Home Archive by category ರಾಜಕೀಯ (Page 11)

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ

ಮಂಗಳೂರು: ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ- ವಶಕ್ಕೆ ಪಡೆಯಲು SIT ಸಿದ್ಧತೆ

ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್‌ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ

ಬೈಂದೂರು ಸುರ್ಕುಂದ ವಾರ್ಡ್‍ನಲ್ಲಿ ಬಿರುಸಿನ ಪ್ರಚಾರ

ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ ಹಾಗೂ ಸ್ಥಳೀಯರ ಸಹಕಾರದಲ್ಲಿ ಮಾಜಿ ಮುಖ್ಯ ಮಂತ್ರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಪರವಾಗಿ ಮನೆ ಭೇಟಿ ಮಾಡಿ ಬಿರುಸಿನ ರೀತಿಯಲ್ಲಿ ಮತ ಪ್ರಚಾರವನ್ನು ಮಾಡಲಾಯಿತು.ಕಾರ್ಯಕರ್ತರು ಬಿರು ಬಿಸಿಲನ್ನು ಲೆಕ್ಕಿಸದೆ ಪ್ರಚಾರದ ಕಾರ್ಯದಲ್ಲಿ

ಒಂದಾದರೂ ಸತ್ಯ ಹೇಳಿ ಮೋದಿಯವರೆ- ಮುಖ್ಯಮಂತ್ರಿ

ಒಂದಾದರೂ ಸತ್ಯ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ. ಆಳುವವರ ಸುಳ್ಳನ್ನು ಬಯಲು ಮಾಡುವುದು ಬುದ್ಧಿಜೀವಿಗಳ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಡಿ. ವೈ. ಚಂದ್ರಚೂಡ್ ಕಳೆದ ವರುಷ ಹೇಳಿದ್ದರು. ಸರಕಾರಗಳು ಸುಳ್ಳು ಮತ್ತು ಸುಳ್ಳು ಸುದ್ದಿಗಳ ವಿರುದ್ಧ ಕಾವಲುಗಾರ ಆಗಿ ನಿಲ್ಲಬೇಕು ಎಂದೂ ಅವರು ಹೇಳಿದರು.ಪ್ರಜಾಪ್ರಭುತ್ವ ಮತ್ತು ಸತ್ಯ ಕೈ ಕೈ ಹಿಡಿದು ಸಾಗಬೇಕು. ಆದರೆ ನಿರಂಕುಶವಾದಿ

ರಾಜಕೀಯ ಸಂಚಿನಿಂದಾಗಿ ಮುಖ್ಯಮಂತ್ರಿ ಜೈಲಲ್ಲಿದ್ದಾರೆ : ಹೈಕೋರ್ಟ್ 3 ಪಿಐಎಲ್ ವಜಾ ಮಾಡಿದೆ- ಆಮ್ ಆದ್ಮಿ ಪಕ್ಷ

ದಿಲ್ಲಿಯ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರೀವಾಲ್ ಮುಂದುವರಿಯಲಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹೇಳಿದರು. ಅರವಿಂದ ಕೇಜ್ರೀವಾಲ್ ಅವರು ಮೌಲ್ಯದ ಪ್ರಶ್ನೆ ಬಂದಾಗ ಹತ್ತು ವರುಷದ ಹಿಂದೆ 49 ದಿನಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಿಜೆಪಿಯ ರಾಜಕೀಯ ಸಂಚಿನ ಫಲವಾಗಿ ಕೇಜ್ರೀವಾಲ್ ಜೈಲಿನಲ್ಲಿ ಇದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದರು. ಮುಖ್ಯಮಂತ್ರಿ ಉತ್ಸವ ಮೂರ್ತಿ ಅಲ್ಲ, ದೀರ್ಘ ಕಾಲ ಅಜ್ಞಾತದಲ್ಲಿ ಇರಬಾರದು ಎಂಬ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ: ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು 2023ರ ಸೆ. 13ರಂದೇ ಘೋಷಿಸಲಾಗಿದೆ. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ  35,162 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ಪರಿಹಾರ

ಕೆ.ಎಸ್. ಈಶ್ವರಪ್ಪ ಅವರಿಗೆ ನೀಡಿದ ಬೆಂಬಲ ವಾಪಾಸ್: ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದು ನಮ್ಮ ಗುರಿ: ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿಕೆ

ಬೈಂದೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ, ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ಅರಿವೆ ಬಂದಿದೆ. ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ ಎಂದು ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿದರು. ಅವರು ಬೈಂದೂರು ಬಿಜೆಪಿ ಕಚೇರಿಯಲ್ಲಿ

ಚುನಾವಣಾ ಆಯೋಗದ ನಿಯಮ ಮೀರಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ : ಜುಬಿನ್

ಪುತ್ತೂರು: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟೆಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆ ಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು ಸಹಾಯಕ ಆಯುಕ್ತರೂ, ಸಹಾಯಕ ಚುನಾವಣಾ ಅಧಿಕಾರಿಗಳೂ ಆಗಿರುವ ಜುಬಿನ್ ಮೊಹಾಪಾತ್ರ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, ಮತಗಟ್ಟೆಯ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ

ಉಡುಪಿ ಚಿಕ್ಕಮಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ : ಕಾರ್ಕಳದಲ್ಲಿ ಸಿದ್ಧತೆ

ಕಾರ್ಕಳ: ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿದೆ. ಕಾರ್ಕಳದಲ್ಲಿ ಒಟ್ಟು 209 ಮತಗಟ್ಟೆಗಳಿದ್ದು, 1000 ಚುನಾವಣಾ ಅಧಿಕಾರಿಗಳು ನಿಯುಕ್ತಿಗೊಂಡಿದ್ದಾರೆ. 587 ಸಹಾಯಕರಿದ್ದು 57 ಬಸ್‌ಗಳು 21 ಸೆಕ್ಟರ್ ಅಧಿಕಾರಿಗಳಿದ್ದು ಕಾರ್ಕಳ ಎಂಪಿಎಂ ಕಾಲೇಜಿನಲ್ಲಿ ಸಿದ್ಧತೆಗಳು ನಡೆದು ಪೂರ್ಣಗೊಂಡಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದರು.

ನರೇಂದ್ರ ಮೋದಿ ಒಬ್ಬ ಹಿಟ್ಲರ್: ವೀರಪ್ಪ ಮೊಯ್ಲಿ

ಕೇಂದ್ರದಲ್ಲಿ ಹಿಟ್ಲರ್ ಸರ್ಕಾರವಿದೆ. ನರೇಂದ್ರ ಮೋದಿ ಒಬ್ಬ ಹಿಟ್ಲರ್, ಅವರ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಸಿಎಂ,ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಅವರು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮೀನುಗಾರರಿಗೆ ಯಾವ ಸೌಕರ್ಯಗಳನ್ನು ಕೂಡ ಬಿಜೆಪಿ ಸರ್ಕಾರ ಕಲ್ಪಿಸಿಲ್ಲ. ಮಂಗಳೂರಿನ ಅಳಿವೆ ಬಂದರಿನಲ್ಲಿ ಹೂಳೆತ್ತುವ ಕಾರ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ಉಡುಪಿ,