ಮೂಡುಬಿದಿರೆ : ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್, ಎಂಕೆ ಅನಂತರಾಜ್ ಕಾಲೇಜು ಓಫ್ ಫಿಸಿಕಲ್ ಎಜುಕೇಶನ್ ಹಾಗೂ ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸೆಂಟರ್ ಜಂಟಿಯಾಗಿ ಸಮಾಜಮಂದಿರದಲ್ಲಿ ಆಯೋಜಿಸಿದ 19ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕೆಲರಾಯ ರೆಡ್ ಕ್ಯಾಮಲ್ ಇಂಗ್ಲಿಷ್ ಮೀಡಿಯಂ ಶಾಲೆಯು ಸಮಗ್ರ ತಂಡ ಪ್ರಶಸ್ತಿಯನ್ನು ಗಳಿಸಿದೆ.
ಬೆಂಗಳೂರು, ಸೆ, 7; ಶಿಕ್ಷಣ ತಜ್ಞ, ಕರ್ಮಯೋಗಿ ಎಂ.ಎಸ್. ರಾಮಯ್ಯ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಟೂರ್ನಿ ಯಶಸ್ವಿಯಾಗಿ ನಡೆಯಿತು. ಬೆಂಗಳೂರು ಗ್ರಾಮೀಣ ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ನಿಂದ ಆಯೋಜಿಸಲಾಗಿದ್ದ ಟೇಬಲ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ಹಾಗೂ 17 ವಯೋಮಿತಿ ಬಾಲಕಿಯರ ವಿಭಾಗದಲ್ಲಿ ದೇಶ್ನಾ ಎಂ ವೆಂಕಟೇಶ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಬಾಲಕರ 17 ವಯೋಮಿತಿಯೊಳಗಿನ ವಿಭಾಗದಲ್ಲಿ
ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ತರಬೇತಿ ಪಡೆಯುತ್ತಿರುವ 8 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸ್ಪರ್ಧಾ ಕೂಟದಲ್ಲಿ ಕಳ್ಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಹಂಸಿಕಾ ಹಾಗೂ ಗಿತೇಶ್ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ ಪೊಳಲಿ
ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಮತ್ತು ಸರಕಾರಿ ಪ್ರೌಢಶಾಲೆ ನೀರ್ಕರೆ ಇವುಗಳ ಸಹಯೋಗದಲ್ಲಿ ಪ್ರೌಢ ಮತ್ತು ಪ್ರಾಥಮಿಕ ವಿದ್ಯಾರ್ಥಿಗಳ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟವು ನೀರ್ಕೆರೆಯ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆಯಿತು.ತೆಂಕಮಿಜಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿದರು. ಸರಕಾರಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ
ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ 27ನೇ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಯೆನೆಪೋಯ ತಂಡ ಮೂರು ವಿಭಾಗಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ನೆಹರೂ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರಾವಳಿ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್. ಗಣೇಶ್ ರಾವ್ ಅವರು ಮಾತನಾಡಿ,
ಶ್ರೀಮತಿ ಭಾರತಿ ಮತ್ತು ಶ್ರೀನಿವಾಸ್ ದಂಪತಿಗಳ ಪುತ್ರಿಯಾದ ಮಾನ್ವಿ ಎಸ್. ಪೂಜಾರಿ ಇವರು ಸೈಂಟ್ ಆನ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕುಂಟಿಕಾನ ಮಂಗಳೂರು ನಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದು, ತನ್ನ 6ನೇ ವಯಸ್ಸಿನಲ್ಲಿ ಯೋಗದಲ್ಲಿ ಆಸಕ್ತಿ ತೋರಿ ಒಂದು ವರ್ಷದಿಂದ ಆವಿಷ್ಕಾರ್ ಯೋಗ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದು ಸುಮಾರು 75 ಆಸನಗಳನ್ನು ಅವುಗಳ ಹೆಸರಿನೊಂದಿಗೆ ಗುರುತಿಸಿಕೊಂಡು ಮಾಡುವ ಸಾಮರ್ಥ್ಯ ಹೊಂದಿರುತ್ತಾರೆ. ಇವರು ಶಿವಜ್ಯೋತಿ ಯೋಗ
ಇಂಗ್ಲೆಂಡ್‍ನ ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್‍ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ 269 ಕೆಜಿ ಭಾರ ಎತ್ತುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಎರಡನೇ ಬಾರಿ ಭಾರತಕ್ಕೆ ಪದಕ
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ವೇಟ್‌ಲಿಫ್ಟರ್ ಮೀರಾಬಾಯಿ ಸಾಯಿಕೋಮ್ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ
ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭ್ಯವಾಗಿದೆ 55 ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಕಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ
ಕೊಚ್ಚಿನ್: ಐಪಿಎಲ್ ಮಾದರಿಯಂತೆ ವಾಲಿಬಾಲ್‌ನಲ್ಲೂ ಹೊಸ ಲೀಗ್ ಆರಂಭವಾಗಿದ್ದು, ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಇಂದು ಕೊಚ್ಚಿನ್ ನಲ್ಲಿ ನಡೆದಿದೆ. ಮಂಗಳೂರಿನ ಆಟಗಾರ ಅಶ್ವಲ್ ರೈ ಅವರು ದಾಖಲೆಯ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡದ ಪಾಲಾಗಿದ್ದಾರೆ. ಅಶ್ವಲ್ ರೈ ಅವರನ್ನು 15 ಲಕ್ಷ ರೂ. ಬೆಲೆಗೆ ಕೋಲ್ಕತ್ತಾ ತಂಡ ಖರೀದಿಸಿತು. ಇವರಂತೆ ಕಾರ್ತಿಕ್ ಎ ಮತ್ತು ಜೆರೋಮ್ ವಿನಿತ್ ಅವರನ್ನು ಪ್ರೈಮ್ ವಾಲಿಬಾಲ್ ಹರಾಜಿನಲ್ಲಿ ಕ್ರಮವಾಗಿ ಕೊಚ್ಚಿ ಬ್ಲೂ