ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು. ಸುದ್ದಿಗೋಷ್ಟಿಯಲ್ಲಿ
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರಾಜ್ಯ ಬಜೆಟ್ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಆರೋಗ್ಯದಲ್ಲಿ ಪರಿವರ್ತನೆ ತರೋ ಕೆಲಸ ಸರ್ಕಾರ ಮಾಡಿದೆ. ಕೃಷಿಕರು, ಮಹಿಳೆಯರು, ಮತ್ತು ಯುವಕರ ಪರವಾದ ಬಜೆಟ್ಈಗ ಮೂರು ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡನೆಯಾಗಿದೆ. ಇದು ಕೃಷಿಕನ ಕನಸಿನ ಬಜೆಟ್,
ಮೂಡುಬಿದಿರೆ: ಉನ್ನತ ಶಿಕ್ಷಣ ಸಚಿವ ಡಾ.ಸಿ ಅಶ್ವತ್ಥನಾರಾಯಣ ಅವರು ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಟಿಪ್ಪುಸುಲ್ತಾನನ್ನು ಹೊಡೆದು ಹಾಕಿದಂತೆ ಹೊಡೆದು ಹಾಕಬೇಕು ಎಂದಿರುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮತ್ತು ರಾಷ್ಟ್ರಪತಿಯವರು ಮುಖ್ಯಮಂತ್ರಿಗೆ ಸೂಚನೆ ನೀಡಬೇಕು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆಗ್ರಹಿಸಿದ್ದಾರೆ. ಗುರುವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಸ್ಥಾನವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮನವಿಯನ್ನು ಮಾಡಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷರಾದ ಲೋಕಯ್ಯ ಗೌಡ ಅವರು, ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ಕೊಡಬೇಕು. ಎರಡು
ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ರಾಜ್ಯ ಸರಕಾರದ ಪಿಡಬ್ಲ್ಯುಡಿ ಇಲಾಖೆಯ ಅನುದಾನದ ಮೂಲಕ ಉರ್ವಸ್ಟೋರ್ ಮೈದಾನದ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.
ಮಾದಕ ಪದಾರ್ಥಗಳು ವ್ಯಕ್ತಿಯ ಬಾಹ್ಯ ಮತ್ತು ಆಂತರಿಕ ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ. ಹಾಗಾಗಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜನರು ಸಹಕರಿಸಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಅವರು ಫೆ.15ರ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಅಮೃತವರ್ಷಿನಿ ಸಭಾಭವನದಲ್ಲಿ ಆಯೋಜಿಸಿದ್ದ ನವಜೀವನ ಸಮಾವೇಶ 2022-23ರಲ್ಲಿ ಭಾಗವಹಿಸಿ
ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ15ರ ಬುಧವಾರ ನವಜೀವನ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪತ್ನಿ ಅನಿತಾ ಗೆಹ್ಲೋಟ್ ಸೇರಿದಂತೆ ಮೊಮ್ಮಕ್ಕಳೊಂದಿಗೆ ಶ್ರೀ ಮಂಜುನಾಥ್ ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ಗೌರವಾನ್ವಿತ ರಾಜ್ಯಪಾಲರು ಮತ್ತು ಪತ್ನಿ ಅನಿತಾ ಗೆಹ್ಲೋಟ್ ಅವರು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ
ಸುಬ್ರಹ್ಮಣ್ಯ, ಫೆ.14: ಕರ್ನಾಟಕ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಮಂಗಳವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಶ್ರೀ ದೇವಳದಿಂದ ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಪತ್ನಿ ಸೇರಿದಂತೆ ಕುಟುಂಬ ಸಮೇತರಾಗಿ ಶ್ರೀ ದೇವಳಕ್ಕೆ ಆಗಮಿಸಿದ ರಾಜ್ಯಪಾಲರನ್ನು ಶ್ರೀ ದೇವಳದ ಗಜರಾಣಿ ಯಶಸ್ವಿ ತನ್ನ ಸೊಂಡಿಲಿನಿಂದ
ಕರಾವಳಿ ಭಾಗದಲ್ಲಿ ಫೆ.5ರಿಂದ 9ರವರೆಗೆ ಪ್ರಜಾಧ್ವನಿ ಯಾತ್ರೆ ಕೈಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು ಎಂದು ಮಾಜಿ ಸಚಿವ ಹಾಲಿ ಶಾಸಕ ಹಾಗೂ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಧ್ವನಿ ಯಾತ್ರೆ ಫೆ.5ರಂದು ಸುಳ್ಯದಿಂದ ಆರಂಭಗೊಂಡು ಫೆ.6ರಂದು ಮೂಡಬಿದಿರೆ, ಫೆ.7ರಂದು ಕಾಪು, ಫೆ.8ರಂದು ಕುಂದಾಪುರ, ಫೆ.9ರಂದು ಶೃಂಗೇರಿ ತಲುಪಲಿದೆ ಎಂದರು.
ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಸೋಮವಾರ ಕಾಶ್ಮೀರದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ ಜರಗಿತು. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಭಾರತ್ ಜೋಡೊ ಯಾತ್ರೆ 2ನೇ ಸ್ವಾತಂತ್ರ್ಯ ಸಂಗ್ರಾಮವಾಗಿದ್ದು, ಅಂದು



























