತ್ನಾಕರ್ ಹೆಗ್ಡೆ, ಸದಸ್ಯರುಗಳಾದ ನಿತ್ಯಾನಂದ ಹೆಗ್ಡೆ, ಜಗದೀಶ್ ಅರಸ್,
ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನು ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್, ಇಎಮ್‌ಆರ್‌ಐ EMRI GREEN HEALTH SERVICES ಕರ್ನಾಟಕ ರಾಜ್ಯಾದ್ಯಂತ ಸುಸಜ್ಜಿತಗೊಂಡಿರುತ್ತದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆಗಳಲ್ಲಿ ಸರಾಸರಿ ೩೦ರಿಂದ ೩೫ ಪರ್ಸೆಂಟ್ ಅಪಘಾತ ಪ್ರಕರಣಗಳು ವರದಿಯಾಗಿವೆ. 108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ.
ಕಾಪು ಪುರಸಭೆಯ ಸಾಮಾನ್ಯ ಸಭೆ ದಿನಾಂಕ 30-12-2025 ರಂದು ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ
ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು ಆಗಿದೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು



























