ಉಡುಪಿ : ರಾಜ್ಯದಾದ್ಯಂತ ಕಾಂಗ್ರೆಸ್ ನ ಭರವಸೆ ನೀಡಿದ ಗ್ಯಾರಂಟಿ ಗಳು ಒಂದೊಂದೆ ಜಾರಿ ಆಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ನಿನ್ನೆಯಷ್ಟೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ರಾಜ್ಯದಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಿದ್ದರು. ಆದರೆ ರಾಜ್ಯದಲ್ಲಿ ಸರಕಾರಿ ಬಸ್ ಮಾತ್ರ ಅಲ್ಲ, ಖಾಸಗಿ ಬಸ್ ಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ
ಉಡುಪಿ : ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಸರಕಾರ ನೀಡಿದ 5 ಗ್ಯಾರಂಟಿಗಳ ಪ್ರಣಾಳಿಕೆ ಕುರಿತು ಉಡುಪಿ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ನೀಡಿರುವ ಹೇಳಿಕೆ ಚುನಾವಣಾ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಬಹಳ ಸದ್ದು ಮಾಡಿತ್ತು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಐದು ಗ್ಯಾರಂಟಿಗಳ ಪೂರೈಕೆ ಮಾಡಿದರೆ ನಾನು ಕೆಪಿಸಿಸಿ ಕಚೇರಿ ಎದುರು ತಲೆ ಬೋಳಿಸಿ ಕೂತುಕೊಳ್ಳಲು ಸಿದ್ದನಿದ್ದೇನೆ ಎಂದು ಚುನಾವಣಾ ಸಂದರ್ಭದಲ್ಲಿ ಕುಯಿಲಾಡಿ ಸುರೇಶ್
ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟೀ ಗೆ ನೂತನ ಸಾರಿಗೆ ಸಚಿವರಾದ ಡಾ. ರಾಮಲಿಂಗಾರೆಡ್ಡಿ ತೆರೆ ಎಳೆದಿದ್ದಾರೆ. ಮೇ 30 ರಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ಮಹಿಳೆಯರು ಯಾವುದೇ ಷರತ್ತುಗಳಿಲ್ಲದೆ ಪ್ರಯಾಣಿಸಬಹುದು ಎಂದು ತಿಳಿಸಿದರು. ಆದರೆ ಈ ಗ್ಯಾರಂಟೀ ರಾಜ್ಯಾದ್ಯಂತ ಯಾವಾಗಿನಿಂದ ಜಾರಿಯಾಗಲಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್
ಪತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ಕೊಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಇನ್ನು ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ
ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಕಾಂಗ್ರೆಸ್‍ನ ಹೀನಾ ರಾಜಕಾರಣ ಮತ್ತು
ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿ.ಕೆ ಶಿವಕುಮಾರ್ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಮಾಜಿ ಸಚಿವ ಕೋಟ
ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದಲ್ಲಿ ಬಿಲ್ಲವ ಸಮುದಾಯದ ಕನಿಷ್ಠ ಎರಡು ಮಂದಿಗೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ಬರು ವಿಧಾನಪರಿಷತ್ ಸದಸ್ಯರನ್ನು ಒಳಗೊಂಡು ಐದು ಜನ ಶಾಸಕರನ್ನು ಹೊಂದಿರುವ ನಮ್ಮ ಸಮಾಜಕ್ಕೆ ಎರಡು ಮಂತ್ರಿಸ್ಥಾನವನ್ನು ನೀಡಬೇಕು. ಅದೇ ರೀತಿ ನೂತನ
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ.
ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ. ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ. ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಿಗೊಳಿಸಲು ಹೋರಾಡ್ತಾ ಇದ್ದಾರೆ.



























