Home Archive by category ಕ್ರೀಡೆ

ಮೂಡುಬಿದಿರೆ: ಕ್ರಾಸ್‌ಕಂಟ್ರಿ – ಆಳ್ವಾಸ್ ಸತತ 21ನೇ ವರ್ಷಗಳಿಂದ ಚಾಂಪಿಯನ್

ಮೂಡುಬಿದಿರೆ: ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿ ಪಡೆದಿದೆ.ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ.

ಸ್ವಿಜರ್‌ಲ್ಯಾಂಡ್ : ಜ್ಯೂರಿಚ್‌ ಜಾವೆಲಿನ್ ಎಸೆತ ಬೆಳ್ಳಿಗೆ ತಳ್ಳಲ್ಪಟ್ಟ ನೀರಜ್ ಚೋಪ್ರಾ

ಭಾರತದ ನೀರಜ್ ಚೋಪ್ರಾ ಅವರು ಸ್ವಿಜರ್‌ಲ್ಯಾಂಡಿನ ಜ್ಯೂರಿಚ್‌ನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು.ಇದು ಡೈಮಂಡ್ ಲೀಗ್ ಪಂದ್ಯಾವಳಿಯಲ್ಲಿ ನೀರಜ್ ಚೋಪ್ರಾರಿಗೆ ದಕ್ಕಿರುವ ನಾಲ್ಕನೆಯ ಪದಕವಾಗಿದೆ. ಕೊನೆಯ ಮೂರರಲ್ಲಿ ಬೆಳ್ಳಿ ಹಿಡಿದ ಅವರು ರಜತ ಹ್ಯಾಟ್ರಿಕ್ ಗಳಿಸಿದರು. 2022 ರ ಡೈಮಂಡ್ ಲೀಗ್‌ನಲ್ಲಿ ಮಾತ್ರ ಅವರು ಚಿನ್ನ ಗೆದ್ದಿದ್ದರು. 2023, 2024 ಹಾಗೂ ಈ ವರುಷದ ಡೈಮಂಡ್ ಲೀಗ್‌ನಲ್ಲಿ ಅವರು ಈಟಿ ಎಸೆತz ಮೂಲಕ

ಪುತ್ತೂರು :ಲಿಟ್ಲ್ ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ

ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ.ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು.

ಮೂಡುಬಿದಿರೆ :ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2025

ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

ಮೂಡುಬಿದಿರೆ: ಕಬಡ್ಡಿ ಅಳಿಯೂರು ಸರ್ಕಾರಿ ಪ್ರೌಢ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ 17ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಳಿಯೂರಿನ ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ ಭಾಸ್ಕರ ಪಾಲಡ್ಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟ ಸ್ಪರ್ಧೆ

ಮೂಡುಬಿದಿರೆ ಹಳೆಯಂಗಡಿಯ ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ 4ಕಿಮೀ ಓಟದಲ್ಲಿ ದಿಶಾ ಆರನೇ ಸ್ಥಾನ ಪಡೆದರು.ಆ ಮೂಲಕ 14 ಹಾಗೂ 17 ವರ್ಷ

ಬೈಂದೂರು : ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಶಾಲಾ ವಠಾರದಲ್ಲಿ ಸಂಭ್ರಮದಲ್ಲಿ ನಡೆಯಿತು ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿಕ್ರೀಡೆಯಲ್ಲಿ ಭಾಗವಹಿಸುವುದು ಮಹತ್ವದ್ದೇ ಹೊರತು, ಸೋಲು–ಗೆಲುವು ಮುಖ್ಯವಲ್ಲ.

ಮಂಗಳೂರು : ಅಂತರಾಷ್ಟ್ರೀಯ ವೇದಿಕೆಯಲ್ಲಿ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಕೀರ್ತಿ ತಂದ ಮಂಗಳೂರಿನ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್

ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆ (ಆಗಸ್ಟ್ 13ರಿಂದ 17, ವಿಯೆಟ್ನಾಂ)ನಲ್ಲಿ ನಡೆದಿತ್ತು ಈ ಸ್ಪರ್ಧೆಗೆ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಇಂದು ಮಂಗಳೂರಿಗೆ ಬಂದಿಲಿದಿದ್ದು ಮಂಗಳೂರಿನ ವಿಮಾನ ನಿಲ್ದಾಣ ದಲ್ಲಿ ಹೂಗುಚ್ಚ ನೀಡಿ ಕುಟುಂಸ್ಥರು ಸ್ವಾಗತಕೋರಿದರು.ಮಂಗಳೂರು ಕುಲಶೇಖರ ಮೂಲದ, ಕೇವಲ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್, ಅಂತರಾಷ್ಟ್ರೀಯ ಫ್ಯಾಷನ್ ಮತ್ತು ಪ್ರತಿಭಾ ವೇದಿಕೆಯಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದಾನೆ. ಬೆಜೈಯ ಲೂರ್ಡ್ಸ್

ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆ: ಸಾನ್ವಿ ಶರಣ್ ಶೆಟ್ಟಿಗೆ ರಜತ ಪದಕ

ಮಂಗಳೂರು: ತಮಿಳುನಾಡಿನ ಕೆಎಸ್‌ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ ಸ್ಪರ್ಧೆಯೊಡ್ಡಿ ಉತ್ತಮ ಸಾಧನೆ ಮೆರೆದಿದ್ದಾರೆ.

ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ: ಆಳ್ವಾಸ್ ಶಾಲೆಗೆ ತಂಡ ಪ್ರಶಸ್ತಿ

ಮೂಡುಬಿದಿರೆ: ನ. 18ರಿಂದ 20ರವರೆಗೆ ನಡೆದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬಾಗಲಕೋಟೆ, ಹ.ಉ.ಪೂ ಸರಕಾರಿ ಪ್ರೌಢ ಶಾಲೆ, ತುಳಸಿಗಿರಿ, ಸರಕಾರಿ ಕುವೆಂಪು ಶತಮಾನೋತ್ಸವ ಮಾದರಿ ಪ್ರಾಥಮಿಕ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಜೆ.ಪಿ ತುಳಸಿಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 14ವರ್ಷ ಮತ್ತು 17 ವರ್ಷ ವಯೋಮಿತಿಯ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು