ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಇಂದು ನಾಮಪತ್ರ ಸಲ್ಲಿಸಿದರು.ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದ ಅವರು, ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವಣ ತೀವ್ರ
ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಒಂದು ಅಭೂತಪೂರ್ವ ಕಾರ್ಯಕ್ರಮವಾಗಲಿದ್ದು, ಗ್ರಾಮ ಮಟ್ಟದಿಂದ ಸುಮಾರು 10 ರಿಂದ 15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ನಾಮಪತ್ರ ಪ್ರಕ್ರಿಯೆಗೆ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ಪಿ ಅವರು ನಾಮಪತ್ರ ಸಲ್ಲಿಸಿದರು. ಪುತ್ರೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೊಯಿಲ ಅವರು ನಾಮಪತ್ರ ಸಲ್ಲಿಸಿದರು. ಚುನಾವಣಾ ಅಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಶಿವಭಾಗ್ ವಾರ್ಡಿನ ಪದವು ಮೇಗಿನಮನೆ ಹಾಗೂ ಬಿಕರ್ನಕಟ್ಟೆ ಪರಿಸರದಲ್ಲಿ ಮತಯಾಚನೆ ನಡೆಸಿದರು. ಸಂದರ್ಭದಲ್ಲಿ ಮಾತನಾಡಿದ ವೇದವ್ಯಾಸ್ ಕಾಮತ್, ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದ ಅಭಿವೃದ್ಧಿಗಾಗಿ ಕೈಗೊಂಡ ಯೋಜನೆಗಳನ್ನು ತಿಳಿಸಿ ಮತ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಜನ್ ದಾಸ್ ಕುಡುಪು, ಕಾವ್ಯ ನಟರಾಜ್, ರಾಮಚಂದ್ರ ಚೌಟ, ಯೋಗಿಶ್ ಶೆಣೈ,
ರಾಜ್ಯ ವಿಧಾನಸಭೆ ಚುನಾವಣೆಯ ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಏ.20ರಂದು ಮಧ್ಯಾಹ್ನ 12.15ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ನಗರದ ಕಾಂಗ್ರೆಸ್‍ನ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಸಂವಿಧಾನ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಪಕ್ಷ, ಸರ್ವ ಜಾತಿ ಧರ್ಮವನ್ನು ಪ್ರೀತಿಸುವ ಪಕ್ಷವಾಗಿದೆ. ದೇಶವು ಅಭವೃದ್ಧಿ
ಕುಂದಾಪುರ: ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಭಯೋತ್ಪಾದನೆಗೆ ಬೆಂಬಲ ಕೊಟ್ಟಿರುವ ಕೇಸುಗಳಿದ್ದರೆ ತೋರಿಸಬೇಕು. ಇಲ್ಲವಾದಲ್ಲಿ ಈ ಕ್ಷೇತ್ರದ ಜನರೆದುರುವ ನೀವು ಕ್ಷಮೆ ಕೇಳಬೇಕು. ನಿಮ್ಮ ಹೇಳಿಕೆಗೆ ಕೇಸು ಹಾಕಲು ಹೋಗಲ್ಲ. ತಾಯಿ ಮೂಕಾಂಬಿಕೆ ಇದ್ದಾಳೆ. ನೀವು ಹೇಳಿರುವ ಮಾತು ಸತ್ಯವೋ, ಸುಳ್ಳೋ ಅವಳೇ ನಿರ್ಧರಿಸುತ್ತಾಳೆ. ನಿಮ್ಮ ಸುಳ್ಳುಗಳು ಇಲ್ಲಿಗೆ ಕೊನೆಯಾಗಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ
ಪುತ್ತೂರು :ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ ರಾಜಾರಾಮ್,



























