Home Archive by category ಕ್ರೀಡೆ (Page 10)

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದರು.      

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಸಾಧ್ಯತೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಒಲಿಯುವ ಸಾಧ್ಯತೆ ಇದೆ. ಚೀನಾದ ಝಿಹುಯಿ ಅವರು ಚಿನ್ನದ ಪದಕ ಗೆದ್ದಿರುತ್ತಾರೆ. ಇದೀಗ ಹಿಂಪಡೆದ ಸಂಘಟಕರು ಚೀನಾದ ಝಿಹುಯಿ ಅವರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದ್ದು, ಒಂದು ವೇಳೆ ಝಿಹುಯಿ ಅವರು ಉದ್ದೀಪನ ಔಷಧಿ ಸೇವಿಸಿರುವುದು ಸಾಬೀತಾದಲ್ಲಿ ಅವರು ಪದಕವನ್ನು ಕಳೆದುಕೊಳ್ಳುವರು. ಇಂತಹ ಸಂದರ್ಭದಲ್ಲಿ ಎರಡನೇ ಸ್ಥಾನದಲ್ಲಿರುವ ಮೀರಾಬಾಯಿ ಚಾನು ಅವರನ್ನು

ಒಲಿಂಪಿಕ್ಸ್‌ನಲ್ಲಿ ಭಾರತ ಶುಭಾರಂಭ : ವೇಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ

ಒಲಿಂಪಿಕ್ಸ್‌ನ ಮೊದಲ ದಿನದಂದು ಪದಕದ ಬೇಟೆ ಆರಂಭಿಸಿದೆ. ಮಹಿಳೆಯರ 49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದರು. ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ವೇಟ್ ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೀನಾದ ಝಿಹುಯಿ ಸ್ನ್ಯಾಚ್ ಹಾಗೂ ಕ್ಲೀನ್ ಮತ್ತು ಜೆರ್ಕ್ ಎರಡರಲ್ಲೂ ಒಲಿಂಪಿಕ್ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ. ಕ್ಲೀನ್ ಹಾಗೂ ಜರ್ಕ್ ನಲ್ಲಿ ಒಟ್ಟು 110 ಕೆಜಿ ಎತ್ತಿ ಹಿಡಿದಿರುವ ಭಾರತದ

ತುಳುಕೂಟ ಕತಾರ್ ವತಿಯಿಂದ ನಡೆದ ಬ್ಯಾಡ್ಮಿಂಟನ್ ಪಂದ್ಯಾವಳಿ

ಒಲಿಂಪಿಕ್ ಕ್ರೀಡಾ ಕೂಟ ಕೋವಿಡ್ ನಿಂದ  ಒಂದು ವರ್ಷ ಮುಂದೂಡಲ್ಪಟ್ಟು ಈ ವರ್ಷ ನಡೆಸಲು ಜಪಾನ್ ಮುಂದಾಗಿದೆ.ಹಾಗೇನೇ ಕೊಲ್ಲಿ ರಾಷ್ಟ್ರದಲ್ಲೂ ಕೋವಿಡ್ ಪ್ರಕರಣ ಕಡಿಮೆ ಯಾಗಿ  ಕ್ರೀಡಾ ಕೂಟ  ನಡೆಸಲು ಸರ್ಕಾರ ಹಸಿರು ನಿಶಾನೆ ನೀಡಿದ್ದು ಇದರಿಂದ ದೋಹಾ ಕತಾರ್ ನಲ್ಲಿ ಹೊಸಾ ಮಾರ್ಗಸೂಚಿ ಪ್ರಕಟಿಸಿ ಕ್ರೀಡಾ ಕೂಟಗಳು ನಡೆಸಲು ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ತುಳುಕೂಟ ಕತಾರ್ ಜುಲೈ 9 ರಂದು ದೋಹಾ ದ ಕೇಂಬ್ರಿಡ್ಜ್ ಶಾಲೆಯಲ್ಲಿ ಕರ್ನಾಟಕ ಮೂಲದ ಸಂಘ

ಫ್ಲೈಯಿಂಗ್ ಸಿಖ್ ಖ್ಯಾತಿಯ ಭಾರತದ ಮಾಜಿ ಅಥ್ಲಿಟ್ ಮಿಲ್ಕಾ ಸಿಂಗ್ ವಿಧಿವಶ

‘ಫ್ಲೈಯಿಂಗ್ ಸಿಖ್’ ಖ್ಯಾತಿಯ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ (91) ಅವರು ಕಳೆದ ರಾತ್ರಿ ನಿಧನರಾದರು. ಕಳೆದ ಕೆಲವು ದಿನಗಳ ಹಿಂದೆ ಜ್ವರ ಪೀಡಿತರಾಗಿದ್ದ ಮಿಲ್ಖಾ ಸಿಂಗ್ ಅವರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಿಲ್ಖಾ ಅವರ ಪತ್ನಿ ನಿರ್ಮಲ್ ಅವರು ಐದು ದಿನದ ಹಿಂದೆಯಷ್ಟೇ ನಿಧನ ಹೊಂದಿದ್ದರು. ಟ್ರ್ಯಾಕ್ ಆಂಡ್ ಫೀಲ್ಡ್ ನಲ್ಲಿ ಉನ್ನತ ಸಾಧನೆ ಮಾಡಿದ್ದ ಮಾಡಿದ್ದ ಮಿಲ್ಖಾ ತನ್ನ ವೇಗದಿಂದಲೇ ಹಾರುವ ಸಿಖ್