ನಗರದ ನಂತೂರು ಪದವು ಬಳಿ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ನ 29 ರ ಸೋಮವಾರ ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಅಗ್ರಹಾರದ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ ಯಾನೆ ಅನಾಮಿಕ (27) ಬಂಧಿತ ಆರೋಪಿಯಾಗಿದ್ದಾನೆ. ಗಣೇಶ್ ಶೆಟ್ಟಿ ಎಂಬವರು ಎರಡು ತಿಂಗಳ ಹಿಂದೆ ತನ್ನ
14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಸೋಮವಾರ ಬೆಳಿಗ್ಗೆ ಶಾಲೆಗೆ ಸಿದ್ಧವಾಗಿ ಮನೆಯಿಂದ ಹೊರಟಿದ್ದ. ಆದರೆ ಶಾಲೆಯ ಬಸ್ ತಪ್ಪಿ ಹೋಗಿತ್ತು ಎಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆತುಲ್ ಜಿಲ್ಲೆಯ ಅಮ್ದೋಹ್ ಗ್ರಾಮದಲ್ಲಿ ನಡೆದಿದೆ. ಬಸ್ ಹೊರಟುಹೋಗಿದ್ದ ಕಾರಣ ಬೇಸರಗೊಂಡಿದ್ದ. ಮನೆಗೆ ಅಳುತ್ತಾ ವಾಪಸ್ಸಾಗಿದ್ದ.ನಂತರ ಮನೆಯ ಹಿಂದಿದ್ದ ಮಾವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ `ಪತ್ತೆಯಾಗಿದ್ದ’ ಎಂದು ಕುಟುಂಬದ
ಮಂಗಳೂರು ಪರಾರಿಯ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರೊಬ್ಬರ 8 ವರ್ಷದ ಮಗುವನ್ನು ಭಾನುವಾರ ಅಪಹರಿಸಿ ಹತ್ಯೆ ನಡೆಸಿ ಚರಂಡಿಗೆಸೆಯಲಾಗಿತ್ತು. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದಾಗಿ ಕಾರ್ಮಿಕರೆಲ್ಲರೂ ಅಲ್ಲೇ ವಾಸವಿದ್ದರು ಎನ್ನಲಾಗಿದೆ. ಈ ವೇಳೆ
ಮಂಗಳೂರು: ಪತ್ರಕರ್ತ, ಕನ್ನಡ ಖಾಸಗಿ ನ್ಯೂಸ್ ಚಾನೆಲ್‍ನ ದ.ಕ ಜಿಲ್ಲಾ ವರದಿಗಾರನೋರ್ವನ ಮೇಲೆ ನಿನ್ನೆ ಸಂಜೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ನ್ಯೂಸ್ ಚಾನೆಲ್‍ನ ದ.ಕ ಜಿಲ್ಲಾ ವರದಿಗಾರ ಸುಖ್‍ಪಾಲ್ ಪೊಳಲಿ ಹಲ್ಲೆಗೊಳಗಾದ ಪತ್ರಕರ್ತ. ನಿನ್ನೆ ಸಂಜೆ ವ್ಯಕ್ತಿಯೊಬ್ಬ ಏಕಾಏಕಿ ಬಂದು ಸುಖ್‍ಪಾಲ್ ಪೊಳಲಿ ಮೇಲೆ ಮಾರಾಕಾಯುಧದಿಂದ ತಲೆಯ ಭಾಗಕ್ಕೆ ಹಲ್ಲೆ ನಡೆಸಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ತಂದೆಯನ್ನು ಮಗಳು ತನ್ನ ಪ್ರಿಯಕರನಿಂದಲೇ ಮನೆಗೆ ಕರೆಸಿ ಕೊಲ್ಲಿಸಿದ ಪ್ರಕರಣವೊಂದು ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಪುತ್ರಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್ದಾಳೆ.ಯಲಹಂಕ ನ್ಯೂ ಟೌನ್‌ನ ಅಟ್ಟೂರು ಬಡಾವಣೆ ನಿವಾಸಿ ದೀಪಕ್ ಕುಮಾರ್ ಸಿಂಗ್ (46) ಕೊಲೆಯಾದ ವ್ಯಕ್ತಿ. ಬಿಹಾರ ಮೂಲದ ಇವರು ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗಳು
ತಾಲೂಕಿನ ಪಡುಮಾರ್ನಾಡು ಗ್ರಾ.ಪಂಚಾಯತ್ ವ್ಯಾಪ್ತಿಯ ತಂಡ್ರಕೆರೆ ಗಂಪದಡ್ಕ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗ್ರಾನೈಟ್ ಕಲ್ಲಿನ ಕೋರೆಗೆ ಮೂಡುಬಿದಿರೆ ತಹಶೀಲ್ದಾರ್ ಅವರು ಸಾರ್ವಜನಿಕರ ಸಹಕಾರದೊಂದಿಗೆ ದಾಳಿ ನಡೆಸಿ ಗ್ರಾನೈಟ್ ತುಂಬಿದ ಲಾರಿ, ಹಿಟಾಚಿ ಮತ್ತು ಕಲ್ಲು ಕೊರೆಯುವ ಯಂತ್ರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ 20 ದಿನಗಳಿಂದ ಇಲ್ಲಿ ಅಕ್ರಮವಾಗಿ ಬೆಲೆಬಾಳುವ ಬೃಹತ್ ಗ್ರಾನೈಟ್ ಕಲ್ಲಿನ ಕೋರೆ ನಡೆಯುತ್ತಿತ್ತು ಈ ಬಗ್ಗೆ ಸಾರ್ವಜನಿಕರು
ಪುತ್ತೂರು: ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30 ಶೇ. ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ ಅರಂತನಡ್ಕ ನಿವಾಸಿ ಸಹಿತ ಐವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ ಭಕ್ತರು ಹಾಕಿದ್ದ ರೂ.100 ಮುಖ ಬೆಲೆಯ ರೂ.10 ಲಕ್ಷ ಮೌಲ್ಯದ ನೋಟುಗಳಿದ್ದು, ಆವುಗಳನ್ನು ವಿಲೇವಾರಿ ಮಾಡಲು
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೊಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ
ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟ್ಮೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ. ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು.
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕನಿಂದ ಮಕ್ಕಳ ಕಲ್ಯಾಣ ಸಮಿತಿಗೆ ಹಾಗೂ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾನೆ, ಹಲ್ಲೆ ನಡೆಸಿದ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.





















