Home Archive by category ರಾಜ್ಯ (Page 71)

ವೀಕೆಂಡ್ ಕರ್ಫ್ಯೂ ಮಾರ್ಗಸೂಚಿ ರಿಲೀಸ್: ಮಧ್ಯಾಹ್ನ 2ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

 ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 16 ರವರೆಗೂ ಮಾರ್ಗಸೂಚಿ ಜಾರಿಯಲ್ಲಿರಲಿವೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಶುಕ್ರವಾರ ರಾತ್ರಿ

ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ : ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ,ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬರಲಿದ್ದು, ಶನಿವಾರ ಮತ್ತು ಭಾನುವಾರ ಈ ನಾಲ್ಕು ಜಿಲ್ಲೆಗಳಲ್ಲಿ ಅಗತ್ಯ ವಸ್ತು ಮತ್ತು ಸೇವೆಗಳ ಹೊರತುಪಡಿಸಿ ಇತರ ಎಲ್ಲಾ

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ: ಸಿಎಂ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ

ಪ್ರಮಾಣ ವಚನ ಸ್ವೀಕಾರವನ್ನು ಟಿವಿಯಲ್ಲಿಯೇ ನೋಡಿ ಸಂಭ್ರಮಿಸಿದ ಕೋಟ ಕುಟುಂಬಿಕರು

  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಸ್ಥಾನ ಪಡೆದುಕೊಂಡ ಕೋಟ ಶ್ರೀನಿವಾಸ ಪೂಜಾರಿಯವರ ಹುಟ್ಟೂರಾದ ಕೋಟದ ಮನೆಯಲ್ಲಿ ಕುಟುಂಬಿಕರು ಸರಳವಾಗಿ ಸಂಭ್ರಮಿಸಿದರು. ಶ್ರೀನಿವಾಸ ಪೂಜಾರಿಯವರ ಸಚಿವರಾಗುವ ಪ್ರಮಾಣವಚನಕ್ಕೆ ಬೆಂಗಳೂರಿಗೆ ತೆರಳಿದ್ದರೂ ಕೂಡ ಪತ್ನಿ ಶಾಂತಾ ಅವರು ಮನೆಯಲ್ಲಿ ತಮ್ಮ ದೈನಂದಿನ ಕೆಲಸದಲ್ಲಿಯೇ ಮಗ್ನರಾಗಿದ್ದರು. ಕಾರ್ಯಕರ್ತರ ಸದ್ದು ಗದ್ದಲವಿದಲ್ಲದೆ ಕೋಟ ಅವರ ಮನೆ ಸಂಪೂರ್ಣ ಶಾಂತವಾಗಿತ್ತು. ಸಚಿವರಾಗಿ ಪ್ರಮಾಣ ವಚನ

ಕರಾವಳಿಯ ಮೂವರಿಗೆ ಸಚಿವ ಸ್ಥಾನ

ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ29 ಶಾಸಕರು ಸೇರ್ಪಡೆಗೊಂಡಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ, ಡಾ. ಅಶ್ವಥ ನಾರಾಯಣ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟಾ

ನೂತನ ಸಚಿವರ ಅಂತಿಮ ಪಟ್ಟಿ ಬಿಡುಗಡೆ

ಇಂದು ಪ್ರಮಾಣವಚನ ಸ್ವೀಕರಿಸಲಿರುವ ನೂತನ 29 ಮಂದಿ ಶಾಸಕರ ಅಧಿಕೃತ ಪಟ್ಟಿ ಬಿಡುಗಡೆಗೊಂಡಿದೆ. 1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ 2.ಆರ್.ಅಶೋಕ್- ಪದ್ಮನಾಭ ನಗರ 3.ಬಿ.ಸಿ ಪಾಟೀಲ್ – ಹಿರೇಕೇರೂರು 4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ 5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು 6.ಉಮೇಶ್ ಕತ್ತಿ- ಹುಕ್ಕೇರಿ 7.ಎಸ್.ಟಿ.ಸೋಮಶೇಖರ್- ಯಶವಂತಪುರ 8.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ 9.ಬೈರತಿ‌ ಬಸವರಾಜ – ಕೆ ಆರ್ ಪುರಂ

ಕಾರವಾರ: ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಕಾರವಾರ ಜಿಲ್ಲೆಯ ಕದ್ರಾ ಅಣೆಕಟ್ಟು ಪ್ರದೇಶಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಮಾಜಿ ಶಾಸಕ ಸತೀಶ್ ಸೈಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಭೀಮಣ್ಣ ನಾಯಕ್ ಹಾಜರಿದ್ದರು.    

ಕೋವಿಡ್ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವ ಕೆಲಸವಾಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಕೊರೊನಾ ಮೂರನೆ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು.ಅಕ್ಕ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಮೂರನೆ ಅಲೆ ಈಗಾಗಲೇ ಬಂದಿದ್ದು ಸೋಂಕು ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಪ್ರಮಾಣ ಹೆಚ್ಚಾಗಿರುತ್ತದೆ ಹಾಗಾಗಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಕೇರಳದಿಂದ ರಾಜ್ಯದ ಕರಾವಳಿ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಹೆಚ್ಚು ಜನ ಬರುತ್ತಾರೆ, ರಾಜ್ಯದ ಗಡಿಗಳಲ್ಲಿ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಇಂದು ಬೆಂಗಳೂರಿನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ, ಹೆಚ್.ಡಿ.ರೇವಣ್ಣನವರು ಜೊತೆಗಿದ್ದರು.