ವಿಪಕ್ಷ ನಾಯಕರಾದ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ ಸಚಿವ ಸುನೀಲ್ ಕುಮಾರ್ ಅವರು ಭ್ರಷ್ಟಾಚಾರ ದಾಖಲೆ ಬಹಿರಂಗಪಡಿಸಬೇಕು ಇಲ್ಲವೆ ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ PAYCM ಮಾದರಿಯಲ್ಲಿ SUNILPAY ಪೋಸ್ಟರ್ ಬಿಡುಗಡೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,
ಮಂಜೇಶ್ವರ: ಪಾಪ್ಯುಲರ್ ಫ್ರಂಟ್ ಮುಖಂಡರ ಬಂಧನವನ್ನು ವಿರೋಧಿಸಿ ರಾಜ್ಯ ವ್ಯಾಪಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಮಂಜೇಶ್ವರ ಭಾಗದಲ್ಲಿ ಹರತಾಳ ಬೆಂಬಲಿಗರ ಮನವಿ ಮೇರೆಗೆ ಬಹುತೇಕ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚಿ ಸಹಕರಿಸಿದ್ದಾರೆ. ಅತ್ಯವಶ್ಯಕ ಕೆಲವೊಂದು ವಾಹನಗಳು ರಸ್ತೆಗಿಳಿಯುವುದನ್ನು ಹೊರತು ಪಡಿಸಿದರೆ ಖಾಸಗಿ ಅಥವಾ ಸರಕಾರಿ ಬಸ್ಸುಗಳು
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ (ಮತಾಂತರ ನಿಷೇಧ ) ಸಂವಿಧಾನದ ಕಲಂ 25 ರ ಸ್ಪಷ್ಟ ಉಲ್ಲಂಘನೆಯಾಗಿದೆ. ಆದರೂ ಸಂವಿಧಾನ ವಿರೋಧಿಯಾಗಿರುವ ಮಸೂದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರವನ್ನು ತಕ್ಷಣ ವಜಾ ಮಾಡುವ ಅಗತ್ಯವಿದೆ ಎಂದು ಒತ್ತಾಯಿಸಿದ ಅವರು ಪರಿಶಿಷ್ಟ ಜಾತಿ/ಪಂಗಡಗಳನ್ನು ಇಂದಿಗೂ ಜಾತಿಯ ಕಾರಣಕ್ಕಾಗಿ ಹಿಂದೂ ಧರ್ಮದ ಸಂಪ್ರದಾಯ , ಆಚರಣೆ ವಿಚಾರದಲ್ಲಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಅದರ ಬಗ್ಗೆ ಯಾವುದೇ ಕಠಿಣ ಮಸೂದೆ,
ಬಂದರು ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು. ಸಾಗರ ಪ್ರವಾಸೋದ್ಯಮಕ್ಕೆ ಮಂಗಳೂರು ಬಂದರು ಅತ್ಯುತ್ತಮ ಕೊಡುಗೆಯನ್ನು ನೀಡುತ್ತಿದೆ. ಕಳೆದ ವರ್ಷದಲ್ಲಿ 15 ಸಾವಿರ ವಿದೇಶಿ ಪ್ರವಾಸಿಗರು ಮಂಗಳೂರು ಬಂದರು ಮೂಲಕ ಬಂದಿರುತ್ತಾರೆ. ಸಾಗರ ಪ್ರವಾಸೋದ್ಯಮದ ಪ್ರಯೋಜನ ಹಾಗೂ ಲಾಭವನ್ನು ಟ್ಯಾಕ್ಸಿ, ಆಟೋ ಚಾಲಕರು ಸಣ್ಣ ವ್ಯಾಪಾರಿಗಳು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದರು. ವಿಸ್ತಾರವಾದ ಕರಾವಳಿಯನ್ನು ಹೊಂದಿರುವ ನಮ್ಮ
ಪ್ರಧಾನಿ ನರೇಂದ್ರ ಮೋದಿಯವರಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಹಾಗೂ ಮತ್ಸ್ಯಾ ಸಂಪಾದನಾ ಯೋಜನೆಯ ಆಳ ಸಮುದ್ರ ಮೀನುಗಾರಿಕೆಯ ಬೋಟ್ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವೇದಿಕೆಯಲ್ಲಿ ವಿತರಿಸಿದರು.
ಬಂಗ್ರಕೂಳೂರಿನಲ್ಲಿ ಕಾಯ್ದಿರಿಸಲಾದ ಬೃಹತ್ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೊನೊವಾಲ್ ಅವರು ಮೈಸೂರು ಪೇಟ ಹಾಗೂ ರತ್ನ ಮಾಲೆ ಮತ್ತು ಉಡುಪಿ ಶ್ರೀಕೃಷ್ಣನ ಸ್ಮರಣಿಕೆ ನೀಡಿ ಸ್ವಾಗತಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು ಮಲ್ಲಿಗೆ ಮಾಲಾರ್ಪಣೆ ಮಾಡಿದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರು ಪರಶುರಾಮನ ಸ್ಮರಣಿಕೆಯನ್ನು ನೀಡಿ
ಬಹಳ ಸಮಯದ ಬಳಿಕ ಪ್ರಧಾನಿ ಕರಾವಳಿಗೆ ಬರುತ್ತಿದ್ದಾರೆ. ಸುಮಾರು 3800ಕೋಟಿಯ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇಡೀ ಕರಾವಳಿಗೆ ಅಭಿವೃದ್ಧಿಗೆ ಈ ಯೋಜನೆಗಳು ಪೂರಕ. ಉದ್ಯೋಗವಕಾಶಗಳನ್ನೂ ಇದು ನೀಡಬಲ್ಲದು. ಮೀನುಗಾರರಿಗೆ ಅನುಕೂಲ ಆಗುವ ಯೋಜನೆಗಳನ್ನು ನೀಡಲಾಗಿದೆ. ಕರಾವಳಿ ಅಭಿವೃದ್ಧಿಗೆ ಈ ಯೋಜನೆಗಳು ಪೂರಕ ಎಂದ ಸಿಎಂಮುರುಘ ಶ್ರೀಗಳ ಬಗ್ಗೆ ಮಾತಾನಾಡುವ ಪೂರಕ ಸಂದರ್ಭ ಇದಲ್ಲ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ತನಿಖೆ ನಡೆಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿಯವರ ಸಮಾವೇಶದ ತಾಣವಾಗಿರುವ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 2 ಲಕ್ಷ ಮಂದಿ ಕುಳಿತುಕೊಳ್ಳಲು ಸಾಧ್ಯವಾಗು ವಂತಹ ಶೀಟ್‍ಗಳನ್ನು ಅಳವಡಿಸಿ ಬೃಹತ್ ಚಪ್ಪರ ಹಾಕುವ ಕಾಮಗಾರಿ ಭರದಿಂದ ಸಾಗುತ್ತಿದೆ. 20 ಅಡಿ ಎತ್ತರ, 60 ಅಡಿ ಉದ್ದ ಹಾಗೂ 80 ಅಡಿ ಅಗಲದ ಸಭಾವೇದಿಕೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷರು ಹಾಗೂ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು, ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ಅವರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.ಈ ವೇಳೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೊಲೀಸ್
ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಕಾರ್ಯಕ್ರಮ ಆ.23 ರಂದು ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದು ನಾವೂರ ಗ್ರಾಮದ ಮಣ್ಣಿಹಳ್ಳ ಜಂಕ್ಷನಲ್ಲಿ ಬೆಳಿಗ್ಗೆ 9.30ಕ್ಕೆ ಪಾದಾಯಾತ್ರೆ ಪ್ರಾರಂಭಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪಾದಯಾತ್ರೆಯು ಜಕ್ರಿಬೆಟ್ಟು ಮೂಲಕ ಸಾಗಿ




























