ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ
ಬಂಟ್ವಾಳ: ನನ್ನ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ದುಡಿದಿರುವುದೇ ನನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ. ಕಳೆದ ಐದು ವರ್ಷದ ಅಧಕಾರವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯ ಹಾಗೂ ಈ ಭಾಗದಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಂತಿರುವುದರಿಂದ ಜನರು ಒಲವು ತೋರಿಸಿ ಗೆಲುವು ತಂದು ಕೊಟ್ಟಿದ್ದಾರೆ ಎಂದು ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಹೇಳಿದರು. ಅವರು ಬಿ.ಸಿ.ರೋಡಿನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ
ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟೆ ಹೊಳೆಯವರು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು ತೆರೆದ ವಾಹನದಲ್ಲಿ ಸಂಚರಿಸಿದ ಅವರು ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಧನ್ಯವಾದ ಸಮರ್ಪಿಸಿದರು ಅಲ್ಲದೆ ಕಾರ್ಯಕರ್ತರು ಅತ್ಯಂತ ಸಂಭ್ರಮದಿಂದ ಅವರ ಗೆಲುವನ್ನು ಸ್ವಾಗತಿಸಿ ಪಟಾಕಿ ಸಿಡಿಸಿದರು. ಈ ವೇಳೆ ಮಾತನಾಡಿದ ಗುರುರಾಜ ಗಂಟೆ ಹೊಳೆಯವರು ಇದು ಯಾರೋ ಒಬ್ಬರ ಗೆಲುವಲ್ಲ ಸಂಪೂರ್ಣ ಕಾರ್ಯಕರ್ತರ ಗೆಲುವು ನಾವು ಕಾಣದೆ ಇರುವ
ಸಕಲೇಶಪುರ : ಧರ್ಮಸ್ಥಳದಲ್ಲಿ ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ಪ್ರಸಂಗ ನಡೆಯಿತು .ರೋಹಿತ್ ಎಂಬ ವರ ಸಕಲೇಶಪುರ ಶಾಪ್ ಸಿದ್ದೇಗೌಡ ಶಾಲೆಯಲ್ಲಿ ಮತ ಚಲಾಯಿಸಿದರೆ, ನಂದಿನಿ ಎಂಬ ವದು ಕುಡುಗರಹಳ್ಳಿಯಲ್ಲಿರುವ ಮತಗಟ್ಟೆಗೆ ಹೋಗಿ ತಮ್ಮ ಹಕ್ಕು ಚಲಾಯಿಸಿದರು.
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.
ಕೋಡಿಂಬಾಡಿಯ ಮತದಾನ ಕೇಂದ್ರದಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಮತ ಚಲಾವಣೆ.
ಬೈಂದೂರು: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.ಚುನಾವಣೆಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ಗುರುರಾಜ್ ಗಂಟಿಹೊಳೆಯವರು ಬುಧವಾರ ಬೆಳಗ್ಗೆ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುವ ಮೂಲಕ ಪ್ರಾಥಮಿಕ ಕರ್ತವ್ಯವನ್ನು ನೆರವೇರಿಸಿದರು.ಸಾಮಾನ್ಯರಲ್ಲಿ ಸಾಮಾನ್ಯರಂತೆ ಬಂದು ಮತ ಚಲಾಯಿಸಿ, ಅನಂತರ ಕೈ ಬೆರಳಿನ
ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಬೆಳ್ಳಗ್ಗೆ ತನ್ನ ಪತ್ನಿ ಹಾಗೂ ಸಹೋದರಿ ಜೊತೆಗೆ ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಂಬರ್ 97 ರಲ್ಲಿ ಮತ ಚಾಲಾಯಿಸಿದ್ದಾರೆ.
ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು. ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಯಾವುದೇ ಆಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಪದವಿ ಪೂರ್ವ
ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯ ವರೆಗೆ 37,777 ಸ್ಥಳಗಳಲ್ಲಿ ಒಟ್ಟು 58,545 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಕೆಲವು ಮತಗಟ್ಟೆಗಳ ಮುಂದೆ ಬೆಳಗ್ಗೆಯೇ ಮತದಾರರು ಸಾಲುಗಟ್ಟಿರುವುದು ಕಂಡು ಬಂದಿದ್ದು, ಈ ಬಾರಿಯ ಮಾದರಿ ಮತಗಟ್ಟೆಗಳು ಮತದಾರರನ್ನು ಕೈಬೀಸಿ ಸೆಳೆಯುವಂತಿದೆ. ಇನ್ನು ರಾಜ್ಯದ ಒಟ್ಟು



























