ಪುತ್ತೂರು: ಪಡಿತರ ವಿತರಣೆಯಲ್ಲಿ ಇದುವರೆಗೆ ಬೆಳ್ತಿಗೆ ಮತ್ತು ಬಿಳಿ ಅಕ್ಕಿಯನ್ನು ನೀಡಲಾಗುತ್ತಿದೆ. ಕರಾವಳಿ ಭಾಗದ ಜನ ಕುಚ್ಚಲಕ್ಕಿ ಅನ್ನ ಊಟ ಮಾಡುವ ಕಾರಣ ಈ ಭಾಗಕ್ಕೆ ರೇಶನ್ ಮೂಲಕ ಕುಚ್ಚಲಕ್ಕಿ ನೀಡಬೇಕು ಎಂಬ ಬೇಡಿಕೆ ಇದ್ದು ಈ ಬೇಡಿಕೆಯನ್ನು ಈಬಾರಿ ಕಾಂಗ್ರೆಸ್ ಈಡೇರಿಸಲಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರವಸೆ ನೀಡಿದ್ದಾರೆ. ವಿಟ್ಲ
ಬೈಂದೂರು: ಜಿಲ್ಲೆಯಲ್ಲಿ ನಾಲ್ಕು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ ಪಕ್ಷ ತನ್ನ ಹೊಸ ಪ್ರಯೋಗದಲ್ಲಿ ಖಂಡಿತ ಯಶಸ್ಸು ಸಾಧಿಸಲಿದೆ. ಮಾತ್ರವಲ್ಲ ರಾಜ್ಯದಲ್ಲಿಯೂ ಬಿಜೆಪಿ ಪ್ರಚಂಡ ಗೆಲುವು ದೊರೆಯಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮದ್ವರಾಜ್ ಹೇಳಿದರು. ಅವರು ಮಂಗಳವಾರ ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬೈಂದೂರು ಬಿಜೆಪಿ ಅಭ್ಯರ್ಥಿಯ ಬಗ್ಗೆ ಕಾರ್ಯಕರ್ತರು ಹಾಗೂ ಜನರಲ್ಲಿ ಉತ್ತಮ
ಸುರತ್ಕಲ್: “ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಪಡೆಯಲಿದೆ. ಇನಾಯತ್ ಅಲಿ ಅವರಂತಹ ಸಮರ್ಥ ಅಭ್ಯರ್ಥಿಯನ್ನು ಪಕ್ಷವು ಕಣಕ್ಕಿಳಿಸಿದೆ. ಮತದಾರ ಬಾಂಧವರು ಜಾತಿ ಮತ ಬೇಧ ಮರೆತು ಎಲ್ಲರನ್ನೂ ಸಮಾನವಾಗಿ ಕಾಣುವ ಇನಾಯತ್ ಅಲಿ ಅವರನ್ನು ಬೆಂಬಲಿಸಿ” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದರು. ಅವರು ಸುರತ್ಕಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿಯವರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತಾಡಿದರು.
ಭಜರಂಗದಳ ನಿಷೇಧ ಬಿಡಿ, ಯಾವ ಒಬ್ಬ ಕಾರ್ಯಕರ್ತನಿಗೆ ತೊಂದರೆಯಾಗಲು ನಾವು ಬಿಡುವುದಿಲ್ಲ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ.ಪುತ್ತೂರು : ಚುನಾವಣೆಯ ಹೊಸ್ತಿಲಿನಲ್ಲಿಯೇ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಪ್ರಣಾಳಿಕೆ ಕೆಲವು ವಿಚಾರವು ಕಿಚ್ಚು ಹಚ್ಚಿದೆ.ಈ ಬಗ್ಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಪ್ರತಿಕ್ರಿಯಿಸಿದ್ದು, `ಕಾಂಗ್ರೆಸ್
ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ. ಮಾತ್ರವಲ್ಲ ಈಗಿನ ಅಳಿದುಳಿದ ನಿಮ್ಮ ಕಾಂಗ್ರೆಸ್ ಪಕ್ಷದ ಕುರುಹನ್ನು ಜನರೇ ಸಮೀಪದ ಅರಬೀ ಸಮುದ್ರದಲ್ಲಿ ವಿಸರ್ಜಿಸಲಿದ್ದಾರೆ. ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ,ಹಾಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ದೇಶ ಭಕ್ತ ,ಹಿಂದೂ ಸಮಾಜದ ಒಳಿತಿಗಾಗಿ ಹಾಗೂ ಸಾಮಾಜಿಕವಾಗಿ
ಮಂಗಳೂರು: ಸುಸ್ಥಿರ, ಸುವ್ಯವಸ್ಥಿತ ಮತ್ತು ಸಮನ್ವಯದ ಅಭಿವೃದ್ಧಿ ಕಾರ್ಯಗಳಿಗಾಗಿ ಕರ್ನಾಟಕದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರಕಾರವನ್ನು ಪುನರಾಯ್ಕೆ ಮಾಡುವುದು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೋಪಾಲಕೃಷ್ಣ ಅಗರ್ವಾಲ್ ಪ್ರತಿಪಾದಿಸಿದರು. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವನ್ನು 5 ಟ್ರಿಲಿಯನ್ ಡಾಲರ್ ಗಾತ್ರದ ಅರ್ಥವ್ಯವಸ್ಥೆಯನ್ನಾಗಿ ಅಭಿವೃದ್ಧಿಪಡಿಸುವ ಪ್ರಧಾನಿ ನರೇಂದ್ರ ಮೋದಿ ಅವರ
ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಬಂಟ್ವಾಳದಲ್ಲಿ ನಡೆದ ಸಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಎಡಪಂಥಿಯ ಚಿಂತನೆಗಳು ಹಾಗೂ
ಬೆಳ್ತಂಗಡಿಯಲ್ಲಿ ಈ ಬಾರಿ ಸುಮಾರು 50 ಸಾವಿರಕ್ಕೂ ಹೆಚ್ಚಿನ ಅಂತರದಲ್ಲಿ ಹರೀಶ್ ಪೂಂಜ ರವರು ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಬೂತ್ ಮಟ್ಟದಲ್ಲಿ ಕೂಡ ಜಾತಿ ಧರ್ಮ ಅನ್ನದೆ ಎಲ್ಲಾ ವರ್ಗದವರಿಗೂ ಸರಕಾರದ ಪ್ರತಿಯೊಂದು ಸವಲತ್ತುಗಳನ್ನು ತಲುಪಿಸುವ ಕಾರ್ಯ ಆಗಿದೆ,ಆದ್ದರಿಂದ ಅತ್ಯಂತ ಹೆಚ್ಚಿನ ಅಂತರದಲ್ಲಿ ಹರೀಶ್ ಪೂಂಜ ರವರು ಗೆಲ್ಲಲಿದ್ದಾರೆ.ಈ ಬಾರಿ ಬಿಜೆಪಿ
ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ಇಂದು ಭೇಟಿ ನೀಡಿದ ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಬಿರುಸಿನ ಮತಯಾಚನೆ ನಡೆಸಿ, ಗಮನ ಸೆಳೆದರು. ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಗೆ ದಿನಾಂಕ ಮೇ 1ಕ್ಕೆ ಬೆಳಗ್ಗೆ 7 ಗಂಟೆಗೆ ಭೇಟಿ ನೀಡಿದ ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ವ್ಯಾಪಾರಸ್ಥರು ಮತ್ತು ಕಾರ್ಮಿಕರ ಬೆಂಬಲಯಾಚಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಮುಖಂಡರಾದ ಅಥಾವುಲ್ಲಾ ಜೋಕಟ್ಟೆ, ನವಾಝ್ ಉಳ್ಳಾಲ, ಶಹೀದ್ ಕಿನ್ಯಾ,
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ “ಮಹಾ ಸಂಪರ್ಕ ಅಭಿಯಾನ ” ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಅವರು ಮಾತನಾಡಿ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ



























