ಮಂಗಳೂರು ವಿಧಾನಸಭಾ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ಅವರು ನಾಮಪತ್ರ ಸಲ್ಲಿಸಿದರು. ಅವರು ತೊಕ್ಕೊಟ್ಟುವಿನ ಮೈದಾನದಲ್ಲಿ ಜರಗಿದ ಎಸ್‍ಡಿಪಿಐ ಮಂಗಳೂರು ವಿಧಾಸನಭಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಪ್ರಯುಕ್ತ ಹಮ್ಮಿಕೊಳ್ಳಲಾದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಸರಳ ವ್ಯಕ್ತಿತ್ವ, ಸ್ಟೀಲ್ ಲೋಟದಲ್ಲಿ
ಬೈಂದೂರು: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶದ ಮೂಲಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೈಂದೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಸೋಮವಾರ ಬಿಜೆಪಿ ಕಛೇರಿಯಲ್ಲಿ ನಡೆದ
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿ ಸೋಮವಾರ ದರ್ಬೆ ರೈ ಎಸ್ಟೇಟ್ ಬಿಲ್ಡಿಂಗ್ ನಲ್ಲಿ ಉದ್ಘಾಟನೆಗೊಂಡಿತು. ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂಎಸ್ ಮುಹಮ್ಮದ್, ಚಂದ್ರಹಾಸ ಶೆಟ್ಟಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ ರಾಜಾರಾಂ , ಪುತ್ತೂರು ಬ್ಲಾಕ್ ಕಾಂಗ್ರೆಸ್
ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರತಿ ಮುರುಳ್ಯರಿಂದ ಬಿರುಸಿನ ಪ್ರಚಾರ ಅಜ್ಜಾರವರ ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ಗೆ ಭಾಜಪಾ ಸುಳ್ಯ ವತಿಯಿಂದ ಮತಪ್ರಚಾರ ನಡೆಸಲಾಯಿತು.ಕಾರ್ಯಕರ್ತರನ್ನು ಉದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಭಾರತವನ್ನು ಪರಮ ವೈಭವದಲ್ಲಿ ಕಾಣುವುದಕ್ಕಾಗಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ, ನಮ್ಮದು ಕಾರ್ಯಕರ್ತರ ಪಕ್ಷ ನಮ್ಮ ಕಾರ್ಯಕರ್ತರಿಗೆ ಪಕ್ಷ ಮುಖ್ಯ ವ್ಯಕ್ತಿ ಅಲ್ಲಾ ಎಂದು ತೋರಿಸಿಕೊಟ್ಟ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರ ಚುನಾವಣಾ ಕಚೇರಿಯಯು ಸರ್ವಧರ್ಮದ ಮುಖಂಡರಿಂದ ಉದ್ಘಾಟನೆಗೊಂಡಿತ್ತು, ನಗರದ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೇಟ್ ಸಂಕೀರ್ಣದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆಗೊಂಡಿತ್ತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು, ಮುಂದಿನ ದಿನಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಸರ್ಕಾರ ರಚನೆಗೆ ನಿಮ್ಮೆಲ್ಲರ ಸಹಕಾರ
ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಶಾಸಕ ಹರೀಶ್ ಪೂಂಜರವರು ಇಂದು ಬೆಳ್ತಂಗಡಿ ಚುನಾವಣಾ ಅಧಿಕಾರಿ ಯೋಗೇಶ್.ಹೆಚ್.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮತ್ತು ಹಿರಿಯ ಮುಂದಾಳು ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತಿಯಲ್ಲಿ ಮೆರವಣಿಗೆಯಲ್ಲಿ ಬಂದು
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು
ಬಿಜೆಪಿಯ ಮೂರು ದಶಕಗಳ ನಂಟನ್ನು ಕಡಿದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕೈ ಪಾಳಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸೋಮವಾರ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಿರಿಯ ಮುಖಂಡರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಜಗದೀಶ್ ಶೆಟ್ಟರ್ ಅವರು ತಾನು ಬಿಜೆಪಿಯಿಂದ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತೀವ್ರ ನೊಂದಿದ್ದ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಭಾನುವಾರ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ತಮ್ಮ ಮೂರು ದಶಕಗಳ ಬಿಜೆಪಿಯೊಂದಿಗಿನ ಸಂಬಂಧಕ್ಕೆ ಜಗದೀಶ್ ಶೆಟ್ಟರ್ ವಿದಾಯ ಹಾಡಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ
ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು. ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ ದೇವಸ್ಥಾನದಿಂದ



























