Home Archive by category ರಾಜ್ಯ

ತುಳುವಿಗೆ ಅಧಿಕೃತ ಭಾಷಾ ಸ್ಥಾನಮಾನ : ಆಂಧ್ರಕ್ಕೆ ಭೇಟಿ ನೀಡಿದ ಅಧ್ಯಯನ ತಂಡ

ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ರೂಪಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹಾಗೂ ಅನುಷ್ಠಾನದ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರ್ಕಾರವು ನೇಮಿಸಿದ್ದ ಅಧ್ಯಯನ ಸಮಿತಿಯು ಆಂಧ್ರ ಪ್ರದೇಶಕ್ಕೆ ತೆರಳಿ 2 ದಿನಗಳ ಕಾಲ ಆಂಧ್ರ ಸರಕಾರದ ವಿವಿಧ ಇಲಾಖೆಗಳ ಜೊತೆಗೆ ಮಾತುಕತೆ ನಡೆಸಿ ಮಾಹಿತಿ

ಕಾರವಾರ: ಸಬ್ ಮರೀನ್‌ನಲ್ಲಿ ರಾಷ್ಟ್ರಪತಿ ಮುರ್ಮು ಪಯಣ

ಕಾರವಾರ: ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್ ವಾಘಶೀರ್’ ಜಲಾಂತರ್ಗಾಮಿ ನೌಕೆಯಲ್ಲಿ (ಸಬ್‌ಮೆರಿನ್) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು. ಎಪಿಜೆ ಅಬ್ದುಲ್ ಕಲಾಂ ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ಸಾಧನೆ ಮಾಡಿದ ಎರಡನೇ ರಾಷ್ಟ್ರಪತಿ ಅವರಾದರು.ಗೋವಾದಿಂದ ಬೆಳಿಗ್ಗೆ 9 ಗಂಟೆ ಸುಮಾರಿಗೆ ನೌಕಾದಲದ ವಿಶೇಷ ಹೆಲಿಕಾಪ್ಟರ್‌ನಲ್ಲಿ ನೌಕಾನೆಲೆಗೆ ಬಂದಿಳಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಬರಮಾಡಿಕೊಂಡರು.ಬಳಿಕ

ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ: ಆರೋಗ್ಯ ಸೇವೆಗಳ ಆಯುಕ್ತಾಲಯದಿಂದ ಮಾರ್ಗಸೂಚಿ ಬಿಡುಗಡೆ

ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ ಆಗುತ್ತಿದ್ದು, ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇದೆ. ಹೀಗಾಗಿ ಆರೋಗ್ಯ ಸೇವೆಗಳ ಆಯುಕ್ತಾಲಯವು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಕಾಡಲಿದ್ದು, ಕೆಲವೊಮ್ಮೆ 3 ವಾರಗಳ ವರೆಗೂ ಮುಂದುವರಿಯುತ್ತದೆ. ಹೀಗಾಗಿ ಶೀತಜ್ವರ ಹರಡುವುದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ

ಎಲ್ ಕೆಜಿ, ಪಿಯುಸಿ ಮಕ್ಕಳಿಗೂ ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ: ಮಧು ಬಂಗಾರಪ್ಪ

ಅಪೌಷ್ಟಿಕತೆ ಹೋಗಲಾಡಿಸಿ ಮಕ್ಕಳ ಕಲಿಕೆಗೆ ನೆರವಾಗಲು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಹಾಗೂ ಪದವಿಪೂರ್ವ (ಪಿಯುಸಿ) ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ಓದುವ ಹಾಗೂ ಪಿಯುಸಿ ಓದುವ ಎಲ್ಲಾ ಮಕ್ಕಳಿಗೂ ನೆರವಾಗಲಿದೆ.

ಕಾರ್ಮಿಕ ವಿಮಾ ಯೋಜನೆಯ ಸೌಲಭ್ಯಗಳು ಸಿಗದ ಬಗ್ಗೆ ಸದನದ ಗಮನಕ್ಕೆ ತಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ರಾಜ್ಯದಲ್ಲಿ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪ್ರತಿ ಜಿಲ್ಲೆಯಲ್ಲಿಯೂ ಕಾರ್ಮಿಕ ರಾಜ್ಯ ವಿಮಾ ಯೋಜನೆಯ ಆಸ್ಪತ್ರೆಗಳಿದ್ದು, ಮಾರಾಣಾಂತಿಕ ಖಾಯಿಲೆಗಳಿಗೆ ಬೇಕಾದ ಔಷಧೋಪಚಾರಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿದೆಯೇ..? ಬಂದಿದ್ದಲ್ಲಿ ಕೈಗೊಂಡ ಕ್ರಮವೇನು ಹಾಗೂ ಕಳೆದ 2 ವರ್ಷಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರು ಸಹಜ ಹಾಗೂ ಕೆಲಸದ ಸ್ಥಳದಲ್ಲಿ ಮರಣ ಹೊಂದಿದ್ದಲ್ಲಿ ಅವಲಂಬಿತರಿಗೆ ಸರಕಾರ ನೀಡುಬಹುದಾದ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ- ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ

ಜೇನಿನ ಸಿಹಿಯ ಹಿಂದೆ ಶ್ರಮದ ಸವಿ: ದ.ಕನ್ನಡ, ತುಮಕೂರು ಜೇನುತುಪ್ಪದ ಸಾಧನೆ ಹಾಡಿಹೊಗಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ, ದಕ್ಷಿಣ ಕನ್ನಡ ಮತ್ತು ತುಮಕೂರು ಜಿಲ್ಲೆಗಳ ಜೇನುತುಪ್ಪದ ಅಸಾಧಾರಣ ಗುಣಮಟ್ಟವನ್ನು ಉಲ್ಲೇಖಿಸಿ, ಅದರ ಹಿಂದೆ ಇರುವ ರೈತರ ಶ್ರಮವನ್ನು ಹಾಡಿಹೊಗಳಿದರು. ದ.ಕ. ಜಿಲ್ಲೆಯ ಪರಿಸರವು ಉತ್ತಮ ಗುಣಮಟ್ಟದ ಜೇನು ಉತ್ಪಾದನೆಗೆ ಹೇಳಿ ಮಾಡಿಸಿದಂತಿದೆ. ಈ ಸಾಮರ್ಥ್ಯವನ್ನು ಗುರುತಿಸಿ, ಗ್ರಾಮಜನ್ಯ ಎಂಬ ಸಂಸ್ಥೆಯು ಜೇನನ್ನು ಬ್ರಾಂಡ್ ಮಾಡಿ ನಗರ ಮಾರುಕಟ್ಟೆಗೆ ತಲುಪಿಸುತ್ತಿದ್ದು, ಇದರಿಂದ ರೈತರಿಗೆ ಭಾರಿ

ಹಿರಿಯ ನಟ ಎಂ.ಎಸ್.ಉಮೇಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್  ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ. ಚಿಕಿತ್ಸೆ ಫಲಕಾರಿ ಆಗದೇ

ಡಿ. 20 ರಂದು ಜಾಗತಿಕ ಅಲ್ಯುಮ್ನಿ ಮೀಟ್ “Nitte Nexus 2025”-ಬೆಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆ

WENAMITAA (NMAMIT Alumni Association) ಮತ್ತು ನಿಟ್ಟೆ ಮಹಾಲಿಂಗ ಅಡಿಯಂತಾಯ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NMAMIT), ನಿಟ್ಟೆ — ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಅಲ್ಯುಮ್ನಿ ಮೀಟ್ “Nitte Nexus 2025” ಅನ್ನು 20 ಡಿಸೆಂಬರ್ 2025 ರಂದು, ಸಂಜೆ 4 ಗಂಟೆಯಿಂದ ಆರಂಭವಾಗಿ, ಮುಲ್ಕಿ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಪೂರ್ವಸಭೆಯನ್ನು ಇಂದು ಬೆಂಗಳೂರಿನ ರಿಚ್ಮಂಡ್ ಸರ್ಕಲ್‌ನ ಹೋಟೆಲ್

ನ್ಯಾಯಾಲಯದಲ್ಲಿ ಅರೆ ಕಾನೂನು ಸ್ವಯಂ ಸೇವಕರ (Para Legal Volunteers) ಆಯ್ಕೆಗೆ ಅರ್ಜಿಯ ಕೊನೆಯ ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿ ಸುಳ್ಯ ಇವರ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಕರು / ನಿವೃತ್ತ ಶಿಕ್ಷಕರು, ವಿವಿಧ ಇಲಾಖೆಯ ನಿವೃತ್ತ ಸರ್ಕಾರಿ