Home Archive by category ರಾಜಕೀಯ (Page 38)

ಕಾಪುವಿನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಉದ್ಘಾಟನೆ

ಕಾಪುವಿನ ಹೃದಯ ಭಾಗದಲ್ಲಿರುವ ಮಹಾಬಲ ಮಾರ್ಲ್ ಖಾಸಗಿ ಕಟ್ಟಡದಲ್ಲಿ ಜೆಡಿಯಸ್ ಪಕ್ಷದ ಚುನಾವಣಾ ಕಛೇರಿಯನ್ನು ಜಿಲ್ಲಾ ಅಧ್ಯಕ್ಷ ಯೋಗೀಶ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ ಪಕ್ಷ ಈ ಬಾರಿ ಒರ್ವ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸುತ್ತಿರುವ ಸಮರ್ಥ ಅಭ್ಯರ್ಥಿ ಸಬೀನ ಸಮದ್ ರವರನ್ನು ಕಣಕಿಳಿಸಿದ್ದು, ಅವರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ.

ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು : ಮೂಲ್ಕಿ-ಮೂಡುಬಿದರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ. ಅಮರಶ್ರೀ ಹೇಳಿಕೆ

ಮೂಡುಬಿದಿರೆ: ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಅಭಿವೃದ್ಧಿಯಾಗದಿರುವ ಹಲವಾರು ಯೋಜನೆಗಳಿವೆ. ಶುದ್ಧ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ, ವಸತಿ, ಆರೋಗ್ಯ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಪರಿಹಾರ ಕಾಣದೆ ಹಾಗೇ ಉಳಿದುಕೊಂಡಿದೆ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚಿನ ಒತ್ತನ್ನು ನೀಡುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ ಡಾ.ಅಮರಶ್ರೀ

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ : ಮನೆ ಮನೆಗೆ ತೆರಳಿ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ನವಗಳಿಂದ ಮಂಗಳೂರು ನಗರ ದಕ್ಷಿಣದಲ್ಲಿ ಅಭಿವೃದ್ಧಿ, ಜನಪರ ಕಾರ್ಯಗಳು ಹಾಗೂ ನಿರಂತರವಾಗಿ ಕ್ಷೇತ್ರದ ಜನರೊಂದಿಗೆ ಬೆರೆತಿದ್ದೇನೆ ಎಂದು ಹೇಳಿದರು. ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಮಾಹಿತಿ ಮನೆ ಮನೆಗೆ

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ, ಕಾಲ್ ಸೆಂಟರ್ ಉದ್ಘಾಟನೆ

ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೇ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಉದ್ಘಾಟಿಸಲಾಯಿತು. ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಲಾಲಾಜಿ ಮೆಂಡನ್ ಅವರು ಮಾಧ್ಯಮ ಕೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ

ಮೂಡುಬಿದರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ: ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಎ. ಕೋಟ್ಯಾನ್ ಅವರು ಸಹಸ್ರಾರು ಸಂಖ್ಯೆಯ ಕೇಸರಿಪಡೆಯೊಂದಿಗೆ ಮೆರವಣಿಗೆಯಲ್ಲಿ ಆಡಳಿತ ಸೌಧಕ್ಕೆ ಆಗಮಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಕಳೆದ ಐದು ವರ್ಷಗಳಲ್ಲಿ ಎರಡು ವರ್ಷ ಕೊರೋನಾದಿಂದಾಗಿ ಸಮಸ್ಯೆಯಾಗಿತ್ತು. ಆದರೆ ಮೂರು ವರ್ಷಗಳಲ್ಲಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ತರುವ ಮೂಲಕ ಅಭಿವೃದ್ಧಿ ಪಡಿಸಲಾಗಿದೆ.

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ಮೀಸಲು ಕ್ಷೇತ್ರದಿಂದ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲಿದರು. ಇಂದು ಬೆಳಗ್ಗೆ 11:35 ರ ವೇಳೆಗೆ ಪಕ್ಷದ ಹಿರಿಯ ನಾಯಕರ ಜೊತೆ ಆಗಮಿಸಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಲಿದ್ದರು. ನಾಮಪತ್ರ ಸಲ್ಲಿಕೆಯ ಮೊದಲು ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಅದ್ದೂರಿ ಮೆರವಣಿಗೆ ನಡೆಯಿತು. ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದ ಬಳಿಯಿಂದ ಮೆರವಣಿಗೆ ನಗರದ ಬೀದಿಯಲ್ಲಿ ಸಾಗಿ ಬಂದಿತು. ಶ್ರೀರಾಮ ಪೇಟೆಯಿಂದ

ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ

ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ಅವರಿಗೆ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ. ಶಹೀದ್ ಮೊದಲಾದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ

ಶ್ರವಣಬೆಳಗೊಳ : ಜೆಡಿಎಸ್ ಅಭ್ಯರ್ಥಿ ಸಿ.ಎನ್. ಬಾಲಕೃಷ್ಣ ನಾಮಪತ್ರ ಸಲ್ಲಿಕೆ

ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ನಾಮಪತ್ರ ಸಲ್ಲಿಸಿದರು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ಅವರು ಸಹಸ್ರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಮಖಾನ್ ಬಳಿಯ ಕೆಂಪೇಗೌಡ ಸರ್ಕಲ್ ನಿಂದ ಹೊರಟು ಹೊಸ ಬಸ್ ನಿಲ್ದಾಣ, ನವೋದಯ ವೃತ್ತ, ಕೆ.ಆರ್ ಸರ್ಕಲ್ ಮಾರ್ಗವಾಗಿ ರೋಡ್ ಶೋ ಮಾಡುವ ಮೂಲಕ ಆಂಜನೇಯ ದೇವಸ್ಥಾನ ಮುಂಭಾಗ

ಉಳ್ಳಾಲದಲ್ಲಿ ತಾರತಮ್ಯ ದೂರವಾಗಿಸಲು ಬಿಜೆಪಿ ಗೆಲುವು ಅನಿವಾರ್ಯ : ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸತೀಶ್ ಕುಂಪಲ ಹೇಳಿಕೆ

ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ