Home Archive by category ಕ್ರೈಮ್ (Page 22)

ಸರಕಾರಿ ಕಚೇರಿಯಲ್ಲಿ ಫೋಟೋ ನಿರ್ಬಂಧ ಆದೇಶ ವಾಪಾಸು

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೈಂದೂರು: ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಹಿತ ಇಬ್ಬರ ಆರೋಪಿಗಳ ಬಂಧನ

ಬೈಂದೂರು: ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಅವರಿಗೆ ಬಂದ ಖಚಿತ ಮಾಹಿತಿಯಂತೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಅವರ ಉಪಸ್ಥಿತಿಯಲ್ಲಿ ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾದ ಘಟನೆ ಬೈಂದೂರು ರಾಹುತನಕಟ್ಟೆ ಎಂಬಲ್ಲಿ ಮಂಗಳವಾರ ನಡೆದಿದೆ. ಭಟ್ಕಳ ನಿವಾಸಿ ಅಬ್ದುಲ್ ರೆಹಮಾನ್ (31), ಶಿರ್ವ ನಿವಾಸಿ ಅಬ್ದುಲ್ ಸಮದ್ (30) ಬಂಧಿತರಾಗಿದ್ದು, ಇವರಿಬ್ಬರು ಮಾದಕ ವಸ್ತುವನ್ನು ಸಲೀಮ್ ಮಂಚಿ ಎಂಬಾತನಿಂದ ಖರೀದಿಸಿ

ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಶವ ಕೋಟೆಪುರದಲ್ಲಿ ಪತ್ತೆ

ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(೧೯) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ

ಪುತ್ತೂರು: ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ: ಇಬ್ಬರ ಬಂಧನ

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷೀರು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ವರ್ಷ) ಮತ್ತು ಜಯ(38 ವರ್ಷ) ರವರನ್ನು ಅರಣ್ಯ ಇಲಾಖೆ ಅಧಿಕಾರಿ ಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ

ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿಯ ಹತ್ಯೆ

ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಉಣಕಲ್ಲ ಕೆರೆ ಬಳಿಯ ಖಾಸಗಿ ಹೋಟೆಲ್ ನ ಸ್ವಾಗತಕಾರರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುರೂಜಿ ಮೇಲೆ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಮಾತನಾಡಿಸಿದವರಂತೆ

ಯುವಕನನ್ನು ಕತ್ತಿಯಿಂದ ಕಡಿದು ಕೊಲೆ : ಕೈಕಂಬದ ತಲಪಾಡಿಯಲ್ಲಿ ನಡೆದ ಘಟನೆ

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಕತ್ತಿ ಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಅತನ ಸ್ನೇಹಿತ ನೌಫಾಲ್ ಮತ್ತು ಇನ್ನೊಬ್ಬ ನ ಹೆಸರು ಸಿಕ್ಕಿಲ್ಲ ಇಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.ಇವರು ಗಾಂಜ ಗಿರಾಕಿಗಳಾಗಿದ್ದು , ತಲಪಾಡಿ ರಾಷ್ಟ್ರೀಯ ಹೆದ್ದಾರಿ

ಕಾಲು ಜಾರಿ ಬಾವಿಗೆ ಬಿದ್ದು ಯುವತಿ ಸಾವು : ಕಾಪು ಸಮೀಪದ ಮಡುಂಬು ಎಂಬಲ್ಲಿ ಘಟನೆ

ಕಾಲು ಜಾರಿ ಬಾವಿಗೆ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಕಾಪು ಸಮೀಪದ ಮಡುಂಬು ಎಂಬಲ್ಲಿ ನಡೆದಿದೆ. ಶರ್ಮಿಳಾ ಶೆಟ್ಟಿ(22) ಮೃತ ಪಟ್ಟ ಯುವತಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಈಕೆ ಇಂದು ಮುಂಜಾನೆ ತನ್ನ ಊರಿಗೆ ಬಂದಿದ್ದಳು. ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಬಂದ ಕಾಪು ಪೊಲೀಸರು ಸಾರ್ವಜನಿಕರ ನೆರವಿನಲ್ಲಿ ಶವವನ್ನು ಬಾವಿಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಿ ವಾರಿಸುದಾರರಿಗೆ ಬಿಟ್ಟು ಕೊಟ್ಟಿದ್ದು ಪ್ರಕರಣ

ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ ಆತ್ಮಹತ್ಯೆ

ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಇಲ್ಲದಂತಹ

ಮಂಗಳೂರಿನಲ್ಲಿ ಮತ್ತೆ ತಲವಾರು ದಾಳಿ

ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೆ ತಲವಾರು ದಾಳಿ ನಡೆದಿದೆ. ಹಳೆಯ ಕೊಲೆಯ ವೈಷಮ್ಯಕ್ಕೆ ಯುವಕನೋರ್ವನ ಕೊಲೆ ಯತ್ನ ನಿನ್ನೆ ರಾತ್ರಿ ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿಗಳ ತಂಡದ ಗ್ಯಾಂಗ್ ವಾರ್ ನಲ್ಲಿ ಶ್ರವಣ್ ಎಂಬ ಯುವಕನ ಮೇಲೆ 8 ಜನರ ತಂಡವೊಂದು ಮಾರಣಾಂತಿಕ ದಾಳಿ ನಡೆಸಿದೆ. ಶ್ರವಣ್ ಗಂಭೀರವಾಗಿ ಗಾಯಗೊಂಡಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. 2020ರಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಇಂದ್ರಜಿತ್

ಬಾಲ ಮಂದಿರದಿಂದ ಬಾಲಕರು ನಾಪತ್ತೆ

ನಗರದ ಬೋಂದೆಲ್‌ನಲ್ಲಿರುವ ಬಾಲಕರ ಬಾಲ ಮಂದಿರದಿಂದ ನ.26 ರ ರವಿವಾರ ಮುಂಜಾನೆ ಶ್ಯಾಮವೆಲ್ ಟೊಪ್ಪು (16) ಮತ್ತು ವಡಲಮನಿ ಚಿರಂಜೀವ (16) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಯಾಮುವೆಲ್ 150 ಸೆಂ.ಮೀ ಎತ್ತರವಿದ್ದು, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಎದುರಿನಲ್ಲಿ ಹಳದಿ ಬಣ್ಣದ ಪಟ್ಟಿ ಇರುವ ತಿಳಿನೀಲಿ ಬಣ್ಣದ ಟೀಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ವಡಲಮನಿ ಚಿರಂಜೀವಿ 150 ಸೆಂ.ಮೀ