Home Archive by category ರಾಜಕೀಯ (Page 51)

ಪ್ರವೀಣ್ ನೆಟ್ಟಾರ್ ಹತ್ಯೆ ಬಿಜೆಪಿ ಸರಕಾರದ ದುರಾಡಳಿತದ ಫಲಶ್ರುತಿ : ಮಸೂದ್, ಪ್ರವೀಣ್ ಕುಟುಂಬಗಳಿಗೆ ತಾರತಮ್ಯ ವಿಲ್ಲದೆ ಪರಿಹಾರ ಒದಗಿಸಿ : ಡಿವೈಎಫ್ಐ ಆಗ್ರಹ

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಮತೀಯವಾದಿ ನೀತಿಗಳೇ ನೇರ ಕಾರಣ. ಬಿಜೆಪಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪೂರ್ತಿ ಕುಸಿದಿದ್ದು, ಕೋಮುವಾದಿ ಸಂಘಟನೆಗಳು ಅಂಕೆ ಮೀರಿ ವರ್ತಿಸುತ್ತಿವೆ. ಬೆಳ್ಳಾರೆಯಲ್ಲಿ ನಡೆದಿರುವ ಮಸೂದ್ ಹಾಗೂ ಪ್ರವೀಣ್ ನೆಟ್ಟಾರ್ ಕೊಲೆಗಳು ಮತೀಯ ಸಂಘರ್ಷ ಭುಗಿಳೇಲುವ ಭೀತಿಗೆ

ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಸದಸ್ಯ ಪ್ರವೀಣ್ ನೆಟ್ಟಾರ್‍ಅವರ ಕೊಲೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದಂತೆ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬುಧವಾರ ಬಂದ್ ಆದವು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪ್ಪಾಡಿ, ನಿರಂತರವಾಗಿ

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ: ಆರೋಪಿಗಳ ಬಂಧನಕ್ಕೆ ಐದು ವಿಶೇಷ ತಂಡ ರಚನೆ.

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರ ತಂಡ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಗೆ ಐದು ವಿಶೇಷ ಪೋಲಿಸ್

ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ಮೃತ ದೇಹದ ಮೆರವಣಿಗೆ ಹಿನ್ನಲೆ – ಪುತ್ತೂರಿನಲ್ಲಿ ಬಿಗಿ ಬಂದೋಬಸ್ತ್.

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಗೆ ಸಂಬಂಧಿಸಿ ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ ಅಲ್ಲಿಂದ ಬೆಳ್ಳಾರೆ ಪ್ರವೀಣ್ ಅವರ ಮನೆಗೆ ಕೊಂಡೊಯ್ಯಲಾಗುವುದು. ಮೆರವಣಿಗೆ ಸಂದರ್ಭ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್ ತನ್ನ ಅಂಗಡಿಯನ್ನು ಬಂದ್ ಮಾಡುವ ವೇಳೆಗೆ ಒಂದೇ ಬೈಕ್ ನಲ್ಲಿ ಆಗಮಿಸಿದ ಮೂವರು ತಲ್ವಾರ್ ನಿಂದ ಹಲ್ಲೆ ಮಾಡಿ ಹೋಗಿದ್ದಾರೆ. ತಕ್ಷಣ ಸ್ಥಳೀಯರು ಪ್ರವೀಣ್

ಸೋನಿಯಾ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ನಿಂದ ಪ್ರತಿಭಟನೆ

ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ವಿರುದ್ಧ ಧ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್‍ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರಕಾರಿ ಕಚೇರಿಯಲ್ಲಿ ಫೋಟೋ ನಿರ್ಬಂಧ ಆದೇಶ ವಾಪಾಸು

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪುತ್ತಿಗೆ ಜಿ.ಪಂ.ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರ ಸಭೆ : ಮತ ಪರಿರ್ವತನೆಗೆ ಜನ ಸ್ಪಂದನೆ ಅಗತ್ಯ

ಮೂಡುಬಿದಿರೆ : ಇಟ್ಟಿಗೆ, ಮರಳು ಮತ್ತು ಸಿಮೆಂಟಿನಿಂದ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ. ಉನ್ನತ ಮಟ್ಟದಲ್ಲಿ ಪಕ್ಷವನ್ನು ಕಟ್ಟಲು ಮತ್ತು ಮತ ಬ್ಯಾಂಕ್ ಪರಿವರ್ತನೆಯಾಗಬೇಕಾದರೆ ಜನ ಸ್ಪಂದನೆ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಅವರು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾಜ ಮಂದಿರದಲ್ಲಿ ನಡೆದ ಪುತ್ತಿಗೆ ಜಿ.ಪಂ.ಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸರಕಾರಗಳು ಗ್ರಾ.ಪಂಗಳ ಮೂಲಕ 42 ವಿವಿಧ

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ : ಉಪ್ಪುಕಳ ಗ್ರಾಮಕ್ಕೆ ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ

ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು

ತಪ್ಪು ಮಾಹಿತಿ ನೀಡಿದ ಸಚಿವರು ಕ್ಷಮೆ ಯಾಚಿಸಬೇಕು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿಕೆ

ಹತ್ತನೆ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಕದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕೈ ಬಿಟ್ಟಿಲ್ಲ ಎಂದು ಮಾಧ್ಯಮ ಗೋಷ್ಠಿಯಲ್ಲಿ ಸುಳ್ಳು ಹೇಳಿಕೆ ನೀಡಿದ ಸಚಿವ ರಾದ ಸುನಿಲ್ ಕುಮಾರ್, ಕೋಟ ಶ್ರೀ ನಿವಾಸ ಪೂಜಾರಿ ಸಾರ್ವಜನಿಕ ರಲ್ಲಿ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಮಿಥುನ್ ರೈ ಒತ್ತಾಯಿಸಿದ್ದಾರೆ. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ