Home Archive by category ಕರಾವಳಿ (Page 722)

ಬಿಜೆಪಿ ಕ್ಷೇಮ ನಿಧಿ ಯೋಜನೆಗೆ ಬಂಟ್ವಾಳದಲ್ಲಿ ಚಾಲನೆ

ಬಂಟ್ವಾಳ: ಇಬ್ಬರು ಪುಟ್ಟ ಹೆಣ್ಣುಮಕ್ಕಳು ಒಬ್ಬಳು 2 ವರ್ಷದ ಅಂಶಿಕ, ಇನ್ನೊಬ್ಬಳು 3 ತಿಂಗಳ ಮಗು ಪೂರ್ವಿಕ.. ಈ ಮಕ್ಕಳಿಬ್ಬರ ತಾಯಿ ಮೂರು ತಿಂಗಳ ಹಿಂದೆ ಸಾವನ್ನಪ್ಪಿದ್ದಾರೆ.ತಾಯಿಯಿಲ್ಲದೆ ತಬ್ಬಲಿಯಾಗಿ ಸದ್ಯ ದೊಡ್ಡಮ್ಮನ ಮಡಿಲಲ್ಲಿ ಬೆಳೆಯುತ್ತಿರುವ ಈ ಪುಟ್ಟ ಕಂದಮ್ಮಗಳ ಮುಂದಿನ ಭವಿಷ್ಯಕ್ಕಾಗಿ ಈಗ ಆಸರೆ ಯಾಗಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ

ಪೆಟ್ರೋಲ್-ಡೀಸೆಲ್ ಬೆಲೆಯೇರಿಕೆಗೆ ಸಿಪಿಐ(ಎಂ)ವಿರೋಧ

ಪೆಟ್ರೋಲ್ ದರವನ್ನು ಲೀಟರ್ ಗೆ ರೂ,1೦೦ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಡೀಸೆಲ್ ಹಾಗೂ ಇತರೆ ಉತ್ಪನ್ನಗಳ ದರ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ವಿರೋಧ ವ್ಯಕ್ತಿ ಪಡಿಸಿದೆ. ಇದರಿಂದ ಅವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು ಜನರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರದ ನಿಜ ಬಣ್ಣ ಒಂದೊಂದಾಗಿ

ಮಂಗಳೂರಿನಲ್ಲಿ ಮತ್ತೊಂದು ಪುರಾತನ ಬಾವಿ ಪತ್ತೆ

ಮಂಗಳೂರಿನ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ ನಿರ್ಮಿಸಲು ಶುಕ್ರವಾರ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿಗೆ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ. ಸುಮಾರು 20 ವರ್ಷಗಳ ಹಿಂದಿನ ಬಾವಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ

ತೈಲ ಬೆಲೆ ಏರಿಕೆ ಖಂಡಿಸಿ ಮಂಗಳೂರು ನಗರ ಕಾಂಗ್ರೆಸ್ ಪ್ರತಿಭಟನೆ

 ದೇಶದಲ್ಲಿ ವ್ಯಾಪಕವಾಗಿ 100ರ  ಗಡಿ ಸೇರಿರುವ ಪೆಟ್ರೋಲ್ ಹಾಗೂ ಡೀಸೆಲ್‌ ದರ ಹೆಚ್ಚಳದ ವಿರುದ್ಧ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ ಸಾಲ್ಯಾನ್ ರವರ ನೇತೃತ್ವದಲ್ಲಿ  ಶನಿವಾರ  ಮಂಗಳೂರಿನ ಲೇಡಿಹಿಲ್ ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತಾಡಿದ ಮಾಜಿ ಶಾಸಕ ಜೆ.ಆರ್.ಲೋಬೋರವರು ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಆಗಿದೆ.ದೇಶದ ಜನರ ಈ ಸಂಕಷ್ಟಕ್ಕೆ ದೇಶದ

ಪುತ್ತೂರಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಇಂಧನ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ಹಮ್ಮಿಕೊಂಡಿರುವ 100ನೋಟ್ ಔಟ್ ಎನ್ನುವ ಪ್ರತಿಭಟನಾ ಕಾರ್ಯಕ್ರಮದ ಅಂಗವಾಗಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾವು ಹೇಮನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ವಿನೂತನವಾಗಿ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾವು ಹೇಮನಾಥ್ ಶೆಟ್ಟಿಯವರು ಮಾತಾಡಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೂಲಕ ಜನತೆಯ ಹಣವನ್ನು ಲೂಟಿಗೈಯ್ಯುತ್ತಿದೆ, ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ೧೪೦ ಡಾಲರ್ ಆಗಿದ್ದರೂ

ಬಿಎಸ್‌ ಎನ್‌ ಎಲ್ ಬಗ್ಗೆ ಜನತೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಿ : ಪುತ್ತೂರು ಶಾಸಕ ಸಂಜೀವ ಮಠಂದೂರು 

ಪುತ್ತೂರು: ನಮ್ಮಲ್ಲಿಗೆ ಹಲವು ಸಂಸ್ಥೆಗಳ ಮೊಬೈಲ್ ನೆಟ್‌ವರ್ಕ್ಗಳು ಬಂದಿದ್ದರೂ ಅಷ್ಟೇ ವೇಗವಾಗಿ ಮಾಯವಾಗಿ ಹೋಗಿದೆ. ಇವೆಲ್ಲದರ ನಡುವೆ ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಜನರು ವಿಶ್ವಾಸವಿಟ್ಟು ಅದನ್ನು ಬಳಕೆ ಮಾಡುತ್ತಿದ್ದಾರೆ. ಜನರು ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಅವರು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಮತ್ತು ಖಾಸಗಿ ದೂರವಾಣಿ

ದಲಿತ ಕವಿ ಡಾ. ಸಿದ್ದಲಿಂಗಯ್ಯ ರವರಿಗೆ ಗೌರವಪೂರ್ಣ ವಿದಾಯ

ದಲಿತ ಕವಿ, ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯನವರಿಗೆ ಅಂತಿಮ ವಿದಾಯ ಹೇಳಲಾಗಿದೆ. ಬೆಂಗಳೂರಿನ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ರಾಷ್ಟ್ರಕವಿ ಪ್ರೊ. ಜಿ.ಎಸ್.ಶಿವರುದ್ರಪ್ಪ ಅವರ ಸಮಾಧಿ ಪಕ್ಕದಲ್ಲೇ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ನಡೆಸಲಾಯಿತು. ಮೂರು ಸುತ್ತಿನ ಕುಶಾಲತೋಪು ಸಿಡಿಸಿ ಗೌರವ ನಮನ ಸಲ್ಲಿಸಲಾಯಿತು. ಬೌದ್ಧ ಧರ್ಮದ

ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾಂಗ್ರೆಸ್‌ ನಿಂದ ಪ್ರತಿಭಟನೆ

ಇಂಧನ ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಕಾರ್ಕಳದ ಸ್ಥಳೀಯ ಪೆಟ್ರೋಲ್ ಬಂಕ್ ಎದುರುಗಡೆ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಮಾತನಾಡಿ, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರಕಾರದಿಂದ ಜನ ವಿರೋಧಿ ನೀತಿಯಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತವಾಗಿ ಏರಿಸಿ ಶತಕವನ್ನು ದಾಟಿಸಿದ್ದಾರೆ. ಇದು ಬಿಜೆಪಿ ಸರಕಾರದ ಸಾಧನೆಯ ವಿಷಯವಾಗಿದೆ. ಮೊದಲೇ

ಕಾಪುವಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಕಾಪು ಪೆಟ್ರೋಲ್ ಬಂಕ್‌ನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ವಿಭಿನ್ನವಾಗಿ ನಡೆದ ಪ್ರತಿಭಟನೆಯಲ್ಲಿ ಕ್ರಿಕೆಟ್ ಆಟಗಾರನ ಮಾದರಿ, ಕೇಕ್ ತುಂಡರಿಸುವುದು, ಮಹಿಳಾ ಕಾಂಗ್ರೆಸ್‌ನಿಂದ ತಟ್ಟೆ ಬಡೆಯುವ ಮೂಲಕ ಎಲ್ಲರ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೊವೀಡ್ ಸಂಕಷ್ಟ ಕಾಲದಲ್ಲಿ ಜನರ ಪರವಾಗಿ ನಿಲ್ಲಬೇಕಾಗಿದ್ದ

ಪುತ್ತೂರಿನಲ್ಲಿ ‘ಭತ್ತ ಬೆಳೆಯೋಣ ಬದುಕು ಕಟ್ಟೋಣ’ ಆಂದೋಲನ

ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಪೂರ್ಣ ಪ್ರಮಾಣದಲ್ಲಿ ಭತ್ತದ ಬೇಸಾಯದ ಜಿಲ್ಲೆಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಬೇಸಾಯವೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆಶಯದಂತೆ ಮತ್ತೆ ದ.ಕ. ಜಿಲ್ಲೆಯನ್ನು ಬೇಸಾಯ ವೈಭವದ ಜಿಲ್ಲೆ ಮಾಡುವ ಉದ್ದೇಶ ಇಟ್ಟುಕೊಂಡು ಭತ್ತ ಬೆಳೆಯೋಣ.. ಬದುಕು ಕಟ್ಟೋಣ ಎಂಬ ಆಂದೋಲನ ಆರಂಭಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ