ಯಾವುದೇ ಒಂದು ಎಂಜಿನ್‍ಗೆ ಸಾಮಥ್ರ್ಯ ಇಲ್ಲದಿದ್ದರೆ ಅಥವಾ ಒಂದು ಎಂಜಿನ್ ದುರ್ಬಲವಾಗಿದ್ದರೆ ಮಾತ್ರ ಡಬಲ್ ಎಂಜಿನ್ ಬಳಕೆ ಆಗುತ್ತದೆ. ಆದರೆ ಬಿಜೆಪಿಯವರು ಡಬಲ್ ಎಂಜಿನ್ ಸರ್ಕಾರ ಬೇಕು ಎಂದು ಪ್ರಚಾರ ಮಾಡುತ್ತಿದ್ದಾರೆ. ಹಾಗಾದರೆ ಬಿಜೆಪಿ ಇರುವ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿದ್ದು, ಡಬಲ್ ಎಂಜಿನ್ ಸರ್ಕಾರ ಯಾಕೆ ವೈಫಲ್ಯವಾಯಿತು ಎಂದು
ಕಳೆದ ಐದು ವರ್ಷಗಳ ಅವಧಿಯಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಸುಮಾರು 28 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಅನುದಾನ ಹರಿದು ಬಂದಿದ್ದು, ಮಂಗಳೂರು ನಗರದ ದಕ್ಷಿಣದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಕಟಿಬದ್ಧರಾಗಿ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಗಣೇಶ್ ಶೆಟ್ಟಿ ಹೇಳಿದರು. ಅವರು ನಗರದ ಓಶಿಯನ್ ಪರ್ಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೇದವ್ಯಾಸ
ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾರವರು ಇಂದು ಉಪ್ಪಿನಂಗಡಿ ಪೇಟೆ, ಶಾಂತಿನಗರ,ಸತ್ತಿಕಲ್ಲು, ಪೆರ್ನೆ, ಹಿರೇಬಂಡಾಡಿ, ಅಡೆಕಲ್, ಪೆರಿಯಡ್ಕದಲ್ಲಿ ಸಾರ್ವಜನಿಕ ಭಾಷಣ ನಡೆಸಿ ಭರ್ಜರಿ ಮತ ಪ್ರಚಾರ ನಡೆಸಿದರು. ಪುತ್ತೂರು ತಾಲೂಕಿನಲ್ಲಿ ಉಪ್ಪಿನಂಗಡಿ ಪಟ್ಟಣವು ಅತೀ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ಅಂತೆಯೇ ವ್ಯಾಪಾರ ವ್ಯವಹಾರದಲ್ಲಿ ಕೇಂದ್ರ ಬಿಂದು ಆಗಿರುವ ಪಟ್ಟಣ ಆದರೆ ಇಲ್ಲಿಗೆ ಯಾವುದೇ ಮೂಲಭೂತ ಸೌಕರ್ಯಗಳು ತಲುಪಿಲ್ಲ ಮುಖ್ಯ ಬಸ್ ನಿಲ್ದಾಣದಲ್ಲಿ ಒಂದು
ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 4 ದಿನ ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರವಾಗಿ ಇಂದು ಈಶ್ವರ ಮಂಗಲದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಾಯಿತು.ಈ ವೇಳೆ ಮುರಳೀಧರ ರೈ ಮಠಂತಬೆಟ್ಟು, ಅಬ್ದುಲ್ ರಹಮಾನ್ ಹಾಜಿ, ಎಂ ಬಿ ವಿಶ್ವನಾಥ ರೈ, ಮಹಮ್ಮದ್ ಬಡಗನ್ನೂರು, ಶ್ರೀ ಪ್ರಸಾದ್ ಪಾಣಾಜೆ, ಕಾವು ಹೇಮನಾಥ ಶೆಟ್ಟಿ, ಕೃಷ್ಣ
ಮೂಡುಬಿದಿರೆ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ನೀಡಿದ್ದು ಊರಿನ ಪ್ರಗತಿಗಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಜಾತಿಮತ ಬೇಧವಿಲ್ಲದೆ ಸ್ಪಂದಿಸಿದ್ದಾರೆ. ಈಗ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಯಾರೂ ಕಿವಿಗೊಡದೆ ಆತ್ಮಸಾಕ್ಷಿಯಾಗಿ ಮತಚಲಾಯಿಸಬೇಕು ಎಂದು ಹುನುಮಂತ, ವೆಂಕಟರಮಣ ದೇವಳಗಳ ಆಡಳಿತ ಮೊಕ್ತೇಸರ ಜಿ ಉಮೇಶ್ ಪೈ ಹೇಳಿದರು.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೆÇೀರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮಾತನಾಡಿದ ವೇದವ್ಯಾಸ ಕಾಮತ್ ಅವರು, ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ ಕಲ್ಪನೆಯ ದಿಕ್ಕಿನೆಡೆಗೆ ರಾಜ್ಯವನ್ನು ಕೊಂಡೊಯ್ಯುವುದು
ಕಾರ್ಕಳ : ಕಾರ್ಕಳದ ಇತಿಹಾಸ ಪ್ರಸಿದ್ಧ ಕೋಟೆ ಮಾರಿಯಮ್ಮ ದೇವಸ್ಥಾನದ ಒಳಗೆ ಬಾವಿಯನ್ನು ತೋಡಲು ರಫೀಕ್ ಎನ್ನುವ ಹಿಂದೂಯೇತರರಿಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಚಿವ ಸುನೀಲ್ ಕುಮಾರ್ ಅವರು ಬಾವಿ ನಿರ್ಮಾಣ ಮಾಡಿಸಲು ಅವಕಾಶ ಕಲ್ಪಿಸಿದ್ದಾರೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ . ಅವರು ಕಾರ್ಕಳ ಪರಪ್ಪು ಸಮೀಪದ ಪಾಂಚಜನ್ಯಾ ತಮ್ಮ ಚುನಾವಣಾ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಫೀಕ್ ಗೋ
ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಕಾಲ್ನಡಿಗೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಮತಯಾಚನೆ ನಡೆಸಿದರು. ಬಳಿಕ ಮಾತನಾಡಿದ ಅವರು ಗೌರವಯುತವಾದ ಮತ್ತು ಶಾಂತಿಯುತ ಬದುಕಿಗಾಗಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ 2 ಸಾವಿರಕ್ಕಿಂತಲೂ ಅಧಿಕ ಅನುದಾನದ ಮೂಲಕ ಸರ್ವ ವ್ಯಾಪಿ ಮತ್ತು
ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು. ಮಾಣಿಲ ಗ್ರಾಮದ ವಿವಿಧ ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿಯ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಅಶೋಕ್ ರೈ ಬಳಿ ಹೇಳಿಕೊಂಡರು. ಕಳೆದ ಹಲವು ವರ್ಷಗಳಿಂದ ನಾವು ಮನೆ ಮಾಡಿಕೊಂಡಿದ್ದು
ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ವೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.ಬಳಿಕ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗುವ ನಿಟ್ಟಿನಲ್ಲಿ ನನಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ರು. ಈ ವೇಳೆ ಕಾರ್ಯಕರ್ತರು ಸುರೇಶ್ ಶೆಟ್ಟಿ ಜೊತೆಗಿದ್ದರು. ಇದಕ್ಕೂ ಅವರು ಮೊದಲು ಎರ್ಮಾಳ್ ಪರಿಸರ



























