Home Archive by category ಕ್ರೈಮ್ (Page 9)

ಲಾಡ್ಜ್‌ನಲ್ಲಿಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ನಗರದ ಕೆಎಸ್ ರಾವ್ ರೋಡ್ ಬಳಿ ಇರುವ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೈಸೂರು ಮೂಲದ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48) , ಪತ್ನಿ ಮತ್ತು ಇಬ್ಬರು ಹೆಣ್ಣಕ್ಕಳು ಆತ್ಮಹತ್ಯೆ ಮಾಡಿಕೊಂಡರು. ಮಾರ್ಚ್ 27ಕ್ಕೆ ಮಂಗಳೂರಿನ ಹೊಟೇಲ್ ನಲ್ಲಿ

ಕೋಟೆಕಾರಿನಿಂದ ಕಳವಾದ ಬೈಕ್ ಮಂಗಳೂರಿನಲ್ಲಿ ಪತ್ತೆ, ಮೂವರು ಪೊಲೀಸರ ವಶಕ್ಕೆ

ಉಳ್ಳಾಲ: ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು. ಕೃತ್ಯ

ನೆಲ್ಯಾಡಿ ಡಿವೈಡರ್ ಗೆ ಕಾರು ಡಿಕ್ಕಿ; ಸ್ಥಳದಲ್ಲಿ ತಾಯಿ ಮೃತ್ಯು – ತಂದೆ, ಮಗ ಗಂಭೀರ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಬೆಳ್ಳಂಬೆಳಗ್ಗೆ ಕಾರೊಂದು ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ನಪೂರ್ಣ(ವ.50) ಎಂಬ ಮಹಿಳೆ ಸ್ಥಳದಲ್ಲಿ ಮೃತಪಟ್ಟಿದ್ದು, ಕಾರು

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ನೇಣಿಗೆ ಶರಣು

ಮೂಡುಬಿದಿರೆ: ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ಬುಧವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ ಗೌರಿಕೆರೆ ರಾಮ ಮಂದಿರ ಬಳಿಯ ನಿವಾಸಿ ಚಂದ್ರಶೇಖರ ಭಟ್ ಎಂಬವರ ಪತ್ನಿ ಕುಸುಮಾ( 49 ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಮನೆಯಲ್ಲಿ ಮಹಿಳೆಯ ಗರ್ಭಿಣಿ ಮಗಳು ಇದ್ದು ಅವರು ಮಲಗಿದ್ದರು. ಬೆಳಿಗ್ಗೆ 8.30ರ ವೇಳೆಗೆ ಮಗಳು

ಉಳ್ಳಾಲ : ಯುವಕ,ಯುವತಿಯನ್ನ ಅಡ್ಡಗಟ್ಟಿ ಸುಲಿಗೆ : ಹೆಡೆಮುರಿ ಕಟ್ಟಿದ್ದ ಪೊಲೀಸರು

ಯುವಕ,ಯುವತಿಯನ್ನ ಅಡ್ಡಗಟ್ಟಿ ಸುಲಿಗೆ;ಉಳ್ಳಾಲ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ,ಬೈಕ್,ಐಫೋನ್ ಎಗರಿಸಿದವರ ಬಂಧನ.ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡ ಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಕಳೆದ ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ

ಬಂಟ್ವಾಳ : ಮಹಿಳೆ ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪತಿ ಮನವಿ

ಬಂಟ್ವಾಳ: ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ 14ರಂದು ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಇಲ್ಲಿನ ನಿವಾಸಿ ಸತೀಶ್ ಪಿ. ಎಂಬವರ ಪತ್ನಿ ಬೀನಾ ಸಿ.

ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಸಾವು

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (೪೬) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು ೨೦ ರಷ್ಟು ನೆಂಟರು ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ

ಕುಂಪಲ: ಯುವಕ ಆತ್ಮಹತ್ಯೆ : ಊರಲ್ಲಿ ಹೆಚ್ಚಾದ ಅಕಾಲಿಕ ಸಾವುಗಳು

ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಅಕ್ಷಯ್ (25) ಎಂಬವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದ ಮಾಡಿಕೊಂಡಿದ್ದಾರೆ‌. ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರು.ಮೊಬೈಲ್ ಶಾಪ್

ಉಳ್ಳಾಲ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತಾನೇ ಆಂಬ್ಯುಲೆನ್ಸ್ ಹತ್ತಿದ್ದ ವ್ಯಕ್ತಿ ಸಾವು

ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಸಂಭವಿಸಿದೆ.ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು. ಇವರು 10 ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯ ಗಾರ್ಡನ್ ಕೆಲಸ ನಿರ್ವಹಿಸುತ್ತಿದ್ದರು. ನವವಿವಾಹಿತರಾಗಿದ್ದ ಹರೀಶ್ ಅವರು ಸಿದ್ದಕಟ್ಟೆ ಸಂಗಬೆಟ್ಟು

ರಾಮ ಕುಂಜ ಯುವಕನೋರ್ವ ನಿಗೂಢ ನಾಪತ್ತೆ : ಪ್ರೇಮ ಪ್ರಕರಣ

ಉಪ್ಪಿನಂಗಡಿ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿಯ ಯುವಕನೋರ್ವ ನಿಗೂಢವಾಗಿ ನಾಪತ್ತೆಯಾದ ಘಟನೆ ಸಂಭವಿಸಿದೆ ಕಡಬ ಠಾಣ ವ್ಯಾಪ್ತಿಯ ರಾಮ ಕುಂಜ ಗ್ರಾಮದ ಕೊರಗಪ್ಪ ಗೌಡ 24 ವರ್ಷ ಎಂಬವರ ಪುತ್ರ ಶ್ರೀಧರ ಎಂಬಾತ ಕಳೆದ 15 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಪ್ರಕರಣವು ಕಡಬ ಠಾಣೆಯಲ್ಲಿ ಪ್ರಕರಣ ದಾಖಲು ಗೊಂಡಿದೆ ರಾಮ ಕುಂಜ ಗ್ರಾಮದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದು ವಿದ್ಯಾರ್ಥಿನಿಯ ಮನೆಯವರು ಈ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದು ಅಪ್ರಾತ್ಯ