ಬಹರೈನ್ ; ಎಂ.ಎಂ.ಎಂ ಗ್ರೂಫ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡು ಮೊದಲ ಬಾರಿಗೆ ನಟ ಸಾಯಿಕೃಷ್ಣರವರು ಪೂರ್ಣಪ್ರಮಾಣದ ನಾಯಕ ನಟನಾಗಿ ಅಭಿನಯಿಸಿರುವ “ಮಿಸ್ಟರ್ ಮದಿಮಯೆ ” ಚಿತ್ರದ ಪೆÇೀಸ್ಟರ್ ಹಾಗು ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಸಮಾರಂಭವು ಕನ್ನಡ ಭವನದ ಸಭಾಂಗಣದಲ್ಲಿ ಜರುಗಿತು. ದ್ವೀಪದ ಕನ್ನಡಿಗ ಉದ್ಯಮಿ ರೊಯ್ಸ್ಟಾನ್ ಫೆರ್ನಾಂಡಿಸ್
ಬಹರೈನ್ ದ್ವೀಪದ ವೈ.ಎಂ.ಸಿ ಸಂಘಟನೆಯು ‘ನಿಸರ್ಗ ಬಹರೈನ್”ನ ಆಶ್ರಯದಲ್ಲಿ ಜುಫೇರ್ ಪರಿಸರದಲ್ಲಿರುವ ಅಲ್ ನಜ್ಮಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟವೊಂದನ್ನು ಆಯೋಜಿಸಿದ್ದು, ಆಟಗಾರರೂ ವೀಕ್ಷಕರೂ ಸೇರಿದಂತೆ ದ್ವೀಪದ ನೂರಾರು ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಾಟವನ್ನು ವೀಕ್ಷಿಸಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ದ್ವೀಪದ ಪ್ರಸಿದ್ಧ ಸಂಸ್ಥೆಯಾದ ಆರ್ & ಆರ್ ಸಂಸ್ಥೆಯು ಈ ಪಂದ್ಯಾಟದ ಮುಖ್ಯ ಪ್ರಾಯೋಜಕರಾಗಿ ಸಹಕರಿಸಿದ್ದರು.30 ಗಜಗಳ
ಇಸ್ರೇಲ್ ಹಾಗೂ ಉಗ್ರಗಾಮಿ ಗುಂಪು ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಎರಡು ಕಡೆಗಳ ಸಂಘರ್ಷದಲ್ಲಿ ಮೃತರ ಸಂಖ್ಯೆ 1,100 ಕ್ಕೂ ಮೇಲ್ಪಟ್ಟಿದೆ ಎಂದು ತಿಳಿದು ಬಂದಿದೆ. ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ಬಳಿಕ ಇಸ್ರೇಲ್ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ವಿರುದ್ಧ ಯುದ್ಧ ಘೋಷಿಸಿತು. ಮೂರು ದಿನಗಳ ಸಂಘರ್ಷವು ಈಗಾಗಲೇ ಎರಡೂ ಕಡೆಗಳಲ್ಲಿ 1,100 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಲಾಗಿದ್ದು,
ಬಹು ನಿರೀಕ್ಷೆಯ ಪುಳಿಮುಂಚಿ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಯುಎಇಯ ಅಜ್ಮಾನ್ ನ ಇಂಡಿಯನ್ ಅಸೋಸಿಯೇಷನ್ ಸಭಾಂಗಣದಲ್ಲಿ ಸಪ್ಟೆಂಬರ್ 24 ರಂದು ಜರಗಲಿದೆ. ಮಾರ್ಗದೀಪ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯುಎಇಯ ವತಿಯಿಂದ ನಡೆಯುವ ಒಂಬತ್ತನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ವೇದಿಕೆಯಲ್ಲಿ ಮಧ್ಯಾಹ್ನ 12.30 ಕ್ಕೆ ಟಿಕೆಟ್ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಫೆಮಿನಾ ಮಿಸ್ ಇಂಡಿಯಾ ಗೋವಾ 2019 ಶಾಸ್ತ್ರ ಶೆಟ್ಟಿ ಇವರು
ದುಬಾಯಿಯಲ್ಲಿ ಗೀಸೈಸ್‌ನ ಮದಿನ ಹೈಪರ್ ಮಾರುಕಟ್ಟೆ ಸಮೀಪದಲ್ಲಿರುವ ಆಕ್ಸ್‌ಫರ್ಡ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಸಂಭ್ರಮದಿಂದ ಆಚರಿಸಿದರು. ಬೆಳಿಗ್ಗೆ ಗಂಟೆ 9.೦೦ ಕ್ಕೆ ಪೂಜಾ ಸಂಕಲ್ಪದಿಂದ ಆರಂಭವಾಗಿ ಸಂಜೆ 5.೦೦ ಗಂಟೆಗೆ ತನಕ, ಭಜನೆ, ವಿಷ್ಣು ಸಹಸ್ರನಾಮ, ಶ್ರೀಕೃಷ್ಣ ವೇಷ ಸ್ಪರ್ಧೆ, ಜಾನಪದ ಆಟೋಟಗಳು, ಮುಂತಾದ ಅನೇಕ ವೈಶಿಷ್ಯಗಳ ಜೊತೆ ಮಹಾಮಂಗಳಾರತಿ, ವೈಭವದ ವಿಠಲ ಪಿಂಡಿ, ಮೊಸುರುಕುಡಿಕೆ, ಮೆರವಣಿಗೆ ಹೀಗೆ
ಎಸ್‌ಕೆಎಸ್‌ಎಸ್‌ಎಫ್ ಅಬುಧಾಬಿ ಕರ್ನಾಟಕ ವತಿಯಿಂದ ಬೃಹತ್ ಕರ್ನಾಟಕ ಮೀಲಾದ್ ಕಾನ್ಪ್‌ರೆನ್ಸ್ ಇದರ ಪ್ರಚಾರದ ಭಾಗವಾಗಿ, ಸೆಪ್ಟಂಬರ್ 1 ರಂದು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಬುಧಾಬಿ ಖಾಲಿದಿಯ್ಯ ಬ್ಲಡ್ ಬ್ಯಾಂಕ್‌ನಲ್ಲಿ ನಡೆಯಲಿರುವ ರಕ್ತದಾನ ಶಿಬಿರ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು. ಕಾರ್ಯಕ್ರಮವು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ವ್ಯವಸ್ಥಾಪಕರೂ, ಎಸ್‌ಕೆಎಸ್‌ಎಸ್‌ಎಫ್
ತುಳುವಿನ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ರಾಪಟ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದ್ದು, ಬಹರೈನ್‍ನಲ್ಲಿ ಸೆಫ್ಟರಂಬರ್ 15ರಂದು ಪ್ರೀಮಿಯರ್ ಶೋ ನಡೆಯಲಿದೆ. ಆ ಪ್ರಯುಕ್ತ ಟಿಕೆಟ್ ಬಿಡುಗಡೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೋಡಕ್ಷನ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದಿರುವ ಸಿನಿಮಾ ರಾಪಟ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ
ಬಿಲ್ಲವಾಸ್ ಕತಾರ್ ವತಿಯಿಂದ ಬಿಲ್ಲವೋತ್ಸವ -2023 ಸಮಾರಂಭವು ಅಧ್ಯಕ್ಷ ರಘುನಾಥ್ ಅಂಚನ್ ಸಾರಥ್ಯದಲ್ಲಿ ಡಿ.ಪಿ. ಎಸ್. ಅಲ್-ವಕ್ರ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಸರ್ವಾಲಂಕೃತ ಭೂಷಿತರಾದ ಮಂಗಳಾಂಗಿಯರಿಂದ ಆರತಿಯನ್ನೆತ್ತಿ ಸ್ವಾಗತ, ಸಮವಸ್ತ್ರಧಾರಿಗಳಾದ ಸದಸ್ಯರು, ಮಂಗಳ ವಾದ್ಯಗಳ ದನಿ, ಚೆಂಡೆ ತಾಳಗಳ ಅಬ್ಬರ, ಕೋಟಿ-ಚೆನ್ನಯ” ಪ್ರವೇಶದ್ವಾರ, ಅಣಿ, ಸಿರಿ, ತುಳಸಿಕಟ್ಟೆ ಮೊದಲಾದವುಗಳು ತುಳುನಾಡಿನ ಸಂಸ್ಕ್ರತಿಯನ್ನು ಪ್ರತಿಬಿಂಬಿಸುತ್ತಾ
ತುಳುವಿನ ಬಹುನಿರೀಕ್ಷೆಯ ಸಿನಿಮಾ ಸರ್ಕಸ್, ರೂಪೇಶ್ ಶೆಟ್ಟಿ ನಿರ್ದೇಶನದ ಸಿನಿಮಾವಾಗಿದ್ದು, ವಿದೇಶಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಿದ್ದು, ಸಿನಿ ಪ್ರೇಕ್ಷಕರು ಫುಲ್ ಮಾಕ್ರ್ಸ್ ನೀಡಿದ್ದಾರೆ. ತುಳು ಸಿನಿಮಾರಂಗದ ರಾಕ್ ಸ್ಟಾರ್ ಬಿಗ್‍ಬಾಸ್ 9ರ ವಿಜೇತ ರೂಪೇಶ್ ಶೆಟ್ಟಿ ನಿರ್ದೇಶನದ ಹೊಚ್ಚ ಹೊಸ ಮತ್ತು ಹಾಸ್ಯಮಯ ಸಿನಿಮಾ ಸರ್ಕಸ್. ಈಗಾಗಲೇ ಕರಾವಳಿಯಲ್ಲಿ ಸಿನಿಮಾ ಬಿಡುಗಡೆಗೆ ಎಲ್ಲಾ ತಯಾರಿಯನ್ನು ಚಿತ್ರತಂಡ ಮಾಡಿಕೊಂಡಿದೆ. ದುಬೈ, ಅಬುಧಾಬಿ,
ಬಹರೈನ್ ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಸಂಘದ ಯಕ್ಷೋಪಾಸನ ಕೇಂದ್ರದ ಹಿರಿಯ ವಿದ್ಯಾರ್ಥಿಗಳಿಂದ “ಗಿರಿಜಾ ಕಲ್ಯಾಣ ” ಎನ್ನುವ ಯಕ್ಷಗಾನ ಪ್ರದರ್ಶನವನ್ನು ನಾಟ್ಯಗುರು ದೀಪಕ್ ರಾವ್ ಪೇಜಾವರ ಇವರ ನಿರ್ದೇಶನದಲ್ಲಿ ಕನ್ನಡ ಭವನದ ಶ್ರೀಮತಿ ಆಶಾ ಶೆಟ್ಟಿ ಸಭಾಂಗಣದಲ್ಲಿ ಇದೇ ಮೇ ತಿಂಗಳ 19ನೇ ತಾರೀಖಿನ ಶುಕ್ರವಾರದಂದು ಸಂಜೆ 5:30 ಗೆ ಸರಿಯಾಗಿ ಆಯೋಜಿಸಲಾಗಿದೆ ಬಹರೈನ್ ಕನ್ನಡ ಸಂಘಕ್ಕೂ ಯಕ್ಷಗಾನಕ್ಕೂ ಸುಮಾರು ನಾಲ್ಕು ದಶಕಗಳ ಅವಿನಾಭಾವ ಸಂಭಂದವಿದ್ದು




























